ಬೆಂಗಳೂರು: ಸ್ಪೀಕರ್ ಪೀಠಕ್ಕೆ ಆಗೌರವ ತೋರಿದ ಆರೋಪದ ಮೇಲೆ ಬಿಜೆಪಿಯ 18 ಶಾಸಕರನ್ನು 6 ತಿಂಗಳುಗಳ ಕಾಲ ಅಮಾನತು ಮಾಡಿ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಆದೇಶ ಹೊರಡಿಸಿದ್ದಾರೆ.
ವಿಧಾನಸಭೆಯ ಇತಿಹಾಸದಲ್ಲಿ ಮೊದಲ ಬಾರಿಗೆ 18 ಶಾಸಕರನ್ನು ಅಮಾನತು ಮಾಡಿ ಸ್ಪೀಕರ್ ಆದೇಶ ನೀಡಿದ್ದಾರೆ.
ಮುಸ್ಲಿಂರಿಗೆ ಮೀಸಲಾತಿ ನೀಡುವ ವಿಧೇಯಕ್ಕೆ ವಿರೋಧ ಹಾಗೂ ಹನಿಟ್ರ್ಯಾಪ್ ಆರೋಪವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕೆಂದು ಸದನದ ಭಾವಿಗಿಳಿದು ಬಿಜೆಪಿ ಶಾಸಕರು ಪ್ರತಿಭಟನೆ ನಡೆಸಿ ಸ್ಪೀಕರ್ ಯುಟಿ ಖಾದರ್ ಮೇಲೆ ಖಾಲಿ ಪೇಪರ್ ಎಸೆದಿದ್ದರು. ಸ್ಪೀಕರ್ ಪೀಠಕ್ಕೆ ಆಗೌರವ ತೋರಿದ ಹಿನ್ನಲೆಯಲ್ಲಿ ಬಿಜೆಪಿಯ ಶಾಸಕರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಅಮನತ್ತಾದ ಬಿಜೆಪಿ ಶಾಸಕರು ಇನ್ನು 6 ತಿಂಗಳವರೆಗೆ ವಿಧಾನಸಭೆಗೆ ಪ್ರವೇಶಿಸುವಂತಿಲ್ಲ. ಹಾಗೆಯೇ ಅವರ ದಿನದ ಭತ್ಯೆಗೂ ಕೋಕ್ ನೀಡಲಾಗಿದೆ. ಜೊತೆಗೆ ಸ್ಥಾಯಿ ಸಮಿತಿಗೆ ಅವಕಾಶಗಳಿಲ್ಲ ಎಂದು ಸ್ಪೀಕರ್ ಆದೇಶ ಹೊರಡಿಸಿದ್ದಾರೆ.
ಅಮಾನತುಗೊಂಡ ಬಿಜೆಪಿ ಶಾಸಕರು:
ದೊಡ್ಡಗೌಡನ ಪಾಟೀಲ್, ಅಶ್ವತ್ ನಾರಾಯಣ್, ಎಸ್.ಆರ್.ವಿಶ್ವನಾಥ್, ಬಿಎ ಬಸವರಾಜ್, ಎಂ.ಆರ್.ಪಾಟೀಲ್, ಚೆನ್ನಬಸಪ್ಪ, ಬಿ.ಸುರೇಶಗೌಡ, ಉಮಾನಾಥ ಎ.ಕೋಟ್ಯಾನ್, ಶರಣು ಸರಲಗರ, ಸಿಕೆ ರಾಮಮೂರ್ತಿ, ಬಿಬಿ ಹರೀಶ್, ಮುನಿರತ್ನ, ಡಾ.ವೈ.ಭರತ್ ಶೆಟ್ಟಿ, ಬಸವರಾಜ ಮತ್ತಿಮೂಡ್, ಡಾ.ಚಂದ್ರು ಲಮಾಣಿ, ಡಾ.ಶೈಲೇಂದ್ರ ಬೆಲ್ದಾಳೆ, ಯಶಪಾಲ್ ಎ.ಸುವರ್ಣ, ಧೀರಜ್ ಮುನಿರಾಜು.
ಬೀದರ್: ನಿಗೂಢ ವಸ್ತುವೊಂದು ಸ್ಫೋಟಗೊಂಡ ಪರಿಣಾಮ ಆರು ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಹುಮನಾಬಾದ್ ತಾಲ್ಲೂಕಿನ ಮೋಳಕೇರಾ ಗ್ರಾಮದಲ್ಲಿ ನಡೆದಿದೆ.…
ಮೈಸೂರು: ಮಾಜಿ ಸಚಿವ ಸಿ.ಟಿ.ರವಿ ಅವರಿಂದು ಮೈಸೂರು ಮುಕ್ತ ವಿಶ್ವವಿದ್ಯಾನಿಲಯದಿಂದ ಪಿಎಚ್‌ಡಿ ಪದವಿ ಪಡೆದಿದ್ದಾರೆ. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್…
ಮುಂಬೈ: ವಿಮಾನ ಪತನ ದುರಂತದಲ್ಲಿ ಸಾವನ್ನಪ್ಪಿದ ಡಿಸಿಎಂ ಅಜಿತ್ ಪವಾರ್ ಪತ್ನಿ ಸುನೇಂದ್ರ ಪವಾರ್ ಅವರನ್ನು ಉಪಮುಖ್ಯಮಂತ್ರಿ ಸ್ಥಾನಕ್ಕೆ ನೇಮಿಸಲು…
ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಪಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ…
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಾಳೆ 9ನೇ ಬಾರಿಗೆ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಮೂಲಕ…
ಬೆಂಗಳೂರು: ಖ್ಯಾತ ಉದ್ಯಮಿ ಮತ್ತು ಕಾನ್ಪಿಡೆಂಟ್ ಗ್ರೂಪ್ ಸಂಸ್ಥಾಪಕ ಹಾಗೂ ಅಧ್ಯಕ್ಷರಾಗಿದ್ದ ಸಿ.ಜೆ.ರಾಯ್ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು,…