ರಾಜ್ಯ

ಪ್ಲಾಸ್ಟಿಕ್ ಬಾಟಲಿ ತ್ಯಾಜ್ಯ ನಿರ್ವಹಣೆ ನಿಯಮ ಜಾರಿಗೆ ಜಿಲ್ಲಾ ಮಟ್ಟದ ಸಮಿತಿ : ಈಶ್ವರ ಖಂಡ್ರೆ

ಬೆಂಗಳೂರು : ಅರಣ್ಯ, ಪರಿಸರ ಸಚಿವರ ಸೂಚನೆಯಂತೆ ಪರಿಸರಕ್ಕೆ ಮಾರಕವಾದ ನೀರಿನ ಪ್ಲಾಸ್ಟಿಕ್ ಬಾಟಲಿ ತ್ಯಾಜ್ಯ ನಿರ್ವಹಣೆ ನಿಯಮಗಳ ಜಾರಿ ಮತ್ತು ಮೇಲ್ವಿಚಾರಣೆಗೆ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಡಿಸಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲು ಸರ್ಕಾರಿ ಆದೇಶ ಹೊರಡಿಸಲಾಗಿದೆ.

ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಆಯೋಜಿಸಿದ್ದ ವಿಶ್ವ ಪರಿಸರ ದಿನದ ಕಾರ್ಯಕ್ರಮದಲ್ಲಿ ಈ ಸಂಬಂಧ ಸರ್ಕಾರಿ ಆದೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕೃತವಾಗಿ ಅನಾವರಣ ಮಾಡಿದರು. ಇದರ ಜೊತೆಗೆ ಬೀದಿ ಬದಿಯಲ್ಲಿ ಸ್ಥಳೀಯ ಸಂಸ್ಥೆಗಳಿಂದ ನೆಡುವ ಮರದ ಸುತ್ತ 1 ಮೀಟರ್ ಸುತ್ತಳತೆಯಲ್ಲಿ ಕಾಂಕ್ರೀಟ್ ತೆರವು ಮಾಡುವ ಆದೇಶವನ್ನೂ ಅವರು ಬಿಡುಗಡೆಗೊಳಿಸಿದರು.

ದಿನದಿಂದ ದಿನಕ್ಕೆ ಏಕ ಬಳಕೆ ಪ್ಲಾಸ್ಟಿಕ್ ತ್ಯಾಜ್ಯ ಸಮಸ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಮೊದಲಿಗೆ ನೀರಿನ ಬಾಟಲಿಗಳ ವೈಜ್ಞಾನಿಕ ವಿಲೇವಾರಿಗೆ ವಿಶೇಷ ಗಮನ ನೀಡಿ, ಜಿಲ್ಲೆಯೊಳಗೆ ಉತ್ಪಾದಿಸುವ, ಬಳಸುವ ಮತ್ತು ಮಾರಾಟವಾಗುವ ಪೆಟ್ ಬಾಟಲಿಗಳ ಪ್ರಮಾಣದ ದತ್ತಾಂಶ ಕ್ರೋಡೀಕರಿಸಿ ತ್ಯಾಜ್ಯ ನಿರ್ವಹಣೆ ಮೇಲೆ ನಿಗಾ ಇಡಲು ಜಿಲ್ಲಾ ಪಂಚಾಯ್ತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಉಪ ನಿರ್ದೇಶಕರು ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸಲು ಸರ್ಕಾರಿ ಆದೇಶ ಮಾಡಲಾಗಿದೆ.

ಮೂರು ತಿಂಗಳಿಗೆ ಒಮ್ಮೆ ಸಭೆ ನಡೆಸಿ ಪರಿಶೀಲಿಸಲಿರುವ ಈ ಸಮಿತಿಗಳು, ಜಿಲ್ಲೆಯಲ್ಲಿ ಪ್ಲಾಸ್ಟಿಕ್ ಬಾಟಲಿಗಳ ವೈಜ್ಞಾನಿಕ ವಿಲೇವಾರಿಗೆ ಕ್ರಮ ವಹಿಸಲಿದ್ದು, ಜನರಲ್ಲಿ ಪ್ಲಾಸ್ಟಿಕ್ ತ್ಯಾಜ್ಯದಿಂದ ಆಗಬಹುದಾದ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವನ್ನೂ ಮಾಡಲಿದೆ.

