ಬೆಂಗಳೂರು: 2024-25ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಬಾಲಸ್ವಾಸ್ಥ್ಯ ಕಾರ್ಯಕ್ರಮದಡಿ 17ನೇ ಸುತ್ತಿನ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನವನ್ನು ಆಚರಣೆ ಮಾಡಲಾಗುತ್ತದೆ.
ಈ ಹಿನ್ನೆಲೆಯಲ್ಲಿ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ 1-19ನೇ ವಯೋಮಾನದ ಎಲ್ಲಾ ಮಕ್ಕಳಿಗೆ ಮಾತ್ರೆ ವಿತರಣೆಗೆ ಸೂಚನೆ ನೀಡಲಾಗಿದೆ.
ನಾಳೆ ಜಂತುಹುಳು ನಿವಾರಕ ಮಾತ್ರೆಯನ್ನು ಅಂಗನವಾಡಿ ಹಾಗೂ ಶಾಲೆಗಳಲ್ಲಿ ಮಕ್ಕಳಿಗೆ ಕೊಡಲಾಗುತ್ತದೆ. ನಾಳೆ ತಪ್ಪದೇ ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಗೈರು ಹಾಜರಾಗದಂತೆ ನೋಡಿಕೊಳ್ಳಬೇಕು ಎಂದು ಮನವಿ ಮಾಡಿದೆ.
ಇನ್ನು ಒಂದು ವೇಳೆ ಕಾರಣಾಂತರಗಳಿಂದ ನಾಳೆ ಶಾಲೆಗೆ ಹಾಜರಾಗದ ಮಕ್ಕಳಿಗೆ ಡಿಸೆಂಬರ್.16 ರಂದು ಮಾಪ್ ಅಪ್ ರೌಂಡ್ ನಡೆಸಲಾಗುತ್ತದೆ. ಮನೆ ಮನೆಗೆ ಭೇಟಿ ನೀಡಿ, ತಪ್ಪಿ ಹೋದ ಎಲ್ಲಾ ಮಕ್ಕಳಿಗೂ ಜಂತು ನಿವಾರಕ ಮಾತ್ರೆಯನ್ನು ಕೊಡಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…