ರಾಜ್ಯ

ಬಿಪಿಎಲ್‌ ಕಾರ್ಡ್‌ದಾರರಿಗೆ ಎಣ್ಣೆ, ಬೆಳೆಕಾಳು ವಿತರಣೆ ; ಆಹಾರ ಸಚಿವ ಮುನಿಯಪ್ಪ

ಮೈಸೂರು : ರಾಜ್ಯದ ಬಡತನ ರೇಖೆಗಿಂತ ಕೆಳಗಿರುವ ಕಾರ್ಡ್ ದಾರರಿಗೆ ಎಣ್ಣೆ, ಬೆಳೆ ಕಾಳುಗಳನ್ನು ವಿತರಿಸಲಾಗುವುದು ಎಂದು ಆಹಾರ ನಾಗರಿಕ ಪೂರೈಕೆ ಸಚಿವ ಕೆ ಹೆಚ್ ಮುನಿಯಪ್ಪ ತಿಳಿಸಿದ್ದಾರೆ.

ಮೈಸೂರಿನ ವಸ್ತುಪ್ರದರ್ಶನ ಆವರಣದಲ್ಲಿ ಏರ್ಪಡಿಸಲಾಗಿದ್ದ ಆಹಾರ ಮಳಿಗೆಯನ್ನು ಉದ್ಘಾಟಿಸಿ ನಂತರ ಮಾತನಾಡಿದ ಅವರು, ಈಗಾಗಲೇ ಬಿಪಿಎಲ್ ಕಾರ್ಡ್ ದಾರರಿಗೆ ತಲಾ 10ಕೆಜಿ ಅಕ್ಕಿ ವಿತರಣೆ ಮಾಡುತ್ತಿದ್ದು ಅದರಲ್ಲಿ 5ಕೆಜಿ ಅಕ್ಕಿಯ ಬದಲು ಎಣ್ಣೆ, ಬೆಳೆ ಕಾಳುಗಳನ್ನು ವಿತರಿಸಲು ತೀರ್ಮಾನಿಸಲಾಗಿದೆ. ಮುಂದಿನ ತಿಂಗಳಿನಿಂದ ಈ ಯೋಜನೆ ಜಾರಿಗೊಳ್ಳಲಿದೆ. ಕಾರ್ಡ್ ದಾರರ ಬೇಡಿಕೆಗೆ ಅನುಗುಣವಾಗಿ ಅಕ್ಕಿಯ ಬದಲು ಪೌಷ್ಟಿಕಾಂಶಯುಕ್ತ ಬೆಳೆ ಕಾಳು ಹಾಗೂ ಎಣ್ಣೆ ವಿತರಿಸಲಿದ್ದೇವೆ ಎಂದು ಮಾಹಿತಿ ನೀಡಿದರು.

ರಾಜ್ಯದಲ್ಲಿ 4ಕೋಟಿ 50 ಲಕ್ಷ ಪಲಾನುಭವಿಗಳಿದ್ದಾರೆ ಎಲ್ಲರಿಗೂ ಈ ಯೋಜನೆ ಅನುಷ್ಠಾನವಾಗಲಿದೆ. ಈಗಾಗಲೇ ಪಲಾನುಭವಿಗಳು ತೆರಿಗೆದಾರಾರಾಗಿದ್ದರೆ ಹಾಗೂ 7ಎಕರೆಗೂ ಹೆಚ್ಚು ಜಮೀನು ಹೊಂದಿದ್ದರೆ ಅಂತವರ ಕಾರ್ಡ್ ಗಳು ಬಿಪಿಎಲ್ ನಿಂದ ಎಪಿಎಲ್ ಗೆ ವರ್ಗಹಿಸಲಾಗುವುದು, ಈ ಪ್ರಕ್ರಿಯೆ ನಡೆಸಲಾಗುತ್ತದೆ, ಒಂದು ವೇಳೆ ಲೋಪದೋಷ ಕಂಡುಬಂದಲ್ಲಿ ಸ್ಥಳೀಯ ತಹಶೀಲ್ದಾರ್ ರನ್ನು ಭೇಟಿಯಾಗಿ ಸರಿಪಡಿಸಿಕೊಳ್ಳಬಹುದು ಎಂದರು.

