ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಮೈಸೂರು ಜಿಲ್ಲಾಡಳಿತ ಇಂದು ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಆಹ್ವಾನ ಪತ್ರಿಕೆ ನೀಡಿದೆ.
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹಾಗೂ ಮೈಸೂರು ಜಿಲ್ಲಾಡಳಿತದವರು ಇಂದು ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮೈಸೂರು ದಸರಾ ಆಹ್ವಾನ ಪತ್ರಿಕೆ ನೀಡಿ ಆಮಂತ್ರಿಸಿದರು.
ಇದನ್ನು ಓದಿ: ಮೈಸೂರು ದಸರಾ ಉದ್ಘಾಟಿಸಲು ನಾಳೆ ಬಾನು ಮುಷ್ತಾಕ್‌ಗೆ ಅಧಿಕೃತ ಆಹ್ವಾನ
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಹ ಉಪಸ್ಥಿತರಿದ್ದರು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.





