ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ಜೈಲು ಸೇರಿದೆ. ಈ ಹೈ ಪ್ರೊಫೈಲ್ ಕೇಸ್‌ನ ತನಿಖೆ ಶರವೇಗದಲ್ಲಿ ನಡೆಯುತ್ತಿದೆ.
ಕನ್ನಡ ಚಿತ್ರರಂಗವು ಮೃತ ರೇಣುಕಾಸ್ವಾಮಿ ಕುಟುಂಬದ ಬೆಂಬಲಕ್ಕೆ ನಿಂತಿದೆ. ಸದ್ಯ ಈ ಬಗ್ಗೆ ಗಾಂಧಿನಗರದಲ್ಲಿ ಸಾಕಷ್ಟು ಚರ್ಚೆಯಾಗುತ್ತಿರುವಾಗಲೇ, ರೇಣುಕಾಸ್ವಾಮಿ ಕುಟುಂಬದ ಬೆಂಬಲಕ್ಕೆ ಸ್ಯಾಂಡಲ್‌ವುಡ್ ಆಕ್ಷನ್‌ಪ್ರಿನ್ಸ್ ಧ್ರುವ ಸರ್ಜಾ ಅಭಿಮಾನಿಗಳು ನಿಂತಿದ್ದಾರೆ.
ಧ್ರುವ ಸರ್ಜಾ ಅಭಿಮಾನಿ ಸಂಘದ ಅಧ್ಯಕ್ಷ ಮಹಾನ್ ಹಾಗೂ ತಂಡ ಬುಧವಾರ(ಜೂ. 26) ಚಿತ್ರದುರ್ಗದ ರೇಣುಕಾಸ್ವಾಮಿ ಮನೆಗೆ ಭೇಟಿ ನೀಡಿದೆ. ಈ ವೇಳೆ ನಟ ಧ್ರುವ ಸರ್ಜಾ ದೂರವಾಣಿ ಮೂಲಕ ರೇಣುಕಾಸ್ವಾಮಿ ಕುಟುಂಬಸ್ಥರ ಜೊತೆ ಮಾತನಾಡಿ ಸಾಂತ್ವನ ಹೇಳಿದ್ದಾರೆ.
ರೇಣುಕಾಸ್ವಾಮಿ ಕುಟುಂಬದವರ ಜೊತೆ ಮಾತನಾಡಿದ ನಟ ಧ್ರುವ ಸರ್ಜಾ, ನಿಮ್ಮೊಂದಿಗೆ ಸದಾ ನಾವು ಇದ್ದೀವಿ. ಏನೇ ಇದ್ದರೂ ನಮಗೆ ತಿಳಿಸಿ ಎಂದು ಮನವಿ ಮಾಡಿದ್ದಾರೆ. ಈ ವೇಳೆ ಮಗನ ಸಾವಿನಲ್ಲಿ ದಿನದೂಡುತ್ತಿರುವ ರೇಣಕುಸ್ವಾಮಿ ಕುಟುಬಂಕ್ಕೆ ಧ್ರುವಸರ್ಜಾ ಅಭಿಮಾನಿಗಳು ಧನಸಹಾಯ ಮಾಡಿದ್ದಾರೆ.
ಬೆಂಗಳೂರು : ಕೊಡಗು ಜಿಲ್ಲೆಯ ತಡಿಯಾಂಡಮೋಳ್ ಶಿಖರಕ್ಕೆ ಕೇರಳದಿಂದ ಚಾರಣಕ್ಕಾಗಿ ಬಂದು ಏಪ್ರಿಲ್ 2 ರಂದು ನಾಪತ್ತೆಯಾಗಿದ್ದ ಜಿ.ಎಸ್. ಶರಣ್ಯ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾಕುಮಾರಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಈವರೆಗೆ…
ಮೈಸೂರು : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಏ.9ರವರೆಗೆ ಯಲ್ಲೋ…
ದಾವಣಗೆರೆ : ಕಾಂತರಾಜು ವರದಿ ಈಗ ನಿಮ್ಮ ಬಳಿಯೇ ಇದೆ. ಜಯಪ್ರಕಾಶ ಹೆಗಡೆ ಅವರ ವರದಿಯು ಸ್ವೀಕರಿಸಿದ್ದೀರಿ. ಎರಡು ವರದಿಗಳನ್ನು…
ದಾವಣಗೆರೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ…
ಮಡಿಕೇರಿ : ಮಡಿಕೇರಿಯ ತಡಿಯಂಡಮೋಳ್ ಬೆಟ್ಟದಲ್ಲಿ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯ ಕೊನೆಗೂ ಪತ್ತೆ…