ಧರ್ಮಸ್ಥಳ: ಮೈಸೂರಿನ ಚಾಮರಾಜ ಕ್ಷೇತ್ರದ ಶಾಸಕ ಹರೀಶ್ ಗೌಡ ಅವರು ತಮ್ಮ ಕ್ಷೇತ್ರದ ಕಾರ್ಯಕರ್ತರೊಂದಿಗೆ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥಸ್ವಾಮಿಯ ದರ್ಶನ ಪಡೆದರು.
ಸುಮಾರು 30 ಬಸ್‌ಗಳು ಹಾಗೂ 40 ಕಾರುಗಳಲ್ಲಿ ಶಾಸಕ ಹರೀಶ್ ಗೌಡ ಅವರು ತಮ್ಮ ಬೆಂಬಲಿಗರೊಂದಿಗೆ ಧರ್ಮಸ್ಥಳ ಯಾತ್ರೆ ಕೈಗೊಂಡಿದ್ದರು. ಇಂದು ಬೆಳಿಗ್ಗೆ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದ ನಂತರ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದರು.
ಈ ವೇಳೆ ಶಾಸಕರು ಹಾಗೂ ಅವರ ಬೆಂಬಲಿಗರು ಧರ್ಮ ಉಳಿಸೋಣ, ನಿಮ್ಮ ಆಶೀರ್ವಾದ ನಮ್ಮ ಮೇಲಿರಲಿ ಎಂದು ಹೆಗ್ಗಡೆ ಅವರ ಬಳಿ ಮನವಿ ಮಾಡಿಕೊಂಡರು.





