ರಾಜ್ಯ

ಧರ್ಮಸ್ಥಳ ಸರಣಿ ಹತ್ಯೆ ಪ್ರಕರಣ : ಎಸ್‌ಐಟಿ ಮುಂದೆ ದೂರುದಾರ ಹಾಜರು

ಬೆಂಗಳೂರು : ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗಿರುವ ಸರಣಿ ಕೊಲೆಗಳು, ಅತ್ಯಾಚಾರ ಕೃತ್ಯಗಳ ತನಿಖೆಯನ್ನು ಆರಂಭಿಸಿರುವ ವಿಶೇಷ ತನಿಖಾ ದಳ(ಎಸ್‌ಐಟಿ) ದೂರು ನೀಡಿರುವ ಅನಾಮೇಧಯ ವ್ಯಕ್ತಿಯನ್ನು ವಿಚಾರಣೆಗೊಳಪಡಿಸಿದ್ದು, ಸ್ಥಳ ಮಹಜರಿಗೆ ಸಿದ್ಧತೆ ಮಾಡಿಕೊಂಡಿದೆ.

ಧರ್ಮಸ್ಥಳ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಸಾವಿರಕ್ಕೂ ಹೆಚ್ಚು ಮಂದಿಯನ್ನು ಅದರಲ್ಲೂ ಹೆಣ್ಣು ಮಕ್ಕಳ, ಮಹಿಳೆಯರನ್ನು ಅತ್ಯಾಚಾರ, ಕೊಲೆ ಮಾಡಲಾಗಿದೆ ಎಂದು ಅಪರಿಚಿತ ವ್ಯಕ್ತಿಯೊಬ್ಬರು ದೂರು ನೀಡಿದ್ದು, ತಾವೇ ಹಲವಾರು ಮೃತದೇಹಗಳನ್ನು ಹೂತಿದ್ದು ಅವುಗಳನ್ನು ಹೊರತೆಗೆಯುತ್ತೇನೆಂದು ಹೇಳಿದ್ದಾರೆ.

ಎಸ್‍ಐಟಿ ಮುಖ್ಯಸ್ಥ ಅನುಚೇತ್ ಹಾಗು ಎಸ್ಪಿ ಜಿತೇಂದ್ರ ಕುಮಾರ್ ದಯಮಾ ನೇತೃತ್ವದಲ್ಲಿ ತನಿಖೆ ಆರಂಭಗೊಂಡಿದೆ. ವಕೀಲರ ಜೊತೆ ದೂರು ಕೊಟ್ಟ ಅನಾಮಿಕ ವಿಚಾರಣೆಗೆ ಹಾಜರಾಗಿದ್ದಾನೆ ಎನ್ನಲಾಗ್ತಿದೆ. ಅಧಿಕಾರಿಗಳು ಸಾಕ್ಷ್ಯ ದೂರು ದಾರನಿಗೆ ಬುರುಡೆ ಅಗೆದ ಜಾಗವನ್ನ ತೋರಿಸುವಂತೆ ನೋಟಿಸ್ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಸದ್ಯ ಅನಾಮಿಕ ಕೊಟ್ಟ ಬುರುಡೆ ಎಫ್ ಎಸ್ ಎಲ್ ಲ್ಯಾಬ್ ನಲ್ಲಿದೆ. ಆದರೆ ಈ ಬುರುಡೆ ಧರ್ಮಸ್ಥಳ ಗ್ರಾಮದಿಂದಲೇ ತೆಗೆದಿದ್ದ ಎಂಬ ಬಗ್ಗೆ ತನಿಖೆಗೆ ಎಸ್‍ಐಟಿ ಮುಂದಾಗಿದೆ. ಅನಾಮಿಕ ದೂರುದಾರನ ಮೂಲಕವೇ ಬುರುಡೆ ಅಗೆದ ಜಾಗದ ಪರಿಶೀಲನೆಗೆ ಅಧಿಕಾರಿಗಳು ಮುಂದಾಗಲಿದ್ದಾರೆ.

