ಧರ್ಮಸ್ಥಳ: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದಾಗಿ ಹೇಳಿದ್ದ ಮಾಸ್ಕ್‌ಮ್ಯಾನ್ ಚಿನ್ನಯ್ಯನ ಬಂಧನವಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ಒಂದೊಂದೇ ಸತ್ಯಗಳು ಹೊರಗೆ ಬರುತ್ತಿವೆ. ಬೆಂಬಲಕ್ಕೆ ನಿಂತ ಎಲ್ಲರಿಗೂ ಧನ್ಯವಾದಗಳು. ಈ ಬಗ್ಗೆ ನಾನು ಹೆಚ್ಚಿಗೆ ಏನನ್ನೂ ಮಾತನಾಡುವುದಿಲ್ಲ. ಎಸ್‌ಐಟಿ ತನಿಖೆ ಹಂತದಲ್ಲಿರುವುದರಿಂದ ಈ ಬಗ್ಗೆ ನಾನು ಮಾತನಾಡಲ್ಲ ಎಂದು ಹೇಳಿದರು.
ಇನ್ನು ಧರ್ಮಸ್ಥಳಕ್ಕೆ ಬಂದು ಬೆಂಬಲ ಸೂಚಿಸಿರುವ ಎಲ್ಲರಿಗೂ ಧನ್ಯವಾದಗಳು. ಈಗ ಒಂದೊಂದೇ ಸತ್ಯಗಳು ಹೊರಗೆ ಬರುತ್ತಾ ಇವೆ. ಸತ್ಯಗಳನ್ನು ತೊಳೆದು ಇಟ್ಟಂತಾಗಿದೆ.
ನಿಮ್ಮೆಲ್ಲರ ಪ್ರೀತಿ ವಿಶ್ವಾಸ ಹೀಗೆಯೇ ಇರಲಿ ಎಂದು ನಾನು ಆಶಿಸುತ್ತೇನೆ ಎಂದು ಹೇಳಿದರು.





