ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಪ್ರಕರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಹೊರಡಿಸಿದ ಬೆನ್ನಲ್ಲೇ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅವರ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಆಗ್ರಹಿಸುತ್ತಿರುವ ವಿಷಯಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.
ಭ್ರಷ್ಟಾಚಾರದ ಕಿರೀಟ ತೊಟ್ಟವರು ಬಿಎಸ್ ಯಡಿಯೂರಪ್ಪ, ಯಾವುದೇ ಅಧಿಕಾರ ಇಲ್ಲದೇ ಇದ್ದರೂ ವಿಜಯೇಂದ್ರ ಭ್ರಷ್ಟಾಚಾರ ಮಾಡಿದ್ದಾರೆ. ಇಂತಹವರಿಂದ ನೈತಿಕತೆ ಕಲಿಯಬೇಕಾ? ಎಂದು ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ.
ಎಚ್‌ಡಿಕೆ ಅವರಿಗೆ ಕೆಟ್ಟ ಕೆಲಸಗಳು ಹಾಗೂ ಪಿತೂರಿ ಮಾಡುವುದೇ ಕೆಲಸ. ಹೀಗಾಗಿಯೇ ಕೇವಲ ಒಂದೂವರೆ ವರ್ಷಕ್ಕಿಂತ ಹೆಚ್ಚಿನ ಸಮಯಕ್ಕೆ ಸಿಎಂ ಆಗಲಿಲ್ಲ. ಇವರದ್ದು ಬರೀ ಕೆಟ್ಟ ಕೆಲಸಗಳನ್ನು ಮಾಡುವುದೇ ಆಗಿದೆ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ವಿರುದ್ಧವೂ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದರು.