ಬೆಳಗಾವಿ : ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಕೈದಿಗಳಿಗೆ ರಾಜ್ಯಾಥಿತ್ಯ ಸೌಲಭ್ಯಗಳು ಸಿಗುತ್ತಿರುವ ಬಗ್ಗೆ ವಿಧಾನಪರಿಷತ್‌ನಲ್ಲಿ ಪ್ರಸ್ತಾಪವಾಯಿತು.
ಶೂನ್ಯವೇಳೆಯಲ್ಲಿ ಸದಸ್ಯ ಧನಂಜಯ್ ಸರ್ಜಿ ಅವರು ವಿಷಯ ಪ್ರಸ್ತಾಪಿಸಿದರು. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್ ವಿಷಯವನ್ನು ಸಹ ಅವರು ಪ್ರಸ್ತಾಪ ಮಾಡಿದರು. ನಟ ದರ್ಶನ್ ಪ್ರಕರಣವೂ ಉಲ್ಲೇಖ ಮಾಡಿ, ಖೈದಿಗಳಿಗೆ ರಾಜಾತಿಥ್ಯದ ವಿಚಾರ ಜಗಜ್ಜಾಹಿರಾಗಿದೆ. ರಾಜ್ಯ ಸರ್ಕಾರದ ವೈಫಲ್ಯದಿಂದ ಸಾಮಾಜಿಕ ಜಾಲತಾಣ ನಗೆಪಾಟಲಿಗಿಡಾಗಿದೆ. ಆದರೆ ಜೈಲುಗಳ ಸುಧಾರಣೆಗೆ ಸಮಿತಿ ವರದಿ ನೀಡಿದೆ. ವರದಿ ನೀಡಿ ವರ್ಷಗಳೇ ಕಳೆದರೂ ಸರ್ಕಾರದ ಕವಾಟಿನಲ್ಲಿ ಧೂಳು ತಿನ್ನುತ್ತಿವೆ ಎಂದರು.
ಇದೇ ಸಮಯದಲ್ಲಿ ಸರ್ಕಾರ ಮತ್ತೊಂದು ಹೊಸದಾಗಿ ಸಮಿತಿ ರಚನೆ ಮಾಡಿ ಆದೇಶಿಸಿದೆ. ೨೦೧೭ ಅದೇ ಕೇಂದ್ರ ಕಾರಾಗೃಹದಲ್ಲಿ ತಮಿಳುನಾಡಿನ ರಾಜಕಾರಣಿಗೆ ವಿಐಪಿ ಸೌಲಭ್ಯ ನೀಡಲಾಗಿತ್ತು. ೨೦೨೨ರಲ್ಲಿ ಶಂಕಿತ ಉಗ್ರರು ಹಾಗೂ ಖೈದಿಗಳು ಮೊಬೈಲ್ ಬಳಕೆ ಬಗ್ಗೆ ಮಾಡಿದ್ದರು. ವಿಡಿಯೋ ಬಯಲಾಗಿದ್ದಾಗ ಎಡಿಜಿಪಿ ಮುರುಗನ್ ಸಮಿತಿ ರಚನೆಯಾಗಿ ವರದಿ ನೀಡಿದರು, ಆದರೆ ಅಧಿಕಾರಗಳ ವರ್ಗಾವಣೆ ಬಿಟ್ಟು ಯಾವುದೇ ಸುಧಾರಣೆ ಆಗಲಿಲ್ಲ ಎಂದು ಆಕ್ಷೇಪಿಸಿದರು.
ಕಳೆದ ವರ್ಷವೂ ನಟ ದರ್ಶನ್ ಹಾಗೂ ಅವರ ಸಹಚರರಿಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ರಾಜ್ಯಾತಿ ನೀಡಲಾಗಿದೆ ಎಂಬ ಆರೋಪ ಬಂದಿತ್ತು. ಅಂದು ಸಿಸಿಬಿ ಮುಖ್ಯಸ್ತರಾಗಿದ್ದ ಐಜಿಪಿ ಡಾ.ಚಂದ್ರಗುಪ್ತ ನೇತೃತ್ತದ ಸಮಿತಿಯನ್ನು ಇದೇ ಕಾಂಗ್ರೆಸ್ ಸರ್ಕಾರ ನೇಮಕ ಮಾಡಿದ್ದು. ಅವರು ಸುದೀರ್ಘ ಅಧ್ಯಯನದೊಂದಿಗೆ ೪ ತಿಂಗಳ ಹಿಂದೆ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ.
ಅನೇಕ ಶಿಫಾರಸ್ಸುಗಳನ್ನು ಮಾಡಿದ್ದರೂ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೇ ವರದಿ ಕಪಾಟು ಸೇರಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸರ್ಕಾರವು ತನ್ನ ವಿಫಲತೆಯನ್ನು ಮರೆಮಾಚಲು ಸಮಿತಿಯ ಮೇಲೊಂದು ಸಮಿತಿ ನೇಮಕ ಮಾಡುವುದನ್ನು ಬಿಟ್ಟು ಈಗಾಗಲೇ ಸಮಿತಿಗಳು ನೀಡಿರುವ ವರದಿ ಅನುಷ್ಠಾನ ಮಾಡಿ ಎಂದು ಸರ್ಜಿ ಒತ್ತಾಯಿಸಿದರು.
ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…
ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…
ಮಂಡ್ಯ : ಸಕ್ಕರೆ ನಗರ ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ರಾಜ್ಯ, ರಾಷ್ಟ್ರ ಹಾಗೂ…