ರಾಜ್ಯ

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ; ಕಂದಾಯ ಇಲಾಖೆಯಲ್ಲಿ ಕ್ರಾಂತಿಕಾರಿ ಪ್ರಗತಿ : ಸಿಎಂ ಮೆಚ್ಚುಗೆ

ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಿ ದಾಖಲೆ ನಿರ್ಮಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿ, ರಾಜ್ಯದ ಜಿಡಿಪಿ ದೇಶದಲ್ಲೇ ನಂಬರ್ ಒನ್ ಆಗಿಸಿದ್ದು ನಮ್ಮ ಜನಪರ ಸರ್ಕಾರ ಎಂದರು.‌

ಜಿಲ್ಲಾಡಳಿತ ಮತ್ತು ಕಂದಾಯ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಸರ್ಕರದ ಸಹಸ್ರ ದಿನಾಚರಣೆ ಮತ್ತು ಒಂದು ಲಕ್ಷ ಮಂದಿ ಫಲಾನುಭವಿಗಳಿಗೆ ಹಕ್ಕು ಪತ್ರ ನೀಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕಂದಾಯ ಇಲಾಖೆಗೆ ಕೃಷ್ಣಬೈರೇಗೌಡರು ಸಚಿವರಾದ ಮೇಲೆ ಸರ್ಕಾರದಲ್ಲಿ ಕ್ರಾಂತಿಕಾರಿ ಪ್ರಗತಿ ಆಗಿದೆ ಎಂದು ಸಚಿವರ ಸಾಧನೆಗೆ ಸಿಎಂ ವೇದಿಕೆಯಲ್ಲೇ ಮೆಚ್ಚುಗೆ ವ್ಯಕ್ತಪಡಿಸಿದರು.‌

ರಾಜ್ಯದ ಜಿಡಿಪಿ ದೇಶದಲ್ಲೇ ನಂಬರ್ ಒನ್ ಆಗಿಸಿದ್ದು ನಮ್ಮ ಜನಪರ ಸರ್ಕಾರ. GST ತೆರಿಗೆ ಸಂಗ್ರಹದಲ್ಲೂ ರಾಜ್ಯ ದಾಖಲೆ ವೇಗದಲ್ಲಿ ಸಾಗುತ್ತಿದೆ ಎಂದು ದಾಖಲೆಗಳನ್ನು ಮಂಡಿಸಿದರು.

ಈ ಎಲ್ಲಾ ಸಾಧನೆ ಮತ್ತು ದಾಖಲೆಗಳನ್ನು ಕೇಂದ್ರ ಸರ್ಕಾರದ ಅನ್ಯಾಯದ ನಡುವೆಯೂ ಮಾಡಿ ತೋರಿಸಿದ್ದೇವೆ. ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಬಸವರಾಜ ಬೊಮ್ಮಾಯಿಯವರೂ, ಪ್ರಹ್ಲಾದ್ ಜೋಶಿ, ಜಗದೀಶ್ ಶೆಟ್ಟರ್ ಕೂಡ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಕೇಂದ್ರದಲ್ಲಿ ಬಾಯಿ ಬಿಡುತ್ತಿಲ್ಲ‌ ಎಂದು ಸಿಎಂ ಆಕ್ರೋಶ ವ್ಯಕ್ತಪಡಿಸಿದರು.

ನಮ್ಮ ಸರ್ಕಾರ ಬಂದು 2 ವರ್ಷ 9 ತಿಂಗಳಾಯ್ತು. ನಾವು ಕೊಟ್ಟ ಭರವಸೆಗಳಲ್ಲಿ 243 ಭರವಸೆಗಳನ್ನು ಈಡೇರಿಸಿದ್ದೇವೆ. ಉಳಿದ ಅವಧಿಯಲ್ಲಿ ಬಾಕಿ ಭರವಸೆಗಳನ್ನೂ ಈಡೇರಿಸಲಾಗುವುದು. 2023-18 ರಲ್ಲೂ ಕೊಟ್ಟ ಭರವಸೆಗಳನ್ನೆಲ್ಲಾ ಈಡೇರಿಸಿ, ಪ್ರಣಾಳಿಕೆಯಲ್ಲಿ ಇಲ್ಲದ 30 ಭರವಸೆಗಳನ್ನು ಈಡೇರಿಸಿ “ನುಡಿದಂತೆ ನಡೆದು” ದಾಖಲೆ ಮಾಡಿದ್ದೇವೆ ಎಂದರು.

