ರಾಜ್ಯ

ಮಹಿಳಾ ವಿವಸ್ತ್ರ ಪ್ರಕರಣ : ಸ್ವಯಂ ದೂರು ದಾಖಲಿಸಿಕೊಂಡ ರಾಷ್ಟ್ರೀಯ ಮಹಿಳಾ ಆಯೋಗ

ಬೆಂಗಳೂರು : ಹುಬ್ಬಳ್ಳಿಯಲ್ಲಿ ಮಹಿಳೆಯ ವಿವಸ್ತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗ ಸ್ವಯಂ ದೂರು ದಾಖಲಿಸಿಕೊಂಡಿದೆ.

ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮಹಿಳೆಯನ್ನು ಬಂಧಿಸುವ ವೇಳೆ ಪೊಲೀಸರು ಆಕೆಯ ಮೇಲೆ ಹಲ್ಲೆ ನಡೆಸಿ, ಬಟ್ಟೆಗಳನ್ನು ವಿವಸ್ತ್ರಗೊಳಿಸಿದ್ದರೆಂಬುದರ ಬಗ್ಗೆ ಸಾಮಾಜಿಕ ಜಾಲಾತಾಣಗಳಲ್ಲಿ ವಿಡಿಯೋಗಳು ವೈರಲ್ ಆದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ವಿಜಯ್ ರಹತ್ಕರ್ ಅವರು ಸ್ವಯಂ ದೂರು ದಾಖಲಿಸಿಕೊಂಡಿದ್ದಾರೆ.

ಇದು ಮಹಿಳೆಯ ಘನತೆ, ವೈಯಕ್ತಿಕ ಸ್ವಾತಂತ್ರ್ಯ, ಲಿಂಗ ಆಧರಿತ ಹಿಂಸೆಯಿಂದ ರಕ್ಷಣೆಯ ಗಂಭೀರ ಉಲ್ಲಂಘನೆಯಾಗಿದೆ. ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಬೇಕೆಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ.ಎ.ಸಲೀಂ ಅವರಿಗೆ ಪತ್ರ ಬರೆದಿದ್ದಾರೆ.

ಒಂದು ವೇಳೆ ಪ್ರಕರಣ ಕುರಿತು ಎಫ್‍ಐಆರ್ ದಾಖಲಾಗದಿದ್ದರೆ ವಿಡಿಯೋ ಸಾಕ್ಷ್ಯಗಳ ಪರಿಶೀಲನೆ ಸೇರಿದಂತೆ ನ್ಯಾಯಯುತ ನಿಷ್ಪಕ್ಷಪಾತ ತನಿಖೆಯನ್ನು ನಡೆಸಬೇಕೆಂದು ಸೂಚಿಸಿದ್ದಾರೆ.‌

ದುಷ್ಕತ್ಯ ಕಂಡುಬಂದಲ್ಲಿ ತಪ್ಪು ಮಾಡಿದ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಮತ್ತು ಕ್ರಿಮಿನಲ್ ಮೊಕದ್ದಮೆಯನ್ನು ದಾಖಲಿಸಬೇಕು. ಘಟನೆಯಿಂದ ಮಾನಸಿಕವಾಗಿ ಕುಗ್ಗಿರುವ ಮಹಿಳೆಗೆ ವೈದ್ಯಕೀಯ ನೆರವು, ಮಾನಸಿಕ ಬೆಂಬಲ, ಪುನರ್ ವಸತಿ ಸೇರಿದಂತೆ ಪರಿಹಾರವನ್ನು ಕಲ್ಪಿಸಬೇಕೆಂದು ಮನವಿ ಮಾಡಿದ್ದಾರೆ.

ಪೊಲೀಸ್‌ ಇಲಾಖೆ ಈವರೆಗೂ ಪ್ರಕರಣ ಕುರಿತು ತೆಗೆದುಕೊಂಡಿರುವ ವಿವರವಾದ ಕ್ರಮಗಳನ್ನು ಐದು ದಿನದೊಳಗೆ ಆಯೋಗಕ್ಕೆ ಸಲ್ಲಿಸಬೇಕು ಎಂದು ಪೊಲೀಸ್ ಮಹಾ ನಿರ್ದೇಶಕರಿಗೆ ಪತ್ರದಲ್ಲಿ ಅಧ್ಯಕ್ಷರು ಮನವಿ ಮಾಡಿದ್ದಾರೆ.‌

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹುಣಸೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ

ಹುಣಸೂರು: ತಾಲ್ಲೂಕಿನ ಬಿಳಿಕೆರೆ ಗ್ರಾಮದ ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಒಡಿಶಾ…

4 hours ago

ಹನೂರು| ಕೆಸರಿನಲ್ಲಿ ಸಿಲುಕಿ ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆ ಫಲಿಸದೇ ಸಾವು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆಗೆ…

4 hours ago

ಪಶ್ಚಿಮ ಬಂಗಾಳದಲ್ಲಿ ನಾಳೆ ಮೊದಲ ಹಂತದ ಚುನಾವಣೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಳೆ ಮತದಾನ ನಡೆಯಲಿದೆ. ನಾಳೆ ಉತ್ತರ ಬಂಗಾಳದ ಎಲ್ಲಾ 152…

6 hours ago

24 ಗಂಟೆಯ ಒಳಗಡೆ ಉತ್ತರಿಸಿ: ಮಲ್ಲಿಕಾರ್ಜುನ ಖರ್ಗೆಗೆ ಆಯೋಗ ನೋಟಿಸ್‌

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕಾಗಿ ಚುನಾವಣಾ ಆಯೋಗವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ…

6 hours ago

ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.…

7 hours ago

ಧಾರವಾಡ ಆಕಾಶವಾಣಿ ಕೇಂದ್ರ ಸ್ಥಳಾಂತರಿಸದಂತೆ ಅಶ್ವಿನಿ ವೈಷ್ಣವ್‌ ಆದೇಶ

ನವದೆಹಲಿ: ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದೆ. ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ…

8 hours ago