ರಾಜ್ಯ

ಧರ್ಮಸ್ಥಳದಲ್ಲಿ ಗಲಾಟೆ ಪ್ರಕರಣ: 6 ಜನರ ಬಂಧನ

ಧರ್ಮಸ್ಥಳ: ಧರ್ಮಸ್ಥಳದ ಪಾಂಗಳ ಕ್ರಾಸ್‌ ಬಳಿ ಎರಡು ಗುಂಪುಗಳ ನಡುವೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಪದ್ಮನಾಭ್‌ ಪ್ರಸಾದ್‌, ಸುಹಾಸ್‌, ಗುರುಪ್ರಸಾದ್‌, ಶಶಿಕುಮಾರ್‌, ಕಲಂದರ್‌, ಚೇತನ್‌ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ.

ಮೂವರು ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆಸಿದ ಬಳಿಕ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿತ್ತು. ಆಗ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು.

ಜನರನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದರು. ಪೊಲೀಸರ ಅಧಿಕಾರಿ ನೀಡಿದ್ದ ದೂರಿನ ಮೇರೆಗೆ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಇದೀಗ ಆರು ಜನರನ್ನು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

1 hour ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

2 hours ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

2 hours ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

2 hours ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

2 hours ago