ಬೆಂಗಳೂರು: ರಾಜ್ಯದ ಜನತೆ ಹಕ್ಕಿಜ್ವರದ ಬಗ್ಗೆ ಆತಂಕ ಪಡುವುದು ಬೇಡ, ಸೋಂಕು ಪೀಡಿತ ಕೋಳಿ ಫಾರಂ, ಮೃತ ಹಕ್ಕಿ ಅಥವಾ ಕೋಳಿಗಳ ಸಮೀಪಕ್ಕೆ ಹೋಗದಂತೆ ಎಚ್ಚರ ವಹಿಸಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಹಕ್ಕಿ ಜ್ವರದ ಪ್ರಕರಣಗಳು ರಾಜ್ಯದ ಅಲ್ಲಲ್ಲಿ ವರದಿಯಾಗುತ್ತಿದೆ.ಹಕ್ಕಿ ಜ್ವರ ಸಾಂಕ್ರಾಮಿಕ ರೋಗವಾದರೂ, ಅದು ಹಕ್ಕಿಗಳಿಂದ ಮನುಷ್ಯರಿಗೆ ಹರಡುವುದು ಅಪರೂಪ. ಹಾಗಾಗಿ ಅನಗತ್ಯ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ಆದರೂ ಮೊಟ್ಟೆ ಮತ್ತು ಮಾಂಸವನ್ನು ಸೇವಿಸುವಾಗ ಕೆಲ ಎಚ್ಚರಿಕೆಗಳನ್ನು ಪಾಲಿಸಬೇಕು. ಮೊಟ್ಟೆ ಮತ್ತು ಮಾಂಸವನ್ನು 70 ಡಿಗ್ರಿ ಉಷ್ಣಾಂಶದಲ್ಲಿ ಅರ್ಧಗಂಟೆಗೂ ಹೆಚ್ಚು ಕಾಲ ಬೇಯಿಸಿ ಸೇವಿಸಬೇಕು. ಸೋಂಕು ಪೀಡಿತ ಕೋಳಿ ಫಾರಂ, ಮೃತ ಹಕ್ಕಿ ಅಥವಾ ಕೋಳಿಗಳ ಸಮೀಪಕ್ಕೆ ಹೋಗದೆ ಎಚ್ಚರಿಕೆ ವಹಿಸಬೇಕು ಎಂದಿದ್ದಾರೆ.
ಮಹಾದೇಶ್ ಎಂ ಗೌಡ ಹನೂರು: ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರರಿಬ್ಬರೂ…
ಮಹಾದೇಶ್ ಎಂ ಗೌಡ ಹನೂರು: ದ್ವಿಚಕ್ರ ವಾಹನ ಸವಾರ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡು ಮೃತಪಟ್ಟಿರುವ ಘಟನೆ…
ಮೈಸೂರು: ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ ಹನೂರು: ಅಂತರ ರಾಜ್ಯ ನೆರೆಯ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಮಾಪುರ ರಸ್ತೆಯಲ್ಲಿ ನಿತ್ಯ ಗಜರಾಜ ಎಂಟ್ರಿ…
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಚಿತಾವಣೆಯಿಂದ ಬಳ್ಳಾರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹೆಣ ಬಿದ್ದಿದೆ ಎಂದು ಹೇಳಿಕೆ…
ಬೆಂಗಳೂರು: ನಾಯಕತ್ವ ಬದಲಾವಣೆ ಚರ್ಚೆಗೆ ಹೈಕಮಾಂಡ್ ಸ್ಪಷ್ಟನೆ ಕೊಡಬೇಕು ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಒತ್ತಾಯಿಸಿದ್ದಾರೆ. ಜನವರಿ.16ಕ್ಕೆ ಸಿಹಿಸುದ್ದಿ ಬರಲಿದೆ…