ರಾಜ್ಯ

ರಾಜ್ಯ ರಾಜಕೀಯ ಬೆಳವಣಿಗೆಗಳ ಬಗ್ಗೆ ವರಿಷ್ಠರೊಂದಿಗೆ ಚರ್ಚೆ: ಸಿದ್ದರಾಮಯ್ಯ

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಹಾಗೂ ವಿಪಕ್ಷಗಳ ನಡೆ ಹಾಗೂ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಪಕ್ಷದ ವರಿಷ್ಠರೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು (ಆಗಸ್ಟ್ 24) ಗಾಂಧಿಭವನದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.

ನಿನ್ನೆ ಉಪಮುಖ್ಯಮಂತ್ರಿಗಳು, ಗೃಹ ಸಚಿವರು ಸೇರಿದಂತೆ ಕೆಲ ಸಚಿವರೊಂದಿಗೆ ನವದೆಹಲಿಗೆ ತೆರಳಾಗಿತ್ತು. ಕರ್ನಾಟಕದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಪಕ್ಷದ ವರಿಷ್ಠರಿಗೆ ವಿವರಿಸಲಾಗಿದೆ. ವಿಪಕ್ಷಗಳು ಮುಡಾ ಪ್ರಕರಣಕ್ಕೆ ಪಾದಯಾತ್ರೆ ಮಾಡಿದ್ದು, ಅದನ್ನು ರಾಜಕೀಯವಾಗಿ ಎದುರಿಸುವ ಬಗ್ಗೆ ಚರ್ಚಿಸಲಾಗಿದೆ. ನಮ್ಮ ಸರ್ಕಾರ ರಾಜ್ಯಪಾಲರು ಕೊಟ್ಟಿರುವ ಅನುಮತಿ ಕಾನೂನು ಬಾಹಿರ ಮತ್ತು ಸಂವಿಧಾನ ಬಾಹಿರವಾಗಿದೆ ಎಂದು ತಿಳಿಸಿ, ರಾಜ್ಯಪಾಲರ ನಿರ್ಣಯವನ್ನು ಉಚ್ಛ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದ್ದು, ವಿಚಾರಣೆ ಆಗಸ್ಟ್ 29 ಕ್ಕೆ ಮುಂದೂಡಿದೆ. ಸಚಿವ ಸಂಪುಟದಲ್ಲಿಯೂ ಅವರ ನಿರ್ಣಯವನ್ನು ಸ್ಪಷ್ಟವಾಗಿ ಖಂಡಿಸಿರುವ ಬಗ್ಗೆಯೂ ವರಿಷ್ಠರಿಗೆ ವಿವರಿಸಲಾಗಿದೆ ಎಂದರು.

ರಾಜ್ಯಪಾಲರ ನಡೆಯ ವಿರುದ್ಧ ಮಾನ್ಯ ರಾಷ್ಟ್ರಪತಿಗಳಿಗೆ ದೂರು ನೀಡುವ ಬಗ್ಗೆ ನವದೆಹಲಿಯಲ್ಲಿ ಚರ್ಚೆಯಾಗಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಈ ಬಗ್ಗೆ ಎಲ್ಲಾ ಸಾಧ್ಯತೆಗಳಿಗೂ ಅವಕಾಶವಿದೆ ಎಂದರು.

ಸರ್ಕಾರ ಸಲ್ಲಿಸಿದ ಬಿಲ್ ಗಳನ್ನು ರಾಜ್ಯಪಾಲರು ವಾಪಸ್ಸು ಕಳಿಸಿದ್ಧು, ರಾಜಭವನ ಮತ್ತು ಸರ್ಕಾರದ ನಡುವೆ ಸಂಘರ್ಷ ಪ್ರಾರಂಭವಾಗಿದೆಯೇ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿ, ಆರು ಮಸೂದೆಗಳನ್ನು ವಾಪಸ್ಸು ಕಳಿಸಲಾಗಿದ್ದು, ಈ ಬಗ್ಗೆ ಮತ್ತೊಮ್ಮೆ ಸಚಿವಸಂಪುಟದಲ್ಲಿ ಚರ್ಚಿಸಲಾಗುವುದು. ರಾಜ್ಯಪಾಲರಿಗೆ ಸಲ್ಲಿಸಲಾಗಿದ್ದ ಮಸೂದೆಗಳು, ವಿಧಾನಸಭೆ ಹಾಗೂ ವಿಧಾನಪರಿಷತ್ತಿನಲ್ಲಿ ಅಂಗೀಕೃತಗೊಂಡಿದ್ದರಿಂದ , ಈ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದರು.