ಅಧಿಕಾರ ಇದ್ದಾಗ ಕೊಟ್ಟ ಭರವಸೆ ಈಡೇರಿಸದ ಬಿಜೆಪಿ ಈಗ ನಮ್ಮ ಖಜಾನೆ ಖಾಲಿ ಆಗಿದೆ ಎನ್ನುವ ಸುಳ್ಳು ಪ್ರಚಾರದಲ್ಲಿ ನಿರತವಾಗಿದೆ. ಇಲ್ಲಿಯವರೆಗೂ ಗ್ಯಾರಂಟಿಗಳ ಮೂಲಕ 118000 ಕೋಟಿ ರೂಪಾಯಿಗಳನ್ನು ನೇರವಾಗಿ ರಾಜ್ಯದ ಜನರ ಖಾತೆಗೆ ಹಾಕಿದ್ದೇವೆ ಎಂದರು.

ಅಮಾರ್ತ್ಯಸೇನ್, ಅಭಿಜಿತ್ ಬ್ಯಾನರ್ಜಿ ಮುಂತಾದ ಆರ್ಥಿಕ ತಜ್ಞರ ಜೊತೆಗೆ ದಿನ ಪತ್ರಿಕೆಗಳು ಮತ್ತು ವಿಶ್ವ ವಿದ್ಯಾಲಯಗಳ ಅಧ್ಯಯನಗಳು ವ್ಯಕ್ತಪಡಿಸಿದ್ದ ಸದಾಭಿಪ್ರಾಯಗಳನ್ನು ಮುಖ್ಯಮಂತ್ರಿಗಳು ಓದಿ ವಿವರಿಸಿ,
ಬಿಜೆಪಿಯವರು ಜನರನ್ನು ತಪ್ಪು ದಾರಿಗೆಳೆಯುವುದು ಖಂಡನೀಯ ಎಂದರು.

ನಮ್ಮ ಸರ್ಕಾರ 1000 ದಿನಗಳನ್ನು ಯಶಸ್ವಿಯಾಗಿ ಆಡಳಿತ ನಡೆಸಿದ್ದು, ನುಡಿದಂತೆ ನಡೆಯುವುದು ಕಾಂಗ್ರೆಸ್ ಸರ್ಕಾರ ಮಾತ್ರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಾವು ಎಲ್ಲ ಜಾತಿ ಧರ್ಮ ಭಾಷೆಯ ಜನರಿಗೆ ಸೇರಿದಂತಹ ಎಲ್ಲರನ್ನೊಳಗೊಂಡ ಅಭಿವೃದ್ಧಿಯಲ್ಲಿ ನಮ್ಮ ಸರ್ಕಾರ ನಂಬಿಕೆಯಿರಿಸಿದೆ. ನಾವು ಅಸಮಾನತೆ ನೀಗಿಸುವ ಕಾಯಕದಲ್ಲಿ ತೊಡಗಿದ್ದೇವೆ. ಬಿಜೆಪಿಯವರು 4 ವರ್ಷ ಏನು ಮಾಡಿಲ್ಲ. ಅವರು ಜನರನ್ನು ತಪ್ಪು ದಾರಿಗೆಳೆಯುವುದು ಖಂಡನೀಯ. ಬಿಜೆಪಿಯವರ ಮಾತುಗಳನ್ನು ಗಂಭೀರವಾಗಿ ತೆಗೆದುಕೊಳ್ಳುವ ಅಗತ್ಯವಿಲ್ಲ ಎಂದರು.

