ಮಂಗಳೂರು: ಕೇಂದ್ರ ಸರ್ಕಾರ, ಲೋಕಸಭೆಯಲ್ಲಿ ಮಂಡಿಸಿರುವ ವಕ್ಫ್ ತಿದ್ದುಪಡಿ ಮಸೂದೆಯೂ ಸಂವಿಧಾನಕ್ಕೆ ವಿರುದ್ಧವಾಗಿದ್ದು, ಅಂಗೀಕಾರವಾಗಿರುವ ಈ ಮಸೂದೆಯನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಇಂದು(ಏಪ್ರಿಲ್.5) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರ ಸರ್ಕಾರ ವಕ್ಫ್ ವಿಚಾರದಲ್ಲಿ ವಿರೋಧ ಪಕ್ಷವನ್ನೂ ಗಮನಕ್ಕೆ ತೆಗೆದುಕೊಳ್ಳದೇ ದಬ್ಬಾಳಿಕೆ ನಡೆಸಿದ್ದಾರೆ. ವಕ್ಫ್ ಮಸೂದೆ ಸೂಕ್ಷ್ಮವಾಗಿದ್ದು, ಅದರಲ್ಲಿ ದ್ವೇಷ ಸಾಧಿಸುವಂತಹದ್ದು ಸರಿಯಲ್ಲ ಎಂದು ಹೇಳಿದರು.
ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿ ಸಹ ಹಿಂದೂ ಧರ್ಮದ ಟ್ರಸ್ಟ್‌ಗಳು ಇದೆ. ಅಲ್ಲದೇ ಕೆಲವು ವಕ್ಫ್ ರಾಜ್ಯ ಸರ್ಕಾರ ವ್ಯಾಪ್ತಿಯಲ್ಲಿ ಬರುತ್ತದೆ. ಹಾಗಾಗಿ ಇಂತಹ ಕ್ರಮಗಳು ಭ್ರಷ್ಟಾಚಾರದಿಂದ ಕೂಡಿವೆ ಎಂದರು.
ಇದೇ ಸಂದರ್ಭದಲ್ಲಿ ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಆತ್ಮಹತ್ಯೆ ಬಗ್ಗೆ ಮಾತನಾಡಿದ ಅವರು, ಈ ಬಗ್ಗೆ ನನಗೆ ಮಾಹಿತಿ ಇಲ್ಲ, ಮಾಹಿತಿ ತಿಳಿದು ಪ್ರತಿಕ್ರಿಯೆ ನೀಡುತ್ತೇನೆ. ಇಂತಹ ವಿಚಾರಗಳೆಲ್ಲಾ ಗಂಭೀರ ಹಾಗೂ ಸೂಕ್ಷ್ಮವಾದ ವಿಷಯಗಳಾಗಿವೆ. ಒಂದೇ ಬಾರಿಗೆ ಪ್ರತಿಕ್ರಿಯೆ ನೀಡಲು ಆಗುವುದಿಲ್ಲ ಎಂದು ಹೇಳಿದರು.
ಇನ್ನೂ ಯಾವುದೇ ಪ್ರಕರಣಗಳು ಕಾನೂನು ಪ್ರಕಾರವೇ ಮುಂದುವರಿಯಬೇಕು. ಹೀಗಾಗಿ ಈ ವಿಚಾರದಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುವಂತಹದ್ದೂ ಏನೂ ಇಲ್ಲ ಎಂದು ತಿಳಿಸಿದರು.