ದರ ಹೆಚ್ಚಳದ ಬಗ್ಗೆ ಚರ್ಚಿಸಿ ಕ್ರಮ: ಸರ್ಕಾರ ಬಸ್ ದರಗಳನ್ನು ಹೆಚ್ಚಿಸಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸುತ್ತಾ, ಬಸ್ ದರದಂತೆಯೇ ನೀರಿನ ದರವನ್ನು ಏರಿಸಲಾಗುವುದು ಎಂದಿದ್ದರು. ಆದರೆ ಯಾವುದೇ ತೀರ್ಮಾನವನ್ನು ಇನ್ನೂ ಕೈಗೊಂಡಿಲ್ಲ. ನೀರಿನ ದರವನ್ನೂ ಬಹಳ ವರ್ಷಗಳಿಂದ ಏರಿಸಿಲ್ಲ. ಜಲಮಂಡಳಿಯಲ್ಲಿ ಕಷ್ಟ ಪರಿಸ್ಥಿತಿಯಿದ್ದು, ದರಗಳನ್ನು ಹೆಚ್ಚಿಸುವ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಕೆಪಿಎಸ್ ಸಿ ಪರೀಕ್ಷೆ ಬಗ್ಗೆ ಗೊಂದಲವಿರುವ ಬಗ್ಗೆ ಮಾತನಾಡುತ್ತಾ, ಪರೀಕ್ಷೆ ಬಗ್ಗೆ ಗೊಂದಲವಿಲ್ಲ. ಪರೀಕ್ಷೆಯ ದಿನಾಂಕವನ್ನು ಮುಂದೂಡಲಾಗುವುದಿಲ್ಲ. ಕೃಷ್ಣಜನ್ಮಾಷ್ಟಮಿಯಂದು ಇರುವ ಪರೀಕ್ಷೆಯ ದಿನಾಂಕವನ್ನು ಬದಲಾಯಿಸಲಾಗಿದೆ ಎಂದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮೈಸೂರಲ್ಲಿ ನಾಳೆಯಿಂದ ಮಾಗಿ ಉತ್ಸವ

ಮೈಸೂರು: ಹೊಸ ವರ್ಷಾಚರಣೆ ಹಾಗೂ ಕ್ರಿಸ್‌ಮಸ್‌ಗೆ ಮೈಸೂರು ನಗರಕ್ಕೆ ಪ್ರವಾಸಿಗರನ್ನು ಸೆಳೆಯುವ ದೃಷ್ಟಿಯಿಂದ ಅರಮನೆ ಆವರಣದಲ್ಲಿ  ಫಲಪುಷ್ಪ ಪ್ರದರ್ಶನ ಒಳಗೊಂಡ…

5 mins ago

ಮಂಡ್ಯ ಜಿಲ್ಲೆ ಅಪ್ಪಟ ಕನ್ನಡಿಗರು ವಾಸಿಸುವ ನಾಡು: ಸಿಎಂ ಸಿದ್ದರಾಮಯ್ಯ

ಮಂಡ್ಯ: ಈ ಜಿಲ್ಲೆಯು ಅಪ್ಪಟ ಕನ್ನಡಿಗರು ವಾಸಿಸುವ ಜಿಲ್ಲೆಯಾಗಿದ್ದು, ಕನ್ನಡ ಭಾಷೆ ಮತ್ತು ಸಂಸ್ಕೃತಿಯ ವಿಕಾಸಕ್ಕೆ ಈ ಜಿಲ್ಲೆಯ ಕೊಡುಗೆ…

10 mins ago

10ನೇ ತರಗತಿವರೆಗೆ ಕನ್ನಡ ಮಾಧ್ಯಮವೇ ಕಡ್ಡಾಯವಾಗಬೇಕು: ಗೊ.ರು.ಚ ಹಕ್ಕೊತ್ತಾಯ

ಮಂಡ್ಯ: ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ. ಈ ನಿಟ್ಟಿನಲ್ಲಿ 10ನೇ ತರಗತಿವರೆಗೆ ಕನ್ನಡ ಮಾಧ್ಯಮ ಕಡ್ಡಾಯವಾಗಬೇಕು. ಇಂಗ್ಲೀಷ್ ಮಾಧ್ಯಮದ ಶಾಲೆ ತೆರೆಯುವುದನ್ನು…

24 mins ago

ಕಾರು ಪಲ್ಟಿ; ಇಬ್ಬರಿಗೆ ಗಾಯ

ಹನೂರು: ತಾಲ್ಲೂಕಿನ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಪಲ್ಟಿಯಾಗಿ ಇಬ್ಬರು ಗಾಯಗೊಂಡಿರುವ ಘಟನೆ ಜರುಗಿದೆ.…

37 mins ago

ಸಂವಿಧಾನ ವಿಧಿ 371(ಜೆ) ಅಡಿಯಲ್ಲಿ ಶೈಕ್ಷಣಿಕ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಅಭಿವೃದ್ಧಿ: ಪ್ರಿಯಾಂಕ್‌ ಖರ್ಗೆ

ಕಲಬುರ್ಗಿ: ಸಂವಿಧಾನದ ವಿಧಿ 371 ( ಜೆ ) ಜಾರಿಗೆ ಬಂದ ನಂತರ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ‌ ಹಾಗೂ…

1 hour ago

ಕಾಂಗ್ರೆಸ್ ಸರ್ಕಾರದಲ್ಲಿ ಅಕ್ಷರಶಃ ಕರ್ನಾಟಕ ರೌಡಿಗಳ ರಾಜ್ಯವಾಗಿದೆ: ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಅವಾಚ್ಯ ಪದ ಬಳಕೆ ಪ್ರಕರಣ ವಿಚಾರವಾಗಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಅವರನ್ನು…

2 hours ago