ರಾಜ್ಯ

ಧುರಂಧರ್-‌2 ನಿರಾಶೆ ಮೂಡಿಸಿದೆ : ರಮ್ಯಾ ಪೋಸ್ಟ್‌

ಬೆಂಗಳೂರು : ಭರ್ಜರಿ ಪ್ರದರ್ಶನ ಕಾಣುತ್ತಿರು ಧುರಂಧರ್‌ 2 ಸಿನಿಮಾ ನಿರಾಸೆ ಮೂಡಿಸಿದ್ದು, ಚಿತ್ರಮಂದಿರಕ್ಕೆ ಹೋಗಿ ನಿಮ್ಮ ಸಮಯ ಮತ್ತು ಹಣ ವ್ಯರ್ಥ ಮಾಡಿಕೊಳ್ಳಬೇಡಿ ಎಂದು ನಟಿ ರಮ್ಯಾ ಸಲಹೆ ನೀಡಿದ್ದಾರೆ.

ಮಾರ್ಚ್ 19ರಂದು ಬಿಡುಗಡೆಯಾದ ಈ ಚಿತ್ರವು ಮೊದಲ ದಿನವೇ ಶತಕೋಟಿ ಕಲೆಕ್ಷನ್ ಮಾಡಿ ಬಾಕ್ಸ್ ಆಫೀಸ್‌ನಲ್ಲಿ ಯಶಸ್ವಿಯಾಗುತ್ತಿದ್ದರೂ, ರಮ್ಯಾ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ “ಭಾರಿ ನಿರಾಶೆ” ಎಂದು ಕರೆದಿದ್ದಾರೆ.

ಚಿತ್ರವು ಎಂದಿಗೂ ಮುಗಿಯದ ಅಧ್ಯಾಯನಗಳನ್ನು ಹೊಂದಿರುವ ಅತ್ಯಂತ ನೀರಸ ವಿಷಯದ ಪಠ್ಯಪುಸ್ತಕ ಓದುವಂತಿದೆ. ಧುರಂಧರ್‌ ಭಾಗ ಒಂದರಲ್ಲಿ ಜನರು ಕೂಗೂತ್ತಿದ್ದರು, ಚಪ್ಪಾಳೆ ತಟ್ಟುತ್ತಿದ್ದರು, ಕಂಪಿಸುವ ಶಕ್ತಿ ಇತ್ತು, ತೊಡಗಿಸಿಕೊಳ್ಳುವಿಕೆ ಇತ್ತು. ಆದರೆ ಇಲ್ಲಿ ಅದಿಲ್ಲ. ಚಿತ್ರಮಂದಿರದಲ್ಲಿ ಸಾಮೂಹಿಕ ನಿರಾಶೆಯನ್ನು ನೀವು ಅನುಭವಿಸಬಹುದು ಎಂದು ಪೋಸ್ಟ್‌ ಮಾಡಿದ್ದಾರೆ.

ಆದಿತ್ಯ ಧರ್‌ ಆಕ್ಷನ್‌ ಕಟ್‌, ರಣವೀರ್‌ ಸಿಂಗ್‌ ನಟನೆಯ ʻದುರಂಧರ್‌ 2’ ಸಿನಿಮಾ ವಿಶ್ವದಾದ್ಯಂತ ಸೌಂಡ್‌ ಮಾಡುತ್ತಿದೆ. ಮೊದಲನೇ ದಿನವೇ ವಿಶ್ವಾದ್ಯಂತ ಸಿನಿಮಾ 240 ಕೋಟಿ ರೂಪಾಯಿ ಗಳಿಸಿದೆ. ದಾಖಲೆ ಮೇಲೆ ದಾಖಲೆ ಬರೆಯುತ್ತಿರುವ ಈ ಸಿನಿಮಾ ಮೊದಲ ದಿನದ ಪೇಯ್ಡ್‌ ಪ್ರಿವ್ಯೂಗಳಲ್ಲೇ ಸುಮಾರು 50 ಕೋಟಿಗೂ ಅಧಿಕ ಗಳಿಕೆ ಕಂಡಿದೆ. ಬೇರೆ ಭಾಷೆಗಳಿಗೆ ಡಬ್‌ ಆಗಿದ್ದರೂ ಕೂಡ, ʻದುರಂಧರ್‌ 2’ ಸಿನಿಮಾವನ್ನ ಹೆಚ್ಚಿನ ಪ್ರೇಕ್ಷಕರು ಮೂಲ ಹಿಂದಿ ಆವೃತ್ತಿಯಲ್ಲೇ ನೋಡಲು ಒಲವು ತೋರುತ್ತಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

5 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

6 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

7 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

9 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

9 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

10 hours ago