ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಜೋಗ ಜಲಪಾತಕ್ಕೆ ಜಿಲ್ಲಾಡಳಿತದ ವತಿಯಿಂದ ಮೂರು ತಿಂಗಳ ಕಾಲ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಇಂದು(ಡಿಸೆಂಬರ್.17) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೋಗ ಜಲಪಾತದ ಮುಖ್ಯದ್ವಾರದ ಕಾಮಗಾರಿ ಹಾಗೂ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಹೀಗಾಗಿ ಜನವರಿ 1 ರಿಂದ ಮಾರ್ಚ್ 15 ರವರೆಗೆ ಅಂದರೆ ಮೂರು ತಿಂಗಳುಗಳ ಕಾಲ ಪ್ರವಾಸಿಗರಿಗೆ ಹಾಗೂ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಹೇಳಿದ್ದಾರೆ.
ಇನ್ನು ಕಾಮಗಾರಿ ನಡೆಯುವ ವೇಳೆ ಸಾರ್ವಜನಿಕರು ಹಾಗೂ ಪ್ರವಾಸಿಗರಿಗೆ ತೊಂದರೆ ಆಗಬಾರೆಂದು ಭಾವಿಸಿ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಈ ಕಾರಣಕ್ಕೆ ಪ್ರವಾಸಿಗರು ಮತ್ತು ಸಾರ್ವಜನಿಕರು ಸಹಕರಿಸುವಂತೆ ಜಿಲ್ಲಾಧಿಕಾರಿ ಹಾಗೂ ಜೋಗ ಜಲಪಾತದ ನಿರ್ವಹಣಾ ಪ್ರಾಧಿಕಾರದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮನವಿ ಮಾಡಿದ್ದಾರೆ.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…