ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಜೋಗ ಜಲಪಾತಕ್ಕೆ ಜಿಲ್ಲಾಡಳಿತದ ವತಿಯಿಂದ ಮೂರು ತಿಂಗಳ ಕಾಲ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಇಂದು(ಡಿಸೆಂಬರ್.17) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೋಗ ಜಲಪಾತದ ಮುಖ್ಯದ್ವಾರದ ಕಾಮಗಾರಿ ಹಾಗೂ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಹೀಗಾಗಿ ಜನವರಿ 1 ರಿಂದ ಮಾರ್ಚ್ 15 ರವರೆಗೆ ಅಂದರೆ ಮೂರು ತಿಂಗಳುಗಳ ಕಾಲ ಪ್ರವಾಸಿಗರಿಗೆ ಹಾಗೂ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಹೇಳಿದ್ದಾರೆ.
ಇನ್ನು ಕಾಮಗಾರಿ ನಡೆಯುವ ವೇಳೆ ಸಾರ್ವಜನಿಕರು ಹಾಗೂ ಪ್ರವಾಸಿಗರಿಗೆ ತೊಂದರೆ ಆಗಬಾರೆಂದು ಭಾವಿಸಿ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಈ ಕಾರಣಕ್ಕೆ ಪ್ರವಾಸಿಗರು ಮತ್ತು ಸಾರ್ವಜನಿಕರು ಸಹಕರಿಸುವಂತೆ ಜಿಲ್ಲಾಧಿಕಾರಿ ಹಾಗೂ ಜೋಗ ಜಲಪಾತದ ನಿರ್ವಹಣಾ ಪ್ರಾಧಿಕಾರದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮನವಿ ಮಾಡಿದ್ದಾರೆ.
ನವೀನ್ ಡಿಸೋಜ ೪೩ ಕೋಟಿ ರೂ. ವೆಚ್ಚದ ಕಾಮಗಾರಿ; ಅಂತಿಮ ಹಂತದಲ್ಲಿ ಕೆಲಸ ಮಡಿಕೇರಿ: ಮಾರ್ಚ್ ವೇಳೆಗೆ ಮಡಿಕೇರಿಯ ವೈದ್ಯಕೀಯ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಮಕರ ಸಂಕ್ರಾಂತಿಯಂದು ಹುಲಿಗಿನ ಮುರಡಿ ವೆಂಕಟರಮಣಸ್ವಾಮಿ ಬೆಟ್ಟದಲ್ಲಿ ನಡೆಯುವ ದೊಡ್ಡ ಜಾತ್ರೆಗೆ ಅಂತಿಮ ಹಂತದ ಸಿದ್ಧತೆಗಳು…
ಬಡಗಲಮೋಳೆ, ತೆಂಕಲಮೋಳೆ ಗ್ರಾಮಗಳಲ್ಲಿ ಹಗ್ಗಗಳ ತಯಾರಿಕೆ ವೃತ್ತಿಯಲ್ಲಿ ತೊಡಗಿರುವವರಿಗೆ ವ್ಯಾಪಾರದ ಸುಗ್ಗಿ ಚಾಮರಾಜನಗರ: ಸಂಕ್ರಾಂತಿ ಹೊಸ ಸಂವತ್ಸರದ ಮೊದಲನೇ ಹಬ್ಬ.…
ಎಚ್.ಎಸ್.ದಿನೇಶ್ ಕುಮಾರ್ ಅಗತ್ಯ ವಸ್ತುಗಳ ಖರೀದಿಗೆ ಮುಗಿಬಿದ್ದ ಜನತೆ; ಸ್ವಲ್ಪ ದುಬಾರಿಯಾದ ಅವರೆಕಾಯಿ, ೫೦ ರೂ.ಮುಟ್ಟಿದ ಸೇವಂತಿಗೆ ಮೈಸೂರು: ನಗರದೆಲ್ಲೆಡೆ…
ರಾಷ್ಟ್ರೀಯ ಹೆದ್ದಾರಿ ೨೭೫ರಲ್ಲಿ ಮರಗಳನ್ನು ಕಡಿಯುವ ವಿಚಾರಕ್ಕೆ ನಡೆದ ಅಹವಾಲು ಸಭೆಯಲ್ಲಿ ಸಾರ್ವಜನಿಕರ ಆಕ್ರೋಶ ನಂಜನಗೂಡು: ರಾಷ್ಟ್ರೀಯ ಹೆದ್ದಾರಿ ಸಂಖ್ಯೆ…
ಚಿರಂಜೀವಿ ಸಿ. ಹುಲ್ಲಹಳ್ಳಿ ರಂಗಭೂಮಿ ಕಲಾವಿದ ಶಿವಲಿಂಗಯ್ಯರಿಂದ ಅಪರೂಪದ ಅಂಬೇಡ್ಕರ್ ಛಾಯಾಚಿತ್ರಗಳ ಸಂಗ್ರಹ ಮೈಸೂರು: ‘ಬಾಬಾ ಸಾಹೇಬ್ ಸಮತೆಯೆಡೆಗೆ ನಡೆಗೆ’…