ಬೆಂಗಳೂರು: ರಾಜ್ಯಾದ್ಯಂತ ಏಡ್ಸ್ ಸೋಂಕಿತರ ಸಂಖ್ಯೆ ಇತ್ತೀಚಿನ ಹಲವು ವರ್ಷಗಳಲ್ಲಿ ಕಡಿಮೆಯಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹೋದ ವರ್ಷದಲ್ಲಿ 13.183 ಪ್ರಕರಣಗಳು ರಾಜ್ಯದಲ್ಲಿ ವರದಿಯಾಗಿದ್ದವು. ಈ ವರ್ಷದ ಆಕ್ಟೋಬರ್‌ವರೆಗೆ 7,720 ಪ್ರಕರಣಗಳು ಮಾತ್ರ ದಾಖಲಾಗಿವೆ.
ಗರ್ಭಿಣಿಯರಲ್ಲಿ ಕಳೆದ ವರ್ಷ 539 ಸೋಂಕು ಪ್ರಕರಣಗಳು ಧೃಡಪಟ್ಟಿದ್ದವು. ಈ ವರ್ಷದ ಆಕ್ಟೋಬರ್‌ವರೆಗೆ 247 ಮಾತ್ರ ವರದಿಯಾಗಿವೆ. ಗರ್ಭಿಣಿ ಮಹಿಳೆಯರಲ್ಲಿ ಸೋಂಕು ಧೃಡಪ್ರಮಾಣ ಶೇ.0.03ರಷ್ಟಿದೆ. ಇದನ್ನು ಮುಂದಿನ ದಿನಗಳಲ್ಲಿ ಶೂನ್ಯಕ್ಕೆ ಇಳಿಸುವ ಗುರಿಯಿದೆ ಎಂದು ಹೇಳಿದರು.
ಏಡ್ಸ್ ಸೋಂಕು ಪ್ರಮಾಣವು ಟ್ರಕ್ ಚಾಲಕರು, ಕೆಲಸದ ಮೇಲೆ ಪ್ರಯಾಣ ಮಾಡುವವರು, ಲೈಂಗಿಕ ಕಾರ್ಯಕರ್ತರು, ಡ್ರಗ್ಸ್ ವ್ಯಸನಿಗಳಲ್ಲಿ ಹೆಚ್ಚಿದೆ. ಸುರಕ್ಷಿತ ಲೈಂಗಿಕ ಕ್ರಿಯೆಯಿಂದ ಮಾರಣಾಂತಿಕ ಕಾಯಿಲೆಯಿಂದ ಪಾರಾಗಬಹುದು. ಲೈಂಗಿಕ ಕಾರ್ಯಕರ್ತರನ್ನು ಸಾಮಾಜಿಕ ಮುಖ್ಯ ವಾಹಿನಿಗೆ ತರಬೇಕು. ಅವರು ದೂರವಿರುವುದೇ ಈ ಸಮಸ್ಯೆಗಳು ಹೆಚ್ಚಾಗಲು ಕಾರಣ ವಾಗುತ್ತಿವೆ. ಅವರನ್ನು ಮಾನವೀಯತೆ ದೃಷ್ಟಿಯಿಂದ ನೋಡಿದರೆ ಮಾತ್ರ ಸೋಂಕಿನ ಪ್ರಮಾಣ ತಡೆಗಟ್ಟಲು ಸಾಧ್ಯ ಎಂದರು.
ರಾಜ್ಯದಲ್ಲಿ ಚಿಕಿತ್ಸೆ, ಆಪ್ತ ಸಮಾಲೋಚನಾ ಕೇಂದ್ರಗಳ ಸಹಕಾರದಿಂದ ಸೋಂಕಿತರ ಪ್ರಮಾಣ ಕಡಿಮೆಯಾಗುತ್ತಿದೆ. ಏಡ್ಸ್ ಸೋಂಕನ್ನು ಸಂಪೂರ್ಣವಾಗಿ ನಿರ್ನಾಮ ಮಾಡಲು ನಾವೆಲ್ಲಾ ಒಗ್ಗೂಡಿ ಕೆಲಸ ಮಾಡಬೇಕು ಎಂದು ಕರೆ ಕೊಟ್ಟರು.
ರಾಜ್ಯದಲ್ಲಿ 433 ಆಪ್ತ ಸಮಾಲೋಚನಾ ಮತ್ತು ಪರೀಕ್ಷಾ ಕೇಂದ್ರಗಳಿವೆ. 2592 ಸೌಲಭ್ಯಾಧಾರಿತ ಆಪ್ತ ಸಮಾಲೋಚನಾ ಕೇಂದ್ರಗಳಿವೆ ಎಂದು ಮಾಹಿತಿ ನೀಡಿದರು.
ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…
‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…
ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಮಾಡಲು ಸರ್ಕಾರಿ ನೌಕರರಿಗೆ ಅಥವಾ ಅಧಿಕಾರಿಗಳಿಗೆ ೧೦ ರೂ. ಲಂಚವನ್ನು ಕೂಡ ನೀಡಬೇಡಿ ಎಂದು…
ಪಂಜುಗಂಗೊಳ್ಳಿ ಅವಳ ಗೊಂಬೆಗಳು ದೇಶ ದೇಶಗಳಿಗೆ ಹಾರುತ್ತವೆ! ಕೊಯಂಬತ್ತೂರಿನ ಜೆ.ಎ.ರಾಧಿಕಾ ಐದು ವರ್ಷದವಳಾಗಿದ್ದಾಗ ಕಾಲ ಮೂಳೆ ಮುರಿದು, ಶಸ್ತ್ರಚಿಕಿತ್ಸೆ ನಡೆದು…
ಎಂ.ಆರ್.ಚಕ್ರಪಾಣಿ ಜಗಳದಿಂದಾಗಿ ಡೇರಿಗೆ ಬೀಗ: ದೂರು-ಪ್ರತಿ ದೂರು ದಾಖಲು; ಖಾಸಗಿ ಡೇರಿಗೆ ಹಾಲು ಸರಬರಾಜು ಮದ್ದೂರು: ತಾಲ್ಲೂಕಿನ ಪಣ್ಣೇದೊಡ್ಡಿ ಗ್ರಾಮದ…