Mysore
31
clear sky

Social Media

ಶುಕ್ರವಾರ, 13 ಮಾರ್ಚ್ 2026
Light
Dark

ಎಲ್‌ಪಿಜಿ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯ: ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

There is no financial shortage in the government Minister G Parameshwara

ಬೆಂಗಳೂರು: ಇರಾನ್‌-ಇಸ್ರೇಲ್‌ ಯುದ್ಧ ಭಾರತದ ಮೇಲೂ ಪರಿಣಾಮ ಬೀರಿದ್ದು, ಗ್ಯಾಸ್‌ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ.

ಈ ಬಗ್ಗೆ ಗೃಹ ಸಚಿವ ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದು, ಈಗ ನಾವು ರಾಜಕೀಯ ಹೊರತುಪಡಿಸಿದ ಕೆಲಸ ಮಾಡಬೇಕಿದೆ ಎಂದು ಹೇಳಿದ್ದಾರೆ.

ರಾಜ್ಯದ ಹಲವೆಡೆ ಯಾರೂ ನಿರೀಕ್ಷೆ ಮಾಡದ ಬೆಳವಣಿಗೆ ಆಗಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಆಗುತ್ತಿರುವ ಯುದ್ಧದಿಂದ ಎಫೆಕ್ಟ್‌ ಆಗಿದೆ. ಕೇಂದ್ರ ಸರ್ಕಾರ ಸಹ ಕಮಿಟಿ ರಚನೆ ಮಾಡಿ ಕ್ರಮಕ್ಕೆ ಮುಂದಾಗಿದೆ. ರಾಜ್ಯದಲ್ಲೂ ಆದ ಅನಿರೀಕ್ಷಿತ ಬೆಳವಣಿಗೆ ಬಗ್ಗೆ ಮಾಡಲಾಗುತ್ತಿದೆ ಎಂದು ಹೇಳಿದರು.

ಜನಸಾಮಾನ್ಯರು, ಹೋಟೆಲ್‌ಗಳಿಗೆ ತೊಂದರೆ ಆಗುತ್ತಿದೆ. ಕೇಂದ್ರ ಸರ್ಕಾರಕ್ಕೆ ನಮ್ಮ ರಾಜ್ಯದಿಂದಲೂ ಪತ್ರ ಬರೆಯುತ್ತೇವೆ. ಸಂಬಂಧಪಟ್ಟವರ ಜೊತೆ ರಾಜ್ಯ ಮುಖ್ಯ ಕಾರ್ಯದರ್ಶಿ ಕೆಲಸ ಮಾಡಬೇಕಿದೆ. ಈಗ ರಾಜಕೀಯ ಮಾಡುತ್ತಾ ಕೂರತೆ ಅದಕ್ಕೆ ಪರಿಹಾರ ಸಿಗಲ್ಲ. ಕೇಂದ್ರ ಸರ್ಕಾರವೇ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಪರಮೇಶ್ವರ್‌ ಹೇಳಿದರು.

 

Tags:
error: Content is protected !!