ಬೆಂಗಳೂರು : ರಾಜ್ಯದಲ್ಲಿ ನಡೆದಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ಕುರಿತು ಕೆಲವು ನಿರ್ದೇಶನಗಳನ್ನು ನೀಡಲು ಮತ್ತು ಸಮಸ್ಯೆಗಳನ್ನು ಪರಿಹರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಮುಂಜಾನೆ 11.30 ಗಂಟೆಗೆ ರಾಜ್ಯದ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ ಹಾಗೂ ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ ಇಂದಿಲ್ಲಿ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.
ಸಚಿವ ಸಂಪುಟದ ಸಭೆಯ ನಂತರ ಸುದ್ದಿಗಾರರಿಗೆ ಸಚಿವ ಸಂಪುಟದ ನಿರ್ಣಯಗಳ ವಿವರಗಳನ್ನು ನೀಡಿದ ಅವರು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮೂಲಕ ಕೈಗೊಳ್ಳಲಾಗಿರುವ ಈ ಸಮೀಕ್ಷಾ ಕಾರ್ಯದಲ್ಲಿ ನಿಯೋಜಿಸಲ್ಪಡುವ ಅಧಿಕಾರಿ/ನೌಕರರು ಸಮೀಕ್ಷಾ ಕಾರ್ಯಕ್ಕೆ ಹಾಜರಾಗದೇ ಮತ್ತು ಕರ್ತವ್ಯಗಳನ್ನು ನಿರ್ವಹಿಸದೇ ಇರುವಂತಹವರ ವಿರುದ್ಧ ಶಿಸ್ತುಕ್ರಮ ಜರುಗಿಸಲು ಬೆಂಗಳೂರು ವ್ಯಾಪ್ತಿಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಿಗೆ ಅಧಿಕಾರ ಪ್ರಾಯೋಜಿಸಲಾಗಿದೆ ಎಂದು ತಿಳಿಸಿದರು.
ಇದನ್ನು ಓದಿ : ಗ್ರೇಟರ್ ಬೆಂಗಳೂರು ತಿದ್ದುಪಡಿ ಮಸೂದೆ ವಿಧಾನಪರಿಷತ್‌ನಲ್ಲೂ ಅಂಗೀಕಾರ
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ಕಾರ್ಯಕ್ಕಾಗಿ ಗಣತಿದಾರರಾಗಿ ನಿಯೋಜಿಸಲ್ಪಡುವ ಸರ್ಕಾರ, ನಿಗಮ/ಮಂಡಳಿಗಳ ಅಧಿಕಾರಿ/ ನೌಕರರುಗಳ ವಿರುದ್ಧ ಕರ್ನಾಟಕ ನಾಗರೀಕ ಸೇವಾ (ನಡತೆ) ನಿಯಮಗಳು, 2021ರಡಿ ಹಾಗೂ ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು, 1957ರನ್ವಯ ಶಿಸ್ತುಕ್ರಮ ಮತ್ತು ದಂಡನೆ ವಿಧಿಸುವ ಅಧಿಕಾರವನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಿಗೆ ಪ್ರತ್ಯಾಯೋಜಿಸುವಂತೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…