ಬೆಂಗಳೂರು : ಭರ್ಜರಿ ಪ್ರದರ್ಶನ ಕಾಣುತ್ತಿರು ಧುರಂಧರ್ 2 ಸಿನಿಮಾ ನಿರಾಸೆ ಮೂಡಿಸಿದ್ದು, ಚಿತ್ರಮಂದಿರಕ್ಕೆ ಹೋಗಿ ನಿಮ್ಮ ಸಮಯ ಮತ್ತು ಹಣ ವ್ಯರ್ಥ ಮಾಡಿಕೊಳ್ಳಬೇಡಿ ಎಂದು ನಟಿ ರಮ್ಯಾ ಸಲಹೆ ನೀಡಿದ್ದಾರೆ.
ಮಾರ್ಚ್ 19ರಂದು ಬಿಡುಗಡೆಯಾದ ಈ ಚಿತ್ರವು ಮೊದಲ ದಿನವೇ ಶತಕೋಟಿ ಕಲೆಕ್ಷನ್ ಮಾಡಿ ಬಾಕ್ಸ್ ಆಫೀಸ್‌ನಲ್ಲಿ ಯಶಸ್ವಿಯಾಗುತ್ತಿದ್ದರೂ, ರಮ್ಯಾ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ “ಭಾರಿ ನಿರಾಶೆ” ಎಂದು ಕರೆದಿದ್ದಾರೆ.
ಚಿತ್ರವು ಎಂದಿಗೂ ಮುಗಿಯದ ಅಧ್ಯಾಯನಗಳನ್ನು ಹೊಂದಿರುವ ಅತ್ಯಂತ ನೀರಸ ವಿಷಯದ ಪಠ್ಯಪುಸ್ತಕ ಓದುವಂತಿದೆ. ಧುರಂಧರ್ ಭಾಗ ಒಂದರಲ್ಲಿ ಜನರು ಕೂಗೂತ್ತಿದ್ದರು, ಚಪ್ಪಾಳೆ ತಟ್ಟುತ್ತಿದ್ದರು, ಕಂಪಿಸುವ ಶಕ್ತಿ ಇತ್ತು, ತೊಡಗಿಸಿಕೊಳ್ಳುವಿಕೆ ಇತ್ತು. ಆದರೆ ಇಲ್ಲಿ ಅದಿಲ್ಲ. ಚಿತ್ರಮಂದಿರದಲ್ಲಿ ಸಾಮೂಹಿಕ ನಿರಾಶೆಯನ್ನು ನೀವು ಅನುಭವಿಸಬಹುದು ಎಂದು ಪೋಸ್ಟ್ ಮಾಡಿದ್ದಾರೆ.
ಆದಿತ್ಯ ಧರ್ ಆಕ್ಷನ್ ಕಟ್, ರಣವೀರ್ ಸಿಂಗ್ ನಟನೆಯ ʻದುರಂಧರ್ 2’ ಸಿನಿಮಾ ವಿಶ್ವದಾದ್ಯಂತ ಸೌಂಡ್ ಮಾಡುತ್ತಿದೆ. ಮೊದಲನೇ ದಿನವೇ ವಿಶ್ವಾದ್ಯಂತ ಸಿನಿಮಾ 240 ಕೋಟಿ ರೂಪಾಯಿ ಗಳಿಸಿದೆ. ದಾಖಲೆ ಮೇಲೆ ದಾಖಲೆ ಬರೆಯುತ್ತಿರುವ ಈ ಸಿನಿಮಾ ಮೊದಲ ದಿನದ ಪೇಯ್ಡ್ ಪ್ರಿವ್ಯೂಗಳಲ್ಲೇ ಸುಮಾರು 50 ಕೋಟಿಗೂ ಅಧಿಕ ಗಳಿಕೆ ಕಂಡಿದೆ. ಬೇರೆ ಭಾಷೆಗಳಿಗೆ ಡಬ್ ಆಗಿದ್ದರೂ ಕೂಡ, ʻದುರಂಧರ್ 2’ ಸಿನಿಮಾವನ್ನ ಹೆಚ್ಚಿನ ಪ್ರೇಕ್ಷಕರು ಮೂಲ ಹಿಂದಿ ಆವೃತ್ತಿಯಲ್ಲೇ ನೋಡಲು ಒಲವು ತೋರುತ್ತಿದ್ದಾರೆ.
ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…
ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…
ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…
ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…
ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…
ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…