Mysore
18
clear sky

Social Media

ಭಾನುವಾರ, 14 ಡಿಸೆಂಬರ್ 2025
Light
Dark

ನಾಳೆ 19 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಜಂತುಹುಳು ನಿವಾರಣಾ ಮಾತ್ರೆ ವಿತರಣೆ

ಬೆಂಗಳೂರು: 2024-25ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಬಾಲಸ್ವಾಸ್ಥ್ಯ ಕಾರ್ಯಕ್ರಮದಡಿ 17ನೇ ಸುತ್ತಿನ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನವನ್ನು ಆಚರಣೆ ಮಾಡಲಾಗುತ್ತದೆ.

ಈ ಹಿನ್ನೆಲೆಯಲ್ಲಿ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ 1-19ನೇ ವಯೋಮಾನದ ಎಲ್ಲಾ ಮಕ್ಕಳಿಗೆ ಮಾತ್ರೆ ವಿತರಣೆಗೆ ಸೂಚನೆ ನೀಡಲಾಗಿದೆ.

ನಾಳೆ ಜಂತುಹುಳು ನಿವಾರಕ ಮಾತ್ರೆಯನ್ನು ಅಂಗನವಾಡಿ ಹಾಗೂ ಶಾಲೆಗಳಲ್ಲಿ ಮಕ್ಕಳಿಗೆ ಕೊಡಲಾಗುತ್ತದೆ. ನಾಳೆ ತಪ್ಪದೇ ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಗೈರು ಹಾಜರಾಗದಂತೆ ನೋಡಿಕೊಳ್ಳಬೇಕು ಎಂದು ಮನವಿ ಮಾಡಿದೆ.

ಇನ್ನು ಒಂದು ವೇಳೆ ಕಾರಣಾಂತರಗಳಿಂದ ನಾಳೆ ಶಾಲೆಗೆ ಹಾಜರಾಗದ ಮಕ್ಕಳಿಗೆ ಡಿಸೆಂಬರ್.‌16 ರಂದು ಮಾಪ್‌ ಅಪ್‌ ರೌಂಡ್‌ ನಡೆಸಲಾಗುತ್ತದೆ. ಮನೆ ಮನೆಗೆ ಭೇಟಿ ನೀಡಿ, ತಪ್ಪಿ ಹೋದ ಎಲ್ಲಾ ಮಕ್ಕಳಿಗೂ ಜಂತು ನಿವಾರಕ ಮಾತ್ರೆಯನ್ನು ಕೊಡಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.

 

Tags:
error: Content is protected !!