Mysore
26
few clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಡಿಜಿಟಲ್‌ ಮಾಧ್ಯಮಗಳು ಮಾತ್ರ ಹೆಚ್ಚು ಸತ್ಯ ಹೇಳುತ್ತಿವೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮೀಡಿಯಾ ಎಂಬುವುದು ಪ್ರಬಲ ಅಸ್ತ್ರ. ಜನರ ಧ್ವನಿಯಾಗಿ ಕೆಲಸ ಮಾಡಬೇಕು. ಆದರೆ ಇತ್ತೀಚಿನ ದಿನಗಳಲ್ಲಿ ಮೀಡಿಯಾಗಳಲ್ಲಿ ಫೇಕ್‌ ನ್ಯೂಸ್‌ಗಳು ಜಾಸ್ತಿಯಾಗುತ್ತಿವೆ. ಟಿವಿ, ಮುದ್ರಣ ಮಾಧ್ಯಮಗಳಿಗೆ ಹೋಲಿಸಿದರೆ ಡಿಜಿಟಲ್‌ ಮಾಧ್ಯಮಗಳು ಹೆಚ್ಚಾಗಿ ಜನರಿಗೆ ಸತ್ಯ ತಿಳಿಸುವ ಕೆಲಸ ಮಾಡುತ್ತಿವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಈದಿನ ಕಾಮ್‌ನ ʼವಿಶೇಷ ಸಂಚಿಕೆʼ ಬಿಡುಗಡೆ ಮಾಡಿ ಮಾತನಾಡಿದ ಅವರು, ಅಂಬೇಡ್ಕರ್‌ ಅವರು ಸಂವಿಧಾನ ಜಾರಿ ವೇಳೆ ನಾವು ವೈವಿಧ್ಯತೆ ಇರುವ ಸಮಾಜಕ್ಕೆ ಕಾಲಿಡುತ್ತಿದ್ದೇವೆ. ಸಮಾಜದಲ್ಲಿ ರಾಜಕೀಯವಾಗಿ ನಮಗೆ ಸಮಾನತೆ ಸಿಕ್ಕಿದೆ ಆದರೆ ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಇನ್ನು ಅಸಮಾನತೆ ಇದೆʼ ಈ ಅಸಮಾನತೆಗೆ ಜಾತಿ ವ್ಯವಸ್ಥೆಯೇ ಮೂಲ ಕಾರಣ. ಅನೇಕ ಶತಮಾನಗಳ ಕಾಲ ಶೂದ್ರರು, ಹಿಂದುಳಿದವರು, ದಲಿತರು ಎಲ್ಲರನ್ನೂ ಜಾತಿಯಿಂದ ಅಳೆಯಲಾಗುತ್ತಿತ್ತೆ ಹೊರತು ವ್ಯಕ್ತಿತ್ವದ ಮೇಲಲ್ಲ. ಹೆಣ್ಣು ಮಕ್ಕಳಿಗೆ ಸಮಾನತೆ ಸಿಕ್ಕಿದ್ದು ಬಸವಣ್ಣನವರ ಕಾಲದಲ್ಲಿ ಎಂದು ಹೇಳಿದರು.

ಅಂಬೇಡ್ಕರ್‌ ಯಾರಿಗೆ ಇತಿಹಾಸ ಗೊತ್ತಿಲ್ಲವೋ ಅವರು ತಮ್ಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಿಲ್ಲ. ನಮಗೆ ರಾಜಕೀಯ ಪ್ರಜಾಪ್ರಭುತ್ವ ಸಿಕ್ಕಿದೆ. ಆದರೆ ಸಾಮಾಜಿಕ, ಆರ್ಥಿಕ ಪ್ರಜಾಪ್ರಭುತ್ವ ಸಿಕ್ಕಿಲ್ಲ. ಆರ್ಥಿಕ, ಸಾಮಾಜಿಕ ಸಮಾನತೆ ಸಿಗುವವರೆಗೂ ಪ್ರಜಾಪ್ರಭುತ್ವ ಯಶಸ್ಸು ಕಾಣಲು ಸಾಧ್ಯವಿಲ್ಲ. ಅದಕ್ಕಾಗಿ ನಾವು ಹೋರಾಟ ಮಾಡುವ ಆವಶ್ಯಕತೆ ಇದೆ ಎಂದು ಹೇಳಿದರು.

ನಮ್ಮ ಗುರಿ ಸಂವಿಧಾನ ಆಶಯಗಳನ್ನು ಜಾರಿ ಮಾಡುವುದು.ಆದರೆ ಸಂವಿಧಾನ ವಿರೋಧ ಮಾಡುವವರೇ ಇದ್ದಾರೆ. ಮೂಲಭೂತ ಕರ್ತವ್ಯಗಳನ್ನು ಪಾಲಿಸುವ ಕೆಲಸ ಮಾಡಬೇಕು ಎಂದು ಹೇಳಿದರು.

2023ರ ವಿಧಾನಸಭೆ ಚುನಾವಣೆಯಲ್ಲಿ ಎಲ್ಲ ಮಾಧ್ಯಮಗಳು ಅತಂತ್ರ ಸರ್ಕಾರ ರಚನೆಯಾಗುತ್ತದೆ ಎಂದು ಹೇಳುತ್ತಿದ್ದರು. ಆದರೆ ಈದಿನ ಕಾಮ್‌ ಮಾತ್ರ ಕಾಂಗ್ರೆಸ್‌ 130ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತದೆ ಎಂದು ನಿಖರವಾಗಿ ಸಮೀಕ್ಷೆ ನಡೆಸಿ ಹೇಳಿತ್ತು. ಇದು ಇನ್ನು ವಿಸ್ತಾರವಾಗಿ ಬೆಳೆಯಲಿ ಎಂದು ಆಶಿಸಿದರು.

Tags: