ಮಂಗಳೂರು : ಧರ್ಮಸ್ಥಳದಲ್ಲಿ ನೂರಾರು ಶವ ಹೂತಿದ್ದಾಗಿ ಸಾಕ್ಷಿ ದೂರುದಾರ ಹೇಳಿಕೆ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ (ಎಸ್‌ಐಟಿ) ತನಿಖೆಯನ್ನು ತೀವ್ರಗೊಳಿಸಿದೆ.
ಮೃತದೇಹಗಳ ಅವಶೇಷ ಪತ್ತೆಗಾಗಿ ನಡೆಯುತ್ತಿರುವ ಶೋಧ ಕಾರ್ಯಾಚರಣೆ ಮಂಗಳವಾರ 7ನೇ ದಿನಕ್ಕೆ ಕಾಲಿಟ್ಟಿತು. ನೇತ್ರಾವತಿ ಸ್ನಾನಘಟ್ಟದ ಬಳಿಯ ಕಾಡಿನಲ್ಲಿ ಸಾಕ್ಷಿ ದೂರುದಾರ ಈ ಹಿಂದೆ ಗುರುತಿಸಿದ್ದ 11ನೇ ಸ್ಥಳದಲ್ಲಿ ಎಸ್‌ಐಟಿ ಶೋಧ ಕಾರ್ಯ ನಡೆಸಿತು. ಈ ಹಿಂದೆ ತೋರಿಸಿದ್ದ 11ನೇ ಜಾಗಕ್ಕಿಂತ ಮುಂದಕ್ಕೆ ಕಾಡಿನೊಳಗೆ ಎಸ್‌ಐಟಿ ಅಧಿಕಾರಿಗಳನ್ನು ಕರೆದೊಯ್ದಿದ್ದು, ಅಲ್ಲಿ ನೆಲದ ಮೇಲೆಯೇ ಅಸ್ಥಿಪಂಜರದ ಅವಶೇಷಗಳು ಸಿಕ್ಕಿವೆ ಎಂದು ತಿಳಿದುಬಂದಿದೆ.
ಈ ಅಸ್ಥಿಪಂಜರಗಳನ್ನು ತಜ್ಞರ ತಂಡ ವೈಜ್ಞಾನಿಕವಾಗಿ ಸಂಗ್ರಹ ಮಾಡಿದ್ದು, ಅದನ್ನು ಮಣಿಪಾಲದ ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯಕ್ಕೆ (ಎಫ್‌ಎಸ್‌ಎಲ್) ವಿಧಿವಿಜ್ಞಾನ ವಿಶ್ಲೇಷಣೆಗಾಗಿ ಕಳುಹಿಸಲಾಗಿದೆ. ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಹೆಣಗಳನ್ನು ಹೂತು ಹಾಕಿದ್ದೇನೆ ಎಂದು ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜು.4ರಂದು ಪ್ರಕರಣ ದಾಖಲಾದ ಬಳಿಕ ಈ ವಿಚಾರ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಜುಲೈ 19 ರಂದು ಪ್ರಕರಣದ ತನಿಖೆಗಾಗಿ ಎಸ್‌ಐಟಿಯನ್ನು ರಚಿಸಿತ್ತು.
ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…
ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…
ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…
ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…
ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…
ಹನೂರು : ಪಟ್ಟಣದಲ್ಲಿ ನಡೆಯಲಿರುವ ಶ್ರೀ ಬೆಟ್ಟಳ್ಳಿ ಮಾರಮ್ಮನ ಜಾತ್ರೆಯ ಪ್ರಯುಕ್ತ ಮುಂಜಾಗ್ರತಾ ಕ್ರಮವಾಗಿ ಎರಡು ದಿನಗಳ ಕಾಲ ಹನೂರು…