ಬೆಂಗಳೂರು: ಸಿಎಂ ಸಿದ್ದರಾಮಯ್ಯ ರಾಜ್ಯ ಸುಭೀಕ್ಷವಾಗಿದೆ ಎಂಬ ಭ್ರಮೆಯಲ್ಲಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ಗ್ಯಾರಂಟಿ ಯೋಜನೆ ನಿಲ್ಲಿಸುವ ಲಕ್ಷಣ ಕಾಣುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೃಹಜ್ಯೋತಿ ಬಿಲ್ ವಸೂಲಿಗೆ ಪ್ರಸ್ತಾಪ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಈ ವಿಚಾರ ಕುರಿತು ಸಿಎಂ ಸಿದ್ದರಾಮಯ್ಯ ಅವರೇ ಉತ್ತರ ಕೊಡಬೇಕಿದೆ. ರಾಜ್ಯ ಸುಭೀಕ್ಷವಾಗಿದೆ ಎಂಬ ಭ್ರಮೆಯಲ್ಲಿ ಸಿದ್ದರಾಮಯ್ಯ ಇದ್ದಾರೆ. ಆಲ್ ಇಸ್ ವೆಲ್ ಎಂಬ ಭಾವನೆಯಿಂದ ಸಿಎಂ ಸಿದ್ದರಾಮಯ್ಯ ಹೊರಬರಬೇಕು ಎಂದು ಕಿಡಿಕಾರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಸಾರಿಗೆ ಸಂಸ್ಥೆಗೆ ಸರ್ಕಾರದಿಂದ 7 ಸಾವಿರ ಕೋಟಿ ರೂ ಕೊಡಬೇಕು. ಅದನ್ನು ಕೊಡಲು ಸರ್ಕಾರ ಪರದಾಟ ನಡೆಸುತ್ತಿದೆ. ನೌಕರರಿಗೆ ಸಂಬಳ ಕೊಡಲು ಕೂಡ ಸರ್ಕಾರದ ಬಳಿ ಹಣವಿಲ್ಲ. ಹಾಗಾಗಿ ಇನ್ನೇನು ಕೆಲವೇ ದಿನಗಳಲ್ಲಿ ಗ್ಯಾರಂಟಿ ಯೋಜನೆ ನಿಲ್ಲಿಸುವ ಲಕ್ಷಣ ಕಾಣುತ್ತಿದೆ. ಎಲ್ಲಾ ಇಲಾಖೆಗಳು ಬಾಗಿಲು ಮುಚ್ಚುವ ಸ್ಥಿತಿ ಬಂದೊದಗಿದೆ. ಈ ಎಲ್ಲಾ ಸಮಸ್ಯೆಗಳನ್ನು ಅಧಿವೇಶನದಲ್ಲಿ ಚರ್ಚೆ ಮಾಡುತ್ತೇವೆ ಎಂದರು.
ಯಾದಗಿರಿ: ದೇವರದಾಸಿಮಯ್ಯ ಪುಣ್ಯಕ್ಷೇತ್ರ ಯಾದಗಿರಿ ಜಿಲ್ಲೆಯ ಮುದನೂರು ಗ್ರಾಮದಲ್ಲಿಯೂ ಉತ್ಖನನ ನಡೆಸಲು ಸಿದ್ಧತೆ ನಡೆದಿದೆ. ಮುದನೂರು ಗ್ರಾಮ ರಾಜ-ಮಹಾರಾಜರ ಕಾಲದಲ್ಲಿ…
ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸಂಸದ ಯದುವೀರ್ ಒಡೆಯರ್ ಅವರನ್ನು ಭೇಟಿಯಾಗಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು…
ಬೆಂಗಳೂರು: ಜಾತಿ, ಅಸಮಾನತೆ, ಸಂವಿಧಾನದ ಮೌಲ್ಯ ಎತ್ತಿ ಹಿಡಿಯುವ "ಲ್ಯಾಂಡ್ ಲಾರ್ಡ್" ಸಿನಿಮಾ ನೋಡಿ ಎಂದು ಸಿಎಂ ಸಿದ್ದರಾಮಯ್ಯ ಕರೆ…
ಶ್ರೀನಗರ: ಕಾಶ್ಮೀರದ ಸುತ್ತಮುತ್ತ ಭಾರೀ ಹಿಮಮಳೆಯಾಗುತ್ತಿದ್ದು, ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಹಲವು ವರ್ಷಗಳ ಬಳಿಕ ಇಷ್ಟೊಂದು ಹಿಮಪಾತವಾಗುತ್ತಿದ್ದು, ಜನಜೀವನ…
ಪೇಶಾವರ: ಪಾಕಿಸ್ತಾನದ ವಾಯುವ್ಯ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಶಾಂತಿ ಸಮಿತಿ ಸದಸ್ಯರ ಮನೆಯಲ್ಲಿ ಶುಕ್ರವಾರ ರಾತ್ರಿ ನಡೆದ ವಿವಾಹ ಸಮಾರಂಭದ…
ಬೆಂಗಳೂರು: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದನೆ ಹಾಗೂ ಜೀವ ಬೆದರಿಕೆ ಹಾಕಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಪತ್ತೆಗಾಗಿ ಪೊಲೀಸರು…