R Ashok
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕ ಆರ್.ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು, ಮಕ್ಕಳ ಕಲ್ಯಾಣಕ್ಕಾಗಿ ಮೀಸಲಾದ ಯೋಜನೆಗಳಲ್ಲಿಯೂ ಗುಣಮಟ್ಟಕ್ಕೆ ಆದ್ಯತೆ ನೀಡದೆ ಸರ್ಕಾರ ನಿರ್ಲಕ್ಷ್ಯ ತೋರಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಳಪೆ ಗುಣಮಟ್ಟದ ಶೂಗಳನ್ನು ಪೂರೈಸಿರುವ ಗುತ್ತಿಗೆದಾರರ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದು, ಗುತ್ತಿಗೆದಾರರನ್ನು ಬ್ಲಾಕ್‌ಲಿಸ್ಟ್‌ಗೆ ಸೇರಿಸಿ, ಈ ಸಂಪೂರ್ಣ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ಇದೇ ವೇಳೆ, ಕಾವೇರಿ 6ನೇ ಹಂತದ ಹೆಸರಿನಲ್ಲಿ 7,000 ಕೋಟಿ ರೂಪಾಯಿ ಮೊತ್ತದ ಹೊಸ ಲೂಟಿಗೆ ರಾಜ್ಯ ಸರ್ಕಾರ ಸಿದ್ಧತೆ ನಡೆಸುತ್ತಿದೆ ಎಂಬ ಗಂಭೀರ ಆರೋಪವನ್ನೂ ಮಾಡಿದ ಅವರು, ಕುಡಿಯುವ ನೀರಿನ ಯೋಜನೆಗಳಲ್ಲಿ ಸೋರಿಕೆ ಮತ್ತು ಅಕ್ರಮ ಸಂಪರ್ಕಗಳನ್ನು ತಡೆಯುವಲ್ಲಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…
ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…