Mysore
28
overcast clouds

Social Media

ಗುರುವಾರ, 06 ಆಗಸ್ಟ್ 2026
Light
Dark

ಮೂರು ತಿಂಗಳು ಜೋಗ್‌ ಫಾಲ್ಸ್‌ಗೆ ಪ್ರವಾಸಿಗರ ನಿರ್ಬಂಧ: ಜಿಲ್ಲಾಡಳಿತ

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಜೋಗ ಜಲಪಾತಕ್ಕೆ ಜಿಲ್ಲಾಡಳಿತದ ವತಿಯಿಂದ ಮೂರು ತಿಂಗಳ ಕಾಲ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಲ್ಲಿ ಇಂದು(ಡಿಸೆಂಬರ್‌.17) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೋಗ ಜಲಪಾತದ ಮುಖ್ಯದ್ವಾರದ ಕಾಮಗಾರಿ ಹಾಗೂ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಹೀಗಾಗಿ ಜನವರಿ 1 ರಿಂದ ಮಾರ್ಚ್‌ 15 ರವರೆಗೆ ಅಂದರೆ ಮೂರು ತಿಂಗಳುಗಳ ಕಾಲ ಪ್ರವಾಸಿಗರಿಗೆ ಹಾಗೂ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಹೇಳಿದ್ದಾರೆ.

ಇನ್ನು ಕಾಮಗಾರಿ ನಡೆಯುವ ವೇಳೆ ಸಾರ್ವಜನಿಕರು ಹಾಗೂ ಪ್ರವಾಸಿಗರಿಗೆ ತೊಂದರೆ ಆಗಬಾರೆಂದು ಭಾವಿಸಿ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಈ ಕಾರಣಕ್ಕೆ ಪ್ರವಾಸಿಗರು ಮತ್ತು ಸಾರ್ವಜನಿಕರು ಸಹಕರಿಸುವಂತೆ ಜಿಲ್ಲಾಧಿಕಾರಿ ಹಾಗೂ ಜೋಗ ಜಲಪಾತದ ನಿರ್ವಹಣಾ ಪ್ರಾಧಿಕಾರದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮನವಿ ಮಾಡಿದ್ದಾರೆ.

Tags:
error: Content is protected !!