ಬೆಂಗಳೂರು: ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ʼಮಂಡ್ಯದ ಗಂಡುʼ ಸಿನಿಮಾದ ಹಿರಿಯ ನಿರ್ದೇಶಕ ಎ.ಟಿ.ರಘು (76) ಗುರುವಾರ ರಾತ್ರಿ ನಿಧನರಾಗಿದ್ದಾರೆ.
ತಮ್ಮ ವೃತ್ತಿ ಬದುಕಿನಲ್ಲಿ ಸುಮಾರು 32 ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ.
ಮಡಿಕೇರಿಯಲ್ಲಿ ಜನಿಸಿದ ರಘು ಅವರು ʼಮಿಸ್ ಲೀಲಾವತಿʼ ಎಂಬ ಸಿನಿಮಾದಲ್ಲಿ ಸಣ್ಣ ಪಾತ್ರವೊಂದಕ್ಕೆ ಬಣ್ಣ ಹಚ್ಚುವುದರ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟರು.
ನಂತರ, ʼನ್ಯಾಯ ನೀತಿ ಧರ್ಮʼ ಸಿನಿಮಾ ಮೂಲಕ ನಿರ್ದೇಶಕರಾದ ರಘು, ಅಂಬರೀಶ್ ಅವರಿಗೆ ಆಕ್ಷನ್ ಕಟ್ ಹೇಳಿದರು.
ಬಳಿಕ, ʼಶಂಕರ್ ಸುಂದರ್ʼ, ʼಪ್ರೀತಿʼ, ʼಆಶಾʼ, ʼಇನ್‌ಸ್ಪೆಕ್ಟರ್ ಕ್ರಾಂತಿಕುಮಾರ್ʼ, ಮುಂತಾದ ಸಿನಿಮಾಗಳನ್ನು ರಘು ನಿರ್ದೇಶಿಸಿದರು. ಟೈಗರ್ ಪ್ರಭಾಕರ್ ನಟಿಸಿದ ʼಕಾಡಿನ ರಾಜʼ ಸಿನಿಮಾವನ್ನೂ ರಘು ನಿರ್ದೇಶಿಸಿದ್ದರು.





