ರಾಜ್ಯ

ಅನಗತ್ಯ ಹೇಳಿಕೆ ನೀಡಿದರೆ ಶಿಸ್ತುಕ್ರಮ ; ಕೈ ಶಾಸಕರಿಗೆ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಎಚ್ಚರಿಕೆ ನೀಡಿದರು.

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು.

25 ಜನ ಶಾಸಕರು ದೆಹಲಿಗೆ ತೆರಳಿರುವ ಬಗ್ಗೆ ಕೇಳಿದಾಗ, “ಪಕ್ಷದ ಶಿಸ್ತನ್ನು ಎಲ್ಲಾ ಶಾಸಕರು ಕಾಪಾಡಬೇಕು. ಪಕ್ಷಕ್ಕೆ ಗೌರವ ನೀಡಬೇಕು. ಮಾಧ್ಯಮಗಳ ಮುಂದೆ ಪಕ್ಷದ ಗೌರವವನ್ನು ಹಾಳು ಮಾಡಬಾರದು. ಮುಖ್ಯಮಂತ್ರಿಗಳೂ ಸಹ ಈಗಾಗಲೇ ಈ ವಿಚಾರದ ಬಗ್ಗೆ ಹೇಳಿದ್ದಾರೆ. ಮುಂದಕ್ಕೆ ಎಲ್ಲರ ಭವಿಷ್ಯ ಪಕ್ಷದಲ್ಲಿದೆಯೇ ಹೊರತು ಮಾಧ್ಯಮಗಳಲ್ಲಿ ಇಲ್ಲ” ಎಂದರು.

ಶಾಸಕರು ದೆಹಲಿಗೆ ತೆರಳುವ ಮುಂಚೆ ನಿಮ್ಮ ಬಳಿ ಚರ್ಚೆ ಮಾಡಿದ್ದಾರೆಯೇ ಎಂದು ಕೇಳಿದಾಗ, “ಒಂದಷ್ಟು ಜನ ಮಾಡಿದ್ದಾರೆ. ಹೈಕಮಾಂಡ್ ಬಳಿ ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪೇನಿಲ್ಲ. ಮೊದಲ ಹಾಗೂ ಎರಡನೇ ಬಾರಿ ಗೆದ್ದಿರುವವರೂ ಮಂತ್ರಿಗಳಾಗಬಹುದು. ಈ ಹಿಂದೆ ಈ ರೀತಿ ನಡೆದಿದೆ. ಆದರೆ ಇದು ಸಮಯವಲ್ಲ. ಇನ್ನೂ ಚುನಾವಣೆಗಳು ನಡೆಯುತ್ತಿವೆ. ಒಂದಷ್ಟು ಜನ ತಮಿಳುನಾಡಿಗೆ ತೆರಳಿದ್ದಾರೆ. ಮೊದಲು ಚುನಾವಣೆ ಆಗಲಿ, ಆನಂತರ ಇದರ ಬಗ್ಗೆ ಯೋಚಿಸೋಣ” ಎಂದರು.

ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿ ಬಗ್ಗೆ ಕೇಳಿದಾಗ, “ಪಕ್ಷದಿಂದ ತಮಿಳುನಾಡಿಗೆ ತೆರಳುವಂತೆ ಸೂಚನೆ ನೀಡಿದ್ದರು. ಅಲ್ಲಿಗೆ ಹೋಗಿ ಬಂದಿದ್ದೇನೆ. ಮತ್ತೆ ತೆರಳಬೇಕಾಗಿದೆ. ಆ ಬಗ್ಗೆ ಎಐಸಿಸಿ ಅಧ್ಯಕ್ಷರಿಗೆ ವರದಿ ನೀಡಬೇಕಿತ್ತು. ಭೇಟಿ ಮಾಡಿ ವರದಿ ಮಾಡಿದ್ದೇನೆ” ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಹೊರ್ಮುಜ್‌ ಬಿಕ್ಕಟ್ಟು | ಇರಾನ್‌ನ ಬಂದರುಗಳಿಗೆ ಅಮೆರಿಕದ ದಿಗ್ಬಂಧನ ಪ್ರಾರಂಭ

ಟೆಹ್ರಾನ್‌ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…

6 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…

6 hours ago

ಹೆದ್ದಾರಿ ತಡೆದು ಪ್ರತಿಭಟನೆ : ಬಂಡೀಪುರ ರಾತ್ರಿ ಸಂಚಾರ ತೆರವು ಮಾಡದಂತೆ ಆಗ್ರಹ

ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…

8 hours ago

ಕೊಡಗು | ತೆರೆದ ಬಾವಿಗೆ ಬಿದ್ದ ಕಾಡಾನೆ ಮರಿ , ರಕ್ಷಣೆ

ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…

8 hours ago

ಹೊರ್ಮುಜ್‌ ಬಿಕ್ಕಟ್ಟು | ಅಮೆರಿಕ ದಿಗ್ಬಂಧನ ಬೆನ್ನಲ್ಲೇ ಇರಾನ್‌ ವಾರ್ನಿಂಗ್‌

ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…

8 hours ago

ವಿಧಾನಸೌಧಕ್ಕೆ ಮತ್ತೆ ಬರೋದು ಭಗವಂತನ ಇಚ್ಛೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಮರಳಿ ವಿಧಾನಸೌಧ ಪ್ರವೇಶ ಮಾಡುವ ಬಗ್ಗೆ ಜನರ ಆಶೀರ್ವಾದ ಮತ್ತು ಭಗವಂತನ ಇಚ್ಛೆ ನಿರ್ಧರಿಸುತ್ತದೆ ಎಂದು ಕೇಂದ್ರದ ಬೃಹತ್…

10 hours ago