ಸರ್ಕಾರ ನಿನ್ನೆಗೆ ಒಂದು ಸಾವಿರ ದಿನ ಪೂರೈಸಿದ್ದು, ಈ ಸಾವಿರ ದಿನಗಳಲ್ಲಿ ನಮ್ಮ ಸಾಧನಾ ಸಮಾವೇಶ ನಮ್ಮ ಬದ್ಧತೆಯಾಗಿದೆ. ಬಡವರು, ದಲಿತರು, ಹಿಂದುಳಿದ ವರ್ಗದವರು,ಅಲ್ಪಸಂಖ್ಯಾತರು, ಮಹಿಳೆಯರು, ಕಾರ್ಮಿಕರ ಪರವಾಗಿ ನಾವು ನಿಲ್ಲುತ್ತೇವೆ ಎಂದು ಮತ್ತೊಮ್ಮೆ ತಿಳಿಸುತ್ತೇನೆ ಎಂದು ಪುನರುಚ್ಚರಿಸಿದರು.

ಕೇಂದ್ರ ಸರ್ಕಾರ, ರಾಜ್ಯಕ್ಕೆ ಅನ್ಯಾಯ ಮಾಡಿದೆ. ಜಿಎಸ್ ಟಿ ಸಂಗ್ರಹಣೆಯಲ್ಲಿ ಕೊರತೆಯಾಗಿದ್ದು, ರಾಜ್ಯಕ್ಕೆ 12 – 15 ಸಾವಿರ ಕೋಟಿ ನಷ್ಟವಾಗಿದೆ. ನಮಗೆ ಬರುವ ನ್ಯಾಯಯುತ ಪಾಲು ಸಿಗುತ್ತಿಲ್ಲ. ಜೆಜೆಎಂ ನಲ್ಲಿ 15 ಸಾವಿರ ಕೋಟಿ ಇನ್ನೂ ಕೊಟ್ಟಿಲ್ಲ. ಈ ಅನುದಾನ ನೀಡಿದರೆ, ರಾಜ್ಯದ ಬಹಳಷ್ಟು ರಾಜ್ಯದಲ್ಲಿ ಬಹಳಷ್ಟು ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತವೆ ಎಂದರು. ರಾಜ್ಯದ ಹಣಕಾಸಿನ ಪರಿಸ್ಥಿತಿಯನ್ನು ಪರಿಶೀಲಿಸಿ, ಜಿಲ್ಲೆಯ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಭರವಸೆ ನೀಡಿದರು.

“ಜನಸೇವೆಯಲ್ಲಿ ಸಾರ್ಥಕ ಸಾವಿರ ದಿನ, ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ” ಕಾರ್ಯಕ್ರಮದಲ್ಲಿ ಉತ್ತಮ ಕಾರ್ಯಕ್ಷಮತೆ ತೋರಿದ ಅಧಿಕಾರಿಗಳನ್ನೂ ಗುರುತಿಸಿ ಸನ್ಮಾನಿಸಲಾಯಿತು.

ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರಾದ ಕೃಷ್ಣ ಭೈರೇಗೌಡ, ಶಿವಾನಂದ ಪಾಟೀಲ್, ಹೆಚ್.ಕೆ. ಪಾಟೀಲ್, ಸತೀಶ್ ಜಾರಕಿಹೊಳಿ, ಪರಮೇಶ್ವರ್, ಕೆ.ಹೆಚ್. ಮುನಿಯಪ್ಪ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಹೆಚ್.ಎಂ ರೇವಣ್ಣ, ವಿಧಾನ ಪರಿಷತ್ತಿನಲ್ಲಿ ಆಡಳಿತ ಪಕ್ಷದ ಮುಖ್ಯ ಸಚೇತಕರಾದ ಸಲೀಂ ಅಹ್ಮದ್ ಹಾಗೂ 20 ಕ್ಕೂ ಹೆಚ್ಚು ಮಂದಿ ಶಾಸಕರುಗಳು ಮತ್ತು ಮುಖಂಡರುಗಳು, ನಾಯಕರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

3 hours ago

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

5 hours ago

ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ : ಮಾಜಿ ಸಚಿವ ಎನ್.ಮಹೇಶ್‌

ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಮಾರ್ಮಿಕವಾಗಿ…

6 hours ago

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣವಚನ ಸ್ವೀಕಾರ ; ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…

6 hours ago

ಪೊನ್ನಾಚಿ | ಚಿರತೆ ದಾಳಿಗೆ ಕುರಿ ಬಲಿ

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…

7 hours ago

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

9 hours ago