ಇದನ್ನು ಓದಿ: ಬಿಪಿಎಲ್‌ ಕಾರ್ಡ್‌ | ಅನರ್ಹರ ಪತ್ತೆಗೆ ಹೊಸ ತಂತ್ರಾಂಶ

ಇದೆ ವೇಳೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹದೇವಪ್ಪ ಮಾತನಾಡಿ, ರಾಜ್ಯ ಸರ್ಕಾರ ಬಡವರಿಗಾಗಿ ತಂದಿರುವ ಅನ್ನಭಾಗ್ಯ ಯೋಜನೆಯು ಸಮರ್ಪಕವಾಗಿ ಆಹಾರ ಇಲಾಖೆ ಪೂರೈಕೆ ಮಾಡುತ್ತಿದೆ, ಇಲಾಖೆಯ ನಿರ್ಧಾರದಂತೆ ಎಣ್ಣೆ ಕಾಳುಗಳನ್ನು ವಿತರಿಸಲು ಮುಂದಾಗಿರುವುದು ಸ್ವಾಗತಾರ್ಹ, ಪಲಾನುಭವಿಗಳಿಗೆ ತಲುಪಿಸುವುದೇ ಸರ್ಕಾರದ ಮೂಲ ಉದ್ದೇಶವಾಗಿದೆ, ಆಹಾರ ವಿತರಣೆಯ ವೇಳೆಯಲ್ಲಿ ಕಾರ್ಡ್ ದಾರಾರಿಂದ ಹಣ ಪಡೆಯುತ್ತಿದ್ದರೆ ಅವುಗಳನ್ನು ಸರಿಪಡಿಸಲಾಗುವುದು.

ರಾಜ್ಯ ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿ ಹಾಗೂ ಹೈ ಕಮಾಂಡ್ ಗೆ ಬಿಟ್ಟ ವಿಚಾರವಾಗಿದೆ, ಹಲವಾರು ಹಿರಿಯ ಶಾಸಕರು ಸಚಿವರಾಗಲು ಬಯಸುತ್ತಿರುವುದು ಸಹಜ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಕನ್ನಡ ಚಿತ್ರರಂಗವೂ ಅರಸು-ಸಿದ್ದರಾಮಯ್ಯ ಆಡಳಿತ ರಂಗವೂ

ವೈಡ್‌ ಆಂಗಲ್‌  ಬಾ.ನಾ.ಸುಬ್ರಹ್ಮಣ್ಯ  ಅತಿ ಹೆಚ್ಚು ಕಾಲ ನಾಡಿನ ಆಡಳಿತ ಚುಕ್ಕಾಣಿ ಹಿಡಿದಿದ್ದವರು ದೇವರಾಜ ಅರಸು. ಆ ದಾಖಲೆಯನ್ನು ಮೊನ್ನೆ…

21 seconds ago

ಇಂದು ಫಲಪುಷ್ಪ ಪ್ರದರ್ಶನದ ಮಧುರ ವಸ್ತ್ರೋತ್ಸವ

ಮಂಡ್ಯ: ಜಿಲ್ಲಾಡಳಿತ ಮತ್ತು ಮಂಡ್ಯ ಜಿಲ್ಲಾ ಪಂಚಾಯಿತಿ,ತೋಟಗಾರಿಕೆ ಇಲಾಖೆ ಮತ್ತು ಕೈಮಗ್ಗ ಮತ್ತು ಜವಳಿ ಇಲಾಖೆ ಸಹ ಯೋಗದಲ್ಲಿ ಫಲಪುಷ್ಪ…

6 mins ago

ಜನವರಿ.24ರಿಂದ ಮಂಜಿನ ನಗರಿಯಲ್ಲಿ ಫಲಪುಷ್ಪ ಪ್ರದರ್ಶನ

ನವೀನ್ ಡಿಸೋಜ ಗಮನ ಸೆಳೆಯಲಿದೆ ೧೮ ಅಡಿ ಎತ್ತರದ ಶ್ರೀ ಭಗಂಡೇಶ್ವರ ದೇವಸ್ಥಾನ ಕಲಾಕೃತಿ; ಹಲವು ವಿಭಿನ್ನತೆಯೊಂದಿಗೆ ಆಯೋಜನೆ ಮಡಿಕೇರಿ:…

14 mins ago

ನಗರ ಪಾಲಿಕೆಯಲ್ಲಿ ವೈದ್ಯ ಪದವಿ ಆರೋಗ್ಯಾಧಿಕಾರಿಗೆ ಕೊಕ್: ಇಂಜಿನಿಯರ್‌ಗೆ ಹೊಸ ಹುದ್ದೆ!

ಎಚ್.ಎಸ್.ದಿನೇಶ್‌ಕುಮಾರ್ ಸರ್ಕಾರದ ನಿರ್ಧಾರಕ್ಕೆ ಮಾಜಿ ಮಹಾಪೌರರು, ಮಾಜಿ ಸದಸ್ಯರ ವಿರೋಧ ಮೈಸೂರು: ಬಿಬಿಎಂಪಿ ಹೊರತುಪಡಿಸಿ ಮೈಸೂರು ನಗರಪಾಲಿಕೆ ಸೇರಿದಂತೆ ರಾಜ್ಯದ…

22 mins ago

ದಿಲ್ಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ 2026 : ಕೃಷಿ ಮತ್ತು ತಂತ್ರಜ್ಞಾನದ ಸಮಾಗಮ

ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…

9 hours ago