madhu bangarappa
ಬೆಂಗಳೂರು : ಮಕ್ಕಳಿಗೆ ಇನ್ನು ಮುಂದೆ ಶಾಲೆಯಲ್ಲಿ ಮೊಟ್ಟೆ ಹಾಗೂ ಬಾಳೆಹಣ್ಣು ವಿತರಣೆ ಮಾಡುವ ಸಂಬಂಧ ಪೋಷಕರಿಂದ ಕಡ್ಡಾಯವಾಗಿ ಒಪ್ಪಿಗೆ ಪತ್ರ ಪಡೆದು ತೀರ್ಮಾನ ಮಾಡಲಾಗುತ್ತದೆ ಎಂದು ಶಾಲಾ ಸಾಕ್ಷರತಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಬಿಜೆಪಿ ಸದಸ್ಯ ರವಿಕುಮಾರ್ ಅವರು, ಬಾಳೆಹಣ್ಣು ಮತ್ತು ಮೊಟ್ಟೆ ವಿತರಣೆಯಲ್ಲಿ ತಾರತಮ್ಯ ಮಾಡಲಾಗುತ್ತಿದೆ. ವಾರದಲ್ಲಿ ಮೂರು ದಿನ ಮೊಟ್ಟೆ, ಮೂರು ದಿನ ಬಾಳೆಹಣ್ಣು ವಿತರಣೆ ಮಾಡಲಾಗುತ್ತಿದೆ. ಇನ್ನೂ ಕೆಲವು ಕಡೆ ಇದು ಸಮರ್ಪಕವಾಗಿ ವಿತರಣೆಯಾಗುತ್ತಿಲ್ಲ ಎಂದು ಆಕ್ಷೇಪಿಸಿದರು.
ಅಜೀಂ ಪ್ರೇಮ್‌ಜಿ ಪ್ರತಿಷ್ಠಾನ ಇದಕ್ಕಾಗಿ ಅನುದಾನವನ್ನು ನೀಡುತ್ತಿದೆ. ಎಲ್ಲ ಭಾಗಗಳಲ್ಲಿ ಮೊಟ್ಟೆ, ಬಾಳೆಹಣ್ಣು ಹಾಗೂ ಕೆಲವು ಭಾಗಗಳಲ್ಲಿ ಮಾತ್ರ ಹೆಚ್ಚು ದಿನ ಮೊಟ್ಟೆಯನ್ನು ಕೊಡಲಾಗುತ್ತದೆ. ಆದರೆ ಕೆಲವು ಕಡೆ ಇದು ತಾರತಮ್ಯ ನೀತಿಯಿಂದ ಕೂಡಿದೆ ಎಂದು ಸಚಿವರ ಗಮನ ಸೆಳೆದರು.
ಇದಕ್ಕೆ ಉತ್ತರಿಸಿದ ಸಚಿವ ಮಧುಬಂಗಾರಪ್ಪ, ಮೊಟ್ಟೆ ಮತ್ತು ಬಾಳೆಹಣ್ಣು ವಿತರಣೆ ಮಾಡುವ ಬಗ್ಗೆ ಕೆಲವು ಕಡೆ ಆಕ್ಷೇಪ ಕೇಳಿಬಂದಿವೆ. ಕೆಲವು ಕಡೆ ಪೋಷಕರು ನಮ ಮಕ್ಕಳು ಮೊಟ್ಟೆ ತಿನ್ನುವುದಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸುತ್ತಾರೆ.
ಹೀಗಾಗಿ ಮುಂದಿನ ದಿನಗಳಲ್ಲಿ ಶಾಲಾ ಪ್ರವೇಶವಾದ ತಕ್ಷಣವೇ ವಿದ್ಯಾರ್ಥಿಗಳ ಪೋಷಕರಿಂದ ಮೊಟ್ಟೆ ತಿನ್ನುವ ಇಲ್ಲವೇ ಬಾಳೆಹಣ್ಣು ತಿನ್ನುವ ಬಗ್ಗೆ ಅನುಮತಿ ಪತ್ರವನ್ನು ಪಡೆಯುತ್ತೇವೆ. ಕೆಲವು ಮಕ್ಕಳಿಗೆ ಮೊಟ್ಟೆ ತಿನ್ನುವುದಕ್ಕೆ ಪೋಷಕರಿಂದ ವಿರೋಧವಿದೆ ಎಂದರು.
ನವದೆಹಲಿ: ಶನಿವಾರ ಐದನೇ ದಿನವೂ ಇಂಡಿಗೋ ವಿಮಾನ ಹಾರಾಟ ಅಡಚಣೆಗಳು ಮುಂದುವರೆದಿದ್ದು, ದೇಶಾದ್ಯಂತ ಹಲವಾರು ವಿಮಾನಗಳು ರದ್ದಾಗಿವೆ. ಕಳೆದ ನಾಲ್ಕು…
ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…
ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…
ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…
ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…
ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ…