ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ.
ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು ವರ್ಷಗಳಿಂದ ಚರ್ಚೆಯಲ್ಲಿರುವ ಸೌಜನ್ಯ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ.
ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ನಡೆದ ತನಿಖೆ ಹಾಗೂ ಪ್ರಕರಣದ ವಿವಿಧ ಬೆಳವಣಿಗೆಗಳ ಕುರಿತು ಹಲವು ಪ್ರಶ್ನೆಗಳು ಹಾಗೂ ಅನುಮಾನಗಳು ವ್ಯಕ್ತವಾಗಿದ್ದವು.
ಇದೀಗ ಪ್ರಕರಣದ ಸತ್ಯಾಸತ್ಯತೆ ಮತ್ತೊಮ್ಮೆ ಹೊರಬರಬೇಕೆಂಬ ನಿಟ್ಟಿನಲ್ಲಿ ಮರು ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ ನೀಡಿರುವುದು ಮಹತ್ವದ ಬೆಳವಣಿಗೆಯಾಗಿದೆ.
ಈ ಆದೇಶದ ಬೆನ್ನಲ್ಲೇ ಪ್ರಕರಣದಲ್ಲಿ ಹೊಸ ತನಿಖೆ ಹೇಗೆ ನಡೆಯಲಿದೆ?
ಯಾವ ತನಿಖಾ ಸಂಸ್ಥೆ ತನಿಖೆ ನಡೆಸಲಿದೆ?
ಈ ಹಿಂದೆ ನಡೆದ ತನಿಖೆಯಲ್ಲಿ ಏನಾದರೂ ಲೋಪವಾಗಿದೆಯೇ?
ಮರು ತನಿಖೆಯಿಂದ ಪ್ರಕರಣಕ್ಕೆ ಹೊಸ ತಿರುವು ಸಿಗಲಿದೆಯೇ ಎಂಬ ಪ್ರಶ್ನೆಗಳು ಇದೀಗ ಮುನ್ನೆಲೆಗೆ ಬಂದಿವೆ.
ವರ್ಷಗಳಿಂದ ಸೌಜನ್ಯ ಪ್ರಕರಣದಲ್ಲಿ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿರುವ ಕುಟುಂಬಸ್ಥರು ಹಾಗೂ ಹೋರಾಟಗಾರರಲ್ಲಿ ಸುಪ್ರೀಂ ಕೋರ್ಟ್ ಆದೇಶ ಹೊಸ ನಿರೀಕ್ಷೆ ಮೂಡಿಸಿದೆ.
ಮರು ತನಿಖೆಯ ಮೂಲಕ ಪ್ರಕರಣದ ಸಂಪೂರ್ಣ ಸತ್ಯ ಹೊರಬರಬೇಕು ಮತ್ತು ತಪ್ಪಿತಸ್ಥರು ಯಾರು ಎಂಬುದು ಬಹಿರಂಗವಾಗಬೇಕು ಎಂಬುದು ಸೌಜನ್ಯ ಕುಟುಂಬಸ್ಥರು ಹಾಗೂ ಬೆಂಬಲಿಗರ ಪ್ರಮುಖ ಆಶಯವಾಗಿದೆ.
ಬೆಂಗಳೂರು: “ಗಾಳಿ, ನೀರಿನಲ್ಲಿ ಬಸ್ ಓಡಿಸೋಕೆ ಆಗಲ್ಲ!” ಎಂದು ಹೇಳುವ ಮೂಲಕ ಬಸ್ ಟಿಕೆಟ್ ದರ ಏರಿಕೆಯನ್ನು ಸಚಿವ ಪ್ರಿಯಾಂಕ್…
ಮಂಡ್ಯ: ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ ನವೆಂಬರ್‌ನಲ್ಲೇ 99 ಅಡಿಗೆ ಇಳಿದಿದ್ದು, ಮುಂದಿನ ಬೇಸಿಗೆಯಲ್ಲಿ ಕುಡಿಯುವ ನೀರಿನ ಕೊರತೆ ಎದುರಾಗುವ…
ಬೆಂಗಳೂರು: ರೈತರಿಗೆ ದೀಪಾವಳಿ ಹೊತ್ತಿನಲ್ಲಿ ಪರಿಹಾರದ ಸಿಹಿ ಸುದ್ದಿ. ಈ ಹಿಂದೆ ₹2,500 ಇದ್ದ ಬರ ಪರಿಹಾರವನ್ನು ಒಟ್ಟು ₹5,000ಕ್ಕೆ…
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎನ್ನಲಾದ ವಿಡಿಯೋ ವೈರಲ್ ಪ್ರಕರಣದಲ್ಲಿ ನಟ ಧನ್ವೀರ್‌ಗೆ ಮತ್ತಷ್ಟು ಸಂಕಷ್ಟ…
ಚಿಕ್ಕಮಗಳೂರು: ಕಾಫಿನಾಡಿನ ಶಕ್ತಿದೇವತೆ ಬಿಂಡಿಗ ದೇವೀರಮ್ಮನ ದರ್ಶನಕ್ಕೆ ತೆರಳುವ ಭಕ್ತರೇ ಗಮನಿಸಿ… ಈ ಬಾರಿಯ ಜಾತ್ರಾ ಮಹೋತ್ಸವಕ್ಕೆ ಹೊಸ ನಿಯಮಗಳನ್ನು ಜಾರಿಗೆ…
ಕಟ್ಟಡ ನಿರ್ಮಾಣ ಕಾರ್ಮಿಕರು ದಿನ ನಿತ್ಯ ಕೂಲಿ ಕೆಲಸಕ್ಕಾಗಿ ೫೦ರಿಂದ ೮೦ ಕಿ.ಮೀ. ಪ್ರಯಾಣ ಮಾಡುತ್ತಾರೆ. ಬಹುತೇಕ ಕಾರ್ಮಿಕರ ಬಳಿ…