ರಾಜ್ಯ

ಶಿಕ್ಷಣ ಅನುದಾನದಲ್ಲೂ ಕೇಂದ್ರದಿಂದ ತಾರತಮ್ಯ: ಮಧು ಬಂಗಾರಪ್ಪ

ಮೈಸೂರು: ಸಮಗ್ರ ಶಿಕ್ಷಣ ಅಭಿಯಾನದಡಿ ನೀಡುವ ಅನುದಾನದಲ್ಲಿಯೂ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದೆ. ಈ ಬಗ್ಗೆ ಪತ್ರ ಬರೆದರೂ ಏನೂ ಪ್ರಯೋಜನವಾಗಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅಸಮಾಧಾನ ಹೊರಹಾಕಿದ್ದಾರೆ.

ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯೋಜನೆ ಅಡಿ ಪ್ರತಿ ಮಗುವಿಗೆ ಕೇಂದ್ರ ಸರ್ಕಾರವು ತಮಿಳುನಾಡು, ಗುಜರಾತ್ ಮೊದಲಾದ ರಾಜ್ಯಗಳಿಗೆ ವಾರ್ಷಿಕ 5500-6000 ರೂಪಾಯಿ ನೀಡುತ್ತಿದೆ. ಆದರೆ ಕರ್ನಾಟಕಕ್ಕೆ ಮಾತ್ರ ಪ್ರತಿ ಮಗುವಿಗೆ 2400-2800 ರೂಪಾಯಿ ನಿಗದಿ ಪಡಿಸಿದೆ. ಆ ಅನುದಾನವನ್ನೂ ಬಿಡುಗಡೆ ಮಾಡಿಲ್ಲ. ಹಲವು ಬಾರಿ ಅಧಿಕಾರಿಗಳ ತಂಡ ದೆಹಲಿಗೆ ತೆರಳಿ ಈ ಸಂಬಂಧ ಮನವಿ ನೀಡಿದ್ದಾರೆ. ಕೇಂದ್ರ ಶಿಕ್ಷಣ ಸಚಿವರ ಭೇಟಿಗೆ ನಾನೂ ಸಮಯ ಕೇಳಿದ್ದೇನೆ. ಆದರೆ ಈವರೆಗೆ ಅವಕಾಶ ದೊರೆತಿಲ್ಲ ಎಂದು ಹೇಳಿದರು.

ರಾಗಿ ಮಾಲ್ಟ್ ವಿತರಣೆ: ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಹಾಲಿನೊಂದಿಗೆ ರಾಗಿ ಮಾಲ್ಟ್ ವಿತರಣೆಗೆ ಇನ್ನು 10-15 ದಿನದಲ್ಲಿ ಚಾಲನೆ ನೀಡಲಾಗುವುದು. ಮೈಸೂರಿನ ಸಿಎಫ್‌ಟಿಆರ್‌ಐ ನಿಂದ ಪ್ರಮಾಣಿಕೃತಗೊಂಡಿರುವ ರಾಗಿ ಮಾಲ್ಟನ್ನು ಕ್ಷೀರ ಭಾಗ್ಯ ಯೋಜನೆ ಅಡಿ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳ ಮಕ್ಕಳಿಗೆ ನೀಡಲಾಗುವುದು. ಬಜೆಟ್ ಅಧಿವೇಶನದಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಗುವುದು. ವಾರದಲ್ಲಿ ಮೂರು ದಿನ ರಾಗಿ ಮಾಲ್ಟ್ ಹಾಗೂ ವಾರದಲ್ಲಿ ಎರಡು ದಿನ ಮೊಟ್ಟೆ ನೀಡಲಾಗುವುದು. ಈಗ ವಾರಕ್ಕೆ ಒಂದು ದಿನ ಮೊಟ್ಟೆ ನೀಡುತ್ತಿದ್ದು, ಇನ್ನೊಂದು ದಿನ ಹೆಚ್ಚಿಗೆ ನೀಡುವುದರಿಂದ 160 ಕೋಟಿ ಹೆಚ್ಚುವರಿ ಹಣ ಬೇಕಾಗುತ್ತದೆ. ಇದನ್ನು ಸಿಎಸ್ ಆ‌ರ್ ನಿಧಿಯಿಂದ ಸಂಗ್ರಹಿಸಲಾಗುವುದು ಎಂದರು.

ನೀಟ್ ತರಬೇತಿ: ಸರ್ಕಾರದಿಂದಲೇ ಕೇಂದ್ರಗಳನ್ನು ತೆರೆದು ಮಕ್ಕಳಿಗೆ ನೀಟ್ (NEET) ತರಬೇತಿ ನೀಡಲು ಉದ್ದೇಶಿಸಲಾಗಿದೆ ಎಂದರು.

andolanait

Recent Posts

ಮೈಸೂರು | ಬೆಳ್ಳಂಬೆಳಗ್ಗೆ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಹತ್ಯೆ!

ಮೈಸೂರು : ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ಬೆಳ್ಳಂಬೆಳಿಗ್ಗೆಯೇ ಮಚ್ಚು ಲಾಂಗುಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿರುವ ಘಟನೆ…

2 hours ago

ಕೊಲ್ಕತ್ತಾದಲ್ಲಿ ಮೆಸ್ಸಿ ಮೇನಿಯಾ : ಫುಟ್‌ಬಾಲ್‌ ದಂತಕಥೆಗೆ ಭರ್ಜರಿ ಸ್ವಾಗತ

ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…

3 hours ago

ಟ್ರಂಪ್‌ ಸುಂಕ ಹೇರಿದ್ದ ರದ್ದಿಗೆ ಅಮೆರಿಕ ಸಂಸತ್ತು ನಿಲುವಳಿ

ನ್ಯೂಯಾರ್ಕ್‌ : ಭಾರತದ ಮೇಲೆ ಡೊನಾಲ್ಡ್‌ ಟ್ರಂಪ್‌ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…

4 hours ago

ಘೋರ ದುರಂತ | ಕರ್ತವ್ಯ ನಿರತ KSRTC ಮೇಲೆ ಹರಿದ ಲಾರಿ ; ಸ್ಥಳದಲ್ಲೇ ಸಾವು

ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…

4 hours ago

ಹವಾಮಾನ ಏರುಪೇರಿನಿಂದಾಗಿ ಕಾಳುಮೆಣಸಿಗೂ ಕಂಟಕ

ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್‌ ಡಿಸೋಜ ಮಡಿಕೇರಿ: ಈ ಬಾರಿಯ…

6 hours ago

ಅವಳಿ ತಾಲ್ಲೂಕುಗಳಲ್ಲಿ ಭತ್ತದ ಕಟಾವು ಜೋರು

ಭೇರ್ಯ ಮಹೇಶ್‌ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…

7 hours ago