Mysore
23
scattered clouds

Social Media

ಸೋಮವಾರ, 25 ಮೇ 2026
Light
Dark

ʻಇ.ಡಿʼ ಮುಂದೆ ದಾಖಲೆಗಳೊಂದಿಗೆ ಹಾಜರಾದ ದಿನೇಶ್‌ ಕುಮಾರ್‌

ಬೆಂಗಳೂರು: ಮೈಸೂರು ನಗಾರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ಪ್ರಕರಣ ಸಂಬಂಧ ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಇ.ಡಿ. ಅಧಿಕಾರಿಗಳ ಮುಂದೆ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾಗಿದ್ದಾರೆ.

ಶಾಂತಿನಗರದಲ್ಲಿರುವ ಇ.ಡಿ.ತನಿಖಾ ಸಂಸ್ಥೆಯಲ್ಲಿ ಇಂದು(ನ.20) ದಾಖಲೆಗಳ ಸಮೇತ ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ 2ನೇ ಬಾರಿ ವಿಚಾರಣೆಗಾಗಿ ಹಾಜರಾಗಿದ್ದಾರೆ.

ಇ.ಡಿ.ಅಧಿಕಾರಿಗಳು ಕೆಲ ದಿನಗಳ ಹಿಂದೆ ದಿನೇಶ್‌ ಅವರ ನಿವಾಸದ ಮೇಲೆ ದಾಳಿ ಮಾಡಿದ್ದರು. ಆ ಸಂದರ್ಭದಲ್ಲಿ ದಿನೇಶ್‌ ಪರಾರಿಯಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿದ್ದರು. ಹೀಗಾಗಿ ಕೆಲ ದಿನಗಳ ಹಿಂದೆ ಇ.ಡಿ.ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದರು. ಆದರೆ ಇದೀಗ ಮತ್ತೊಮ್ಮೆ ಮುಡಾ ಪ್ರಕರಣದ ಬಗ್ಗೆ ಸೂಕ್ತ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾಗಿದ್ದಾರೆ.

Tags:
error: Content is protected !!