ರಾಜ್ಯ

ಧರ್ಮಸ್ಥಳ | 7ನೇ ದಿನಕ್ಕೆ ಕಾಲಿಟ್ಟ ಎಸ್‌ಐಟಿ ತನಿಖೆ

ಮಂಗಳೂರು : ಧರ್ಮಸ್ಥಳದಲ್ಲಿ ನೂರಾರು ಶವ ಹೂತಿದ್ದಾಗಿ ಸಾಕ್ಷಿ ದೂರುದಾರ ಹೇಳಿಕೆ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ (ಎಸ್‌ಐಟಿ) ತನಿಖೆಯನ್ನು ತೀವ್ರಗೊಳಿಸಿದೆ.

ಮೃತದೇಹಗಳ ಅವಶೇಷ ಪತ್ತೆಗಾಗಿ ನಡೆಯುತ್ತಿರುವ ಶೋಧ ಕಾರ್ಯಾಚರಣೆ ಮಂಗಳವಾರ 7ನೇ ದಿನಕ್ಕೆ ಕಾಲಿಟ್ಟಿತು. ನೇತ್ರಾವತಿ ಸ್ನಾನಘಟ್ಟದ ಬಳಿಯ ಕಾಡಿನಲ್ಲಿ ಸಾಕ್ಷಿ ದೂರುದಾರ ಈ ಹಿಂದೆ ಗುರುತಿಸಿದ್ದ 11ನೇ ಸ್ಥಳದಲ್ಲಿ ಎಸ್‌ಐಟಿ ಶೋಧ ಕಾರ್ಯ ನಡೆಸಿತು. ಈ ಹಿಂದೆ ತೋರಿಸಿದ್ದ 11ನೇ ಜಾಗಕ್ಕಿಂತ ಮುಂದಕ್ಕೆ ಕಾಡಿನೊಳಗೆ ಎಸ್‌ಐಟಿ ಅಧಿಕಾರಿಗಳನ್ನು ಕರೆದೊಯ್ದಿದ್ದು, ಅಲ್ಲಿ ನೆಲದ ಮೇಲೆಯೇ ಅಸ್ಥಿಪಂಜರದ ಅವಶೇಷಗಳು ಸಿಕ್ಕಿವೆ ಎಂದು ತಿಳಿದುಬಂದಿದೆ.

ಈ ಅಸ್ಥಿಪಂಜರಗಳನ್ನು ತಜ್ಞರ ತಂಡ ವೈಜ್ಞಾನಿಕವಾಗಿ ಸಂಗ್ರಹ ಮಾಡಿದ್ದು, ಅದನ್ನು ಮಣಿಪಾಲದ ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯಕ್ಕೆ (ಎಫ್‌ಎಸ್‌ಎಲ್) ವಿಧಿವಿಜ್ಞಾನ ವಿಶ್ಲೇಷಣೆಗಾಗಿ ಕಳುಹಿಸಲಾಗಿದೆ. ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಹೆಣಗಳನ್ನು ಹೂತು ಹಾಕಿದ್ದೇನೆ ಎಂದು ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜು.4ರಂದು ಪ್ರಕರಣ ದಾಖಲಾದ ಬಳಿಕ ಈ ವಿಚಾರ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಜುಲೈ 19 ರಂದು ಪ್ರಕರಣದ ತನಿಖೆಗಾಗಿ ಎಸ್‌ಐಟಿಯನ್ನು ರಚಿಸಿತ್ತು.

ಆಂದೋಲನ ಡೆಸ್ಕ್

Recent Posts

2028ಕ್ಕೂ ಡಿಕೆಶಿ ಸಿಎಂ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ: ಸತೀಶ್ ಜಾರಕಿಹೊಳಿ

ಮೈಸೂರು: 2028ರಲ್ಲೂ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ. ಅವರ ನೇತೃತ್ವದಲ್ಲೇ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಸತೀಶ್…

44 mins ago

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

7 hours ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

7 hours ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

7 hours ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

7 hours ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

7 hours ago