ಬೆಂಗಳೂರು : ವಾಹನ ಸವಾರರಿಗೆ ಬಾಕಿ ಇರುವ ಸಂಚಾರ ದಂಡದ ಮೇಲೆ 50% ರಿಯಾಯಿತಿ ಘೋಷಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಈ ಸಂಬಂಧ ರಾಜ್ಯ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ರಂಗಪ್ಪ ಕರಿಗಾರ ಅವರು ನವೆಂಬರ್ 20 ಅಧಿಕೃತ ಆದೇಶ ಹೊರಡಿಸಿದ್ದಾರೆ. ಈ ಸೌಲಭ್ಯವು ನಾಳೆಯಿಂದ ಅಂದರೆ ನವೆಂಬರ್ 21 ರಿಂದ ಡಿಸೆಂಬರ್ 12 ರವರೆಗೆ ಜಾರಿಯಲ್ಲಿರಲಿದ್ದು, ಈ ಅವಧಿಯಲ್ಲಿ ಚಾಲಕರು ತಮ್ಮ ಬಾಕಿ ದಂಡವನ್ನು ಅರ್ಧ ಮೊತ್ತಕ್ಕೆ ಪಾವತಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು.
ಸಂಚಾರ ದಂಡ ರಿಯಾಯಿತಿ ಕುರಿತಂತೆ ಸಾರಿಗೆ ಇಲಾಖೆ ಸರ್ಕಾರಕ್ಕೆ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಪರಿಶೀಲಿಸಿದ ಬಳಿಕ, ಸರ್ಕಾರವು ಅದನ್ನು ಅಂಗೀಕರಿಸಿ ತಕ್ಷಣ ಜಾರಿಗೆ ತರಲು ಆದೇಶ ಹೊರಡಿಸಿದೆ. ಕಳೆದ ಬಾರಿ ದಂಡ ರಿಯಾಯಿತಿ ನೀಡಿದಾಗ ಸರ್ಕಾರಕ್ಕೆ ಕೋಟ್ಯಾಂತರ ರೂಪಾಯಿ ಆದಾಯ ಹರಿದುಬಂದಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಮತ್ತೊಮ್ಮೆ ಈ ಆಫರ್ ನೀಡಲಾಗಿದ್ದು, ಸರ್ಕಾರದ ಆದೇಶದಂತೆ ನಾಳೆಯಿಂದಲೇ ಅಂದರೆ ನವೆಂಬರ್ 21ದಿಂದಲೇ ರಾಜ್ಯದಾದ್ಯಂತ 50% ದಂಡ ರಿಯಾಯಿತಿ ಯೋಜನೆ ಜಾರಿಗೆ ಬರಲಿದ್ದು, ಈ ವಿಶೇಷ ಅವಕಾಶ ಡಿಸೆಂಬರ್ 12 ರವರೆಗೆ ಮಾತ್ರ ಲಭ್ಯವಿರಲಿದೆ. ಚಾಲಕರು ಈ ಅವಧಿಯೊಳಗೆ ತಮ್ಮ ಬಾಕಿ ಇರುವ ಸಂಚಾರ ದಂಡಗಳನ್ನು 50% ರಿಯಾಯಿತಿಯಲ್ಲಿ ಪಾವತಿಸಬಹುದು.
ಇದನ್ನೂ ಓದಿ:-ಜೆಡಿಎಸ್‌ನಲ್ಲೇ ಇದ್ದಿದ್ದರೆ ನಾನು ಮುಖ್ಯಮಂತ್ರಿ ಆಗ್ತಿರಲಿಲ್ಲ : ಸಿಎಂ ಸಿದ್ದರಾಮಯ್ಯ
ಎಲ್ಲಿ ದಂಡ ಕಟ್ಟಬೇಕು?
ದಂಡ ಪಾವತಿ ಉಳಿಸಿಕೊಂಡಿರುವ ವಾಹನ ಸವಾರರು ಬೆಂಗಳೂರಿನಲ್ಲಿ ಸಂಚಾರ ಪೊಲೀಸ್ ಠಾಣೆಗಳು, ಸಂಚಾರ ನಿರ್ವಹಣಾ ಕೇಂದ್ರ, ಕರ್ನಾಟಕ ಒನ್ ಹಾಗೂ ಬೆಂಗಳೂರು ಒನ್ ವೆಬ್‌ಸೈಟ್‌ಗಳಲ್ಲಿ ವಿವರ ಪಡೆದು ಪಾವತಿಸಬಹುದು. ಜಿಲ್ಲೆಗಳಲ್ಲಿ ಸಮೀಪದ ಪೊಲೀಸ್ ಠಾಣೆಗಳಿಗೆ ಖುದ್ದು ಭೇಟಿ ನೀಡಿ ರಿಯಾಯಿತಿ ದರದಲ್ಲಿ ದಂಡ ಕಟ್ಟಬಹುದಾಗಿದೆ. ಇನ್ನು ಆನ್‌ಲೈನ್ ಮೂಲಕ ಪಾವತಿ ಮಾಡುವವರು ಕರ್ನಾಟಕ ಸ್ಟೇಟ್ ಪೊಲೀಸ್ (ಕೆಎಸ್‌ಪಿ) ಆ್ಯಪ್ ಬಿಟಿಪಿ ಅಸ್ತ್ರಂ ಮುಖಾಂತರವೂ ಖುದ್ದಾಗಿ ದಂಡ ಪಾವತಿಸಬಹುದಾಗಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.
1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…
ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…