ಬೆಂಗಳೂರು: ಮೇಕೆದಾಟು ಯೋಜನೆಗೆ ಅಡ್ಡಿಪಡಿಸಿ, ತಮಿಳುನಾಡು ಸಲ್ಲಿಸಿದ್ದ ತಕರಾರು ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸುವ ಮೂಲಕ ರಾಜ್ಯದ ಜನರ ಪ್ರಾರ್ಥನೆ ಫಲಿಸಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಅಣೆಕಟ್ಟೆ ನಿರ್ಮಿಸಿರುವ ರಾಜ್ಯದ ಸದುದ್ದೇಶಕ್ಕೆ ಸಿಹಿ ಸುದ್ದಿ ಕೇಳಿ ಬಂದಿದೆ ಎಂದರು.
ಇದನ್ನು ಓದಿ : ಮೇಕೆದಾಟು ಯೋಜನೆ: ಕರ್ನಾಟಕಕ್ಕೆ ಮತ್ತೊಂದು ಜಯ
ನಮ್ಮ ನೀರು ನಮ್ಮ ಹಕ್ಕು. ಕರ್ನಾಟಕಕ್ಕೆ ಸುಪ್ರೀಂಕೋರ್ಟ್‍ನಲ್ಲಿ ನ್ಯಾಯ ಸಿಕ್ಕಿದೆ. ಜನರ ಭಾವನೆಗಳು ಮತ್ತು ಕಷ್ಟಗಳಿಗೆ ಸ್ಪಂದನೆ ದೊರಕಿದೆ. ಈ ತೀರ್ಪು ಮೇಕೆದಾಟು ಯೋಜನೆ ಮುಂದುವರಿಸಲು ಸಹಕಾರಿಯಾಗಬಹುದು ಎಂದು ಹೇಳಿದರು.
ಮೇಕೆದಾಟು ಯೋಜನೆಯಿಂದಾಗಿ ತಮಿಳುನಾಡು ತನ್ನ ಪಾಲಿನ ನೀರನ್ನು ಪಡೆದುಕೊಳ್ಳಲಿದೆ. ಕರ್ನಾಟಕ ಸರ್ಕಾರ ತನ್ನದೇ ನೆಲದಲ್ಲಿ ತಾನೇ ಹಣ ಖರ್ಚುಮಾಡಿ ಸಮತೋಲಿತ ಅಣೆಕಟ್ಟು ನಿರ್ಮಿಸುತ್ತದೆ. ಇದರಿಂದ ತಮಿಳುನಾಡಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಹೇಳಿದರು.
ಇಂತಹ ವಿಚಾರಗಳಲ್ಲಿ ಮಧ್ಯ ಪ್ರವೇಶಿಸುವುದಿಲ್ಲ. ಕೇಂದ್ರ ಜಲ ಆಯೋಗ ಬಗೆಹರಿಸಬೇಕೆಂದು ಸುಪ್ರೀಂಕೋರ್ಟ್ ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಯೋಜನೆಗೆ ಅನುಮತಿ ನೀಡದೆ ಕೇಂದ್ರ ಜಲ ಆಯೋಗಕ್ಕೆ ಬೇರೆ ಆಯ್ಕೆಗಳಿಲ್ಲ. ಹೀಗಾಗಿ ನಮಗೆ ನ್ಯಾಯ ಒದಗಿಸಿಕೊಡಲೇಬೇಕು ಎಂದರು.
1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…
ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…