ಹಾಸನ: ಜಿಲ್ಲೆಯ ಬೇಲೂರು ತಾಲ್ಲೂಕಿನಲ್ಲಿ ಪಾಳು ಬಿದ್ದಿದ್ದ ಕಟ್ಟಡ ಕುಸಿದು ಬಿದ್ದು ಮೂವರು ಮಹಿಳೆಯರು ಮತ್ತು ಓರ್ವ ಯುವಕ ಸಾವನ್ನಪ್ಪಿದ್ದಾರೆ.
ಈ ದುರಂತ ಇಂದು(ಮಾರ್ಚ್.9) ಬೇಲೂರು ನಗರದಲ್ಲಿ ನಡೆದಿದ್ದು, ಮೃತರಲ್ಲಿ ಇಬ್ಬರನ್ನು ಆಶಾ ಮತ್ತು ದೀಪು ಎಂದು ಗುರುತಿಸಲಾಗಿದೆ. ಆದರೆ ಇನ್ನುಳಿದ ಇಬ್ಬರು ಗುರುತು ಪತ್ತೆಯಾಗಿಲ್ಲ. ಅಲ್ಲದೇ ಕಟ್ಟದ ಬಿದ್ದ ಸ್ಥಳದಲ್ಲಿ ಹಲವರು ಸಿಲುಕಿಕೊಂಡರುವ ಶಂಕೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.
ಪಾಳುಬಿದ್ದ ಕಟ್ಟಡ ಕುಸಿದು ಬಿದ್ದ ಹಿನ್ನೆಲೆಯಲ್ಲಿ ನಾಲ್ವರು ಬೀದಿ ವ್ಯಾಪಾರಿಗಳು ಸಾವನ್ನಪ್ಪಿದ್ದರೆ, ನಾಲ್ವರಿಗೆ ಗಂಭೀರ ಗಾಯವಾಗಿದೆ. ಈ ಗಾಯಾಳುಗಳನ್ನು ಅಂಬುಲೆನ್ಸ್ ಮೂಲಕ ಹಾಸನದ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಘಟನೆ ನಡೆದ ಸ್ಥಳಕ್ಕೆ ಹಾಸನ ಜಿಲ್ಲಾ ಎಸ್‌ಪಿ ಮಹಮದ್ ಸುಜೀತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…