cm siddaramiha
ಬೆಂಗಳೂರು : ಪರಿಶಿಷ್ಟ ಜಾತಿಗಳಲ್ಲಿನ ಒಳಮೀಸಲಾತಿ ಕುರಿತಂತೆ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್‍ದಾಸ್ ಅವರ ನೇತೃತ್ವದ ಅಯೋಗ ಇಂದು ತನ್ನ ವರದಿಯನ್ನು ಸಲ್ಲಿಸಿದ್ದು, ಆಗಸ್ಟ್ 7ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ವರದಿಯನ್ನು ಮಂಡನೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ವರದಿ ಸ್ವೀಕರಿಸಿದ ಬಳಿಕ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾ. ನಾಗಮೋಹನ್‍ದಾಸ್ ಅವರ ಆಯೋಗದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇಂದು ತಮನ್ನು ಭೇಟಿ ಮಾಡಿ ವರದಿ ಕೊಟ್ಟಿದ್ದಾರೆ. ಮುಂದಿನ ಸಚಿವ ಸಂಪುಟಸಭೆಯಲ್ಲಿ ಇದರ ಮಂಡನೆಯಾಗಲಿದೆ ಎಂದರು.
ಸಮೀಕ್ಷೆ ವರದಿ ವೈಜ್ಞಾನಿಕವಾಗಿ ನಡೆದಿಲ್ಲ ಎಂದು ಯಾರೂ ಹೇಳಿಲ್ಲ. ಅಂತಹ ಯಾವ ಟೀಕೆಗಳು ಇರಲಿಲ್ಲ ಎಂದು ಪ್ರಶ್ನೆಯೊಂದಕ್ಕೆ ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.
ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ನ್ಯಾಯಮೂರ್ತಿ ನಾಗಮೋಹನ ದಾಸ್ ಅವರು, ಜು.1 ರಂದು ತಮ್ಮ ನೇತೃತ್ವದಲ್ಲಿ ಆಯೋಗ ರಚನೆ ಮಾಡಲಾಗಿದ್ದು, ಮಾರ್ಚ್ 27ರಲ್ಲಿ ಮಧ್ಯಂತರ ವರದಿ ನೀಡಿದ ತಾವು ನಿಖರವಾದ ದತ್ತಾಂಶಗಳ ಕೊರತೆಯಿದೆ ಎಂದು ತಿಳಿಸಿದ್ದು, ಅದರಂತೆ ಹೊಸ ಸಮೀಕ್ಷೆಗೆ ಸಚಿವ ಸಂಪುಟಸಭೆ ಅನುಮತಿ ನೀಡಿತ್ತು ಎಂದರು.
ಮೇ 5ರಿಂದ 60 ದಿನಗಳ ಕಾಲ ಸಮೀಕ್ಷೆ ನಡೆಸಲಾಗಿದೆ. ದೇಶದಲ್ಲೇ ಮೊದಲ ಬಾರಿಗೆ ಮೊಬೈಲ್ ಆ?ಯಪ್‍ನ್ನು ಬಳಸಿ 27 ಲಕ್ಷ ಕುಟುಂಬಗಳ 1.07ಕೋಟಿ ಜನರನ್ನು ಸಮೀಕ್ಷೆ ನಡೆಸಿದ್ದೇವೆ ಎಂದರು.
ದಾಖಲಾತಿಗಳನ್ನು ಪರಿಶೀಲಿಸಲಾಗಿದೆ. ದತ್ತಾಂಶ ಅನುಬಂಧ ಸೇರಿ 1766 ಪುಟಗಳ ವರದಿಯನ್ನು ಸಲ್ಲಿಸಿದ್ದೇವೆ. ಇನ್ನು ಮುಂದೆ ವರದಿ ಸರ್ಕಾರದ ಅಸ್ತಿಯಾಗಿದ್ದು ನನ್ನ ನಿಯಂತ್ರಣದಲ್ಲಿ ಇಲ್ಲ. ಯಾವುದೇ ವಿಚಾರಗಳಿದ್ದರೂ ಸರ್ಕಾರದ ಬಳಿಯೇ ಕೇಳಿ ಎಂದು ಹೇಳಿದರು.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…