Mysore
20
broken clouds

Social Media

ಶುಕ್ರವಾರ, 28 ಆಗಸ್ಟ್ 2026
Light
Dark

ಡಿಜಿಟಲ್‌ ಅರೆಸ್ಟ್‌ ವಂಚನೆ ಪ್ರಕರಣ: ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

There is no financial shortage in the government Minister G Parameshwara

ಬೆಂಗಳೂರು: ಮಹಿಳಾ ಟೆಕ್ಕಿಯೊಂದಿಗೆ ಡಿಜಿಟಲ್‌ ಅರೆಸ್ಟ್‌ ವಂಚನೆ ಪ್ರಕರಣ ಸಂಬಂಧ ಗಂಭೀರವಾಗಿ ಪರಿಗಣಿಸಿದ್ದೇವೆ. ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ.

ಡಿಜಿಟಲ್‌ ಅರೆಸ್ಟ್‌ ಬಗ್ಗೆ ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಪರಮೇಶ್ವರ್‌ ಅವರು, ಇತ್ತೀಚೆಗೆ ಡಿಜಿಟಲ್‌ ಅರೆಸ್ಟ್‌ ಪ್ರಕರಣಗಳು ತೀವ್ರ ಆತಂಕ ಸೃಷ್ಟಿಸಿವೆ. ಈಗ ಮಹಿಳಾ ಟೆಕ್ಕಿಯೊಬ್ಬರಿಗೆ ಮೋಸ ಆಗಿದೆ. ಕಳೆದ ಒಂದು ವರ್ಷದಿಂದ ಮಹಿಳಾ ಟೆಕ್ಕಿ ಬಳಿ ಹಣ ಪಡೆಯುತ್ತಿದ್ದರು. ವಂಚನೆಗೊಳಗಾದ ಮಹಿಳಾ ಟೆಕ್ಕಿ ಈಗಾಗಲೇ ದೂರು ನೀಡಿದ್ದಾರೆ. ಹಾಗಾಗಿ ಡಿಜಿಟಲ್‌ ಅರೆಸ್ಟ್‌ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ತನಿಖೆ ನಡೆಯುತ್ತಿದೆ. ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಹೇಳಿದರು.

Tags:
error: Content is protected !!