ಬೆಂಗಳೂರು: ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಶಾಸಕ ಎಚ್.ವೈ.ಮೇಟಿ ಅವರಿಂದು ನಿಧನರಾಗಿದ್ದು, ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಅನೇಕ ಬಿಜೆಪಿ ನಾಯಕರು ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಮಾಜಿ ಸಿಎಂ ಯಡಿಯೂರಪ್ಪ ಅವರು, ಮೇಟಿ ಅವರ ಅಗಲಿಕೆ ಅತ್ಯಂತ ವಿಷಾದನೀಯವಾಗಿದೆ. ದೇವರ ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದು ಸಂತಾ ಸೂಚಿಸಿದರು.
ಇನ್ನು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದು, ಮೇಟಿ ಅವರು ಅನಾರೋಗ್ಯದಿಂದ ನಿಧನ ಹೊಂದಿರುವ ಸುದ್ದಿ ಕೇಳಿ ದುಃಖವಾಯಿತು. ನನಗೆ ಅವರೊಂದಿಗೆ ಕೆಲಸ ಮಾಡುವ ಅವಕಾಶವೂ ದೊರೆತಿತ್ತು. ಅವರ ಅಗಲಿಕೆಯೆ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬ ವರ್ಗ ಹಾಗೂ ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸಿದರು.
ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಕೂಡ ಸಂತಾಪ ಸೂಚಿಸಿದ್ದು, ಮೇಟಿ ಅವರ ನಿಧನಕ್ಕೆ ಸಂತಾಪ ಕೋರುವೆ. ರಾಜಕಾರಣದಲ್ಲಿ ಸುದೀರ್ಘ ಸೇವೆ ಸಲ್ಲಿಸಿ ಜನಪ್ರಿಯವಾಗಿದ್ದ ಅವರ ಅಗಲಿಕೆಯಿಂದ ಅವರ ಕುಟುಂಬ ಹಾಗೂ ಅಪಾರ ಅಭಿಮಾನಿ ವರ್ಗಕ್ಕೆ ಉಂಟಾಗಿರುವ ದುಃಖ ಭರಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಸಂತಾಪ ಸೂಚಿಸಿದ್ದಾರೆ.