ಜಾಗದ ಪರಿಶೀಲನೆ ಬಳಿಕ ಆ ಜಾಗದ ಮಣ್ಣಿನ ಎಫ್‍ಎಸ್‍ಎಲ್ ಪರೀಕ್ಷೆ ಕೂಡ ನಡೆಯಲಿದೆ. ಅನಾಮಿಕ ಕೊಟ್ಟ ಬುರುಡೆಯಲ್ಲಿರೋ ಮಣ್ಣಿನ ಕಣ ಮತ್ತು ಧರ್ಮಸ್ಥಳ ಗ್ರಾಮದಲ್ಲಿ ಅನಾಮಿಕ ತೋರಿಸುವ ಜಾಗದ ಮಣ್ಣಿನ ಪರೀಕ್ಷೆ ನಡೆಯಲಿದ್ದು, ಎರಡೂ ಮಣ್ಣಿನ ಕಣಗಳನ್ನು ಮ್ಯಾಚ್ ಮಾಡಿ ನೋಡಿ ಬಳಿಕ ಬುರುಡೆ ಧರ್ಮಸ್ಥಳ ಗ್ರಾಮದಲ್ಲೇ ತೆಗೆದಿದ್ದ ಅನ್ನೋದನ್ನ ಖಚಿತ ಪಡಿಸಿಕೊಳ್ಳಲು ಎಸ್‍ಐಟಿ ಮುಂದಾಗಿದೆ. ಎಸ್ ಐ ಟಿ ಅಧಿಕಾರಿಗಳು ಅನಾಮಿಕನನ್ನು ವಿಚಾರಣೆಗೆ ಒಳಪಡಿಸಿದ್ದು, ನಾನಾ ಪ್ರಶ್ನೆಗಳಿಗೆ ಉತ್ತರ ಪಡೆಯುತ್ತಿದ್ದಾರೆ. ಅನಾಮಿಕ ಹೇಳಿಕೆಯನ್ನ ಇನ್ ಕ್ಯಾಮೆರಾದಲ್ಲಿ ದಾಖಿಸಲಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹುಣಸೂರು: ರೈಲ್ವೆ ಹಳಿ ತಡೆಗೋಡೆಗೆ ಸಿಲುಕಿ ಒದ್ದಾಡಿದ ಕಾಡಾನೆ

ಹುಣಸೂರು: ರೈಲ್ವೆ ಹಳಿ ತಡೆಗೋಡೆಗೆ ಸಿಲುಕಿ ಕಾಡಾನೆಯೊಂದು ಕೆಲಕಾಲ ಒದ್ದಾಟ ನಡೆಸಿದ ಘಟನೆ ತಾಲ್ಲೂಕಿನ ಉಡುವೆಪುರ ಬಳಿ ನಡೆದಿದೆ. ನಾಗರಹೊಳೆ…

12 mins ago

ಮೈಸೂರು ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿದಿದ್ದು, ಭಾರೀ ಪ್ರಮಾಣದ ಹಾನಿಯಾಗಿದೆ. ಮೈಸೂರು ಜಿಲ್ಲೆಯಲ್ಲಿ ನಿನ್ನೆ ಸುರಿದ ಭಾರೀ ಮಳೆಯಿಂದಾಗಿ…

31 mins ago

ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ: ಹಳ್ಳಿಗಳಲ್ಲಿ ಹೊನ್ನೇರು ಕಟ್ಟಿ ಸಂಭ್ರಮಿಸಿದ ಅನ್ನದಾತರು

ಮೈಸೂರು: ರೈತರು ಸಡಗರದಿಂದ ಕೃಷಿ ಚಟುವಟಿಕೆ ಆರಂಭಿಸುವ ಮೊದಲ ಹೆಜ್ಜೆ ಯುಗಾದಿಯಾಗಿದ್ದು, ಜಿಲ್ಲೆಯ ಹಲವೆಡೆ ಅನ್ನದಾತರು ಹೊನ್ನೇರು ಕಟ್ಟಿ ಭೂಮಿ…

47 mins ago

ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ

ಮೈಸೂರು: ಇಂದು ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದೆ. ಬೆಲೆ ಏರಿಕೆ, ಮಧ್ಯಪ್ರಾಚ್ಯ ಯುದ್ಧ ಭೀತಿಯ ನಡುವೆಯೂ ಜನರು ಸಾಂಪ್ರದಾಯಿಕವಾಗಿ…

57 mins ago

ಓದುಗರ ಪತ್ರ: ಮೈಸೂರಿನಲ್ಲಿ ಸುಸಜ್ಜಿತ ಫುಡ್ ಸ್ಟ್ರೀಟ್ ನಿರ್ಮಾಣವಾಗಲಿ

ಸಾಂಸ್ಕೃತಿಕ ನಗರಿ ಮೈಸೂರು ಆಹಾರ ಪ್ರಿಯರ ಸ್ವರ್ಗವೂ ಹೌದು. ಮೈಸೂರು ಪಾಕ್‌ನಿಂದ ಹಿಡಿದು ಮೈಲಾರಿ ದೋಸೆಯವರೆಗೆ ಇಲ್ಲಿನ ರುಚಿ ಪ್ರಸಿದ್ಧವಾಗಿದೆ.…

1 hour ago

ಓದುಗರ ಪತ್ರ: ಗೀತೆ ರಚನಾಕಾರರ ವಿರುದ್ಧ ಸುಮೊಟೊ ಕೇಸ್ ದಾಖಲಿಸಿ

ಪ್ರೇಮ್ ನಿರ್ದೇಶನದ ಕನ್ನಡ ಕೆಡಿ ಚಿತ್ರದ ಸರ್ಸೆ ನಿನ್ನ ಸೆರಗ ಸರ್ಸೆ.. ಎಂಬ ಗೀತೆ ದ್ವಂದ್ವಾರ್ಥದ ಕೀಳು ಅಭಿರುಚಿಯ ಹಾಡು…

1 hour ago