ಮಿನರಲ್ ಯುಕ್ತ ಜಲ ತಯಾರಿಕಾ ಕಂಪನಿಗಳು, ಉತ್ಪಾದಕರ ವಿಸ್ತರಿತ ಹೊಣೆಗಾರಿಕೆ (Extended Producer Responsibility) ಅಡಿಯಲ್ಲಿ ಈ ಬಾಟಲಿಗಳನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಆದೇಶ ಹೊರಡಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಮಾರ್ಚ್ 21ರಂದು ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಸೂಚನೆ ನೀಡಿದ್ದರು.

ಈ ಬಾರಿಯ ವಿಶ್ವ ಪರಿಸರ ದಿನದ ಧ್ಯೇಯವಾಕ್ಯ ‘ಪ್ಲಾಸ್ಟಿಕ್ ಮಾಲಿನ್ಯ ಕೊನೆಗಾಣಿಸೋಣ’ ಎಂಬುದಾಗಿದ್ದು, ಇಂದು ಈ ಆದೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಧಿಕೃತವಾಗಿ ಬಿಡುಗಡೆ ಮಾಡುವುದು ಅರ್ಥಪೂರ್ಣವಾಗಿದೆ.

ರಸ್ತೆ ಬದಿ ವೃಕ್ಷದ ಸುತ್ತ 3 ಅಡಿ ಮಣ್ಣಿರಬೇಕು: ವೃಕ್ಷದ ಸುತ್ತಲೂ ಹಾಕುವ ಕಾಂಕ್ರೀಟ್ ನಿಂದಾಗಿ ಬೇರು ಆಳಕ್ಕೆ ಇಳಿಯದೆ ಮರಗಳು ಮಳೆಗಾಲದಲ್ಲಿ ಧರಾಶಾಯಿಯಾಗುತ್ತಿದ್ದು, ಅನಾಹುತ ಸಂಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ ಮರದ ಸುತ್ತ ಇರುವ ಡಾಂಬರು, ಕಾಂಕ್ರೀಟ್ ಮತ್ತು ಸ್ಲಾಬ್ ಗಳನ್ನು ತೆರವು ಮಾಡುವ ಕುರಿತ ಸರ್ಕಾರಿ ಆದೇಶವನ್ನೂ ಮುಖ್ಯಮಂತ್ರಿಗಳು ಇಂದು ಬಿಡುಗಡೆ ಮಾಡಿದರು.

ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಕಳೆದ ಮೇ 22ರಂದು ಅಪರ ಮುಖ್ಯ ಕಾರ್ಯದರ್ಶಿಯವರಿಗೆ ನೀಡಿದ ಲಿಖಿತ ಸೂಚನೆಯಲ್ಲಿ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದ ತೀರ್ಪಿನಂತೆ ರಾಜ್ಯದಲ್ಲಿ ರಸ್ತೆ ಬದಿಯಲ್ಲಿ ನೆಡಲಾಗಿರುವ ಎಲ್ಲ ವೃಕ್ಷಗಳ ಸುತ್ತ ಹಾಕಲಾಗಿರುವ ಕಾಂಕ್ರೀಟ್ ತೆರವುಗೊಳಿಸಲು ಸರ್ಕಾರಿ ಆದೇಶ ಹೊರಡಿಸಲು ತಿಳಿಸಿದ್ದರು. ಇದಕ್ಕೆ ಎಲ್ಲ ವೃಕ್ಷ ಪ್ರೇಮಿಗಳು, ಪರಿಸರವಾದಿಗಳು ಮುಕ್ತ ಪ್ರಶಂಸೆ ವ್ಯಕ್ತಪಡಿಸಿದ್ದರು. ಅದರಂತೆ ಇಲಾಖೆ ಅಧಿಕೃತ ಆದೇಶ ಹೊರಬಿದ್ದಿದ್ದು, ಮುಖ್ಯಮಂತ್ರಿಗಳೇ ಈ ಆದೇಶ ಅನಾವರಣ ಮಾಡಿರುವುದು ಸ್ಪಷ್ಟ ಸಂದೇಶ ನೀಡಿದೆ.

ಆಂದೋಲನ ಡೆಸ್ಕ್

Recent Posts

ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…

4 hours ago

ಹೈದರಾಬಾದ್‌ನಲ್ಲಿರುವ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಬಂಗಲೆಗೆ ಬೀಗ

ಹೈದರಾಬಾದ್:‌ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್‌ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…

8 hours ago

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ: ಮಾಜಿ ಸಿಎಂ ಯಡಿಯೂರಪ್ಪ ವಿಶ್ವಾಸ

ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…

9 hours ago

ಬೆಂಗಳೂರು| 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ: ವಿದೇಶಿ ಪ್ರಜೆ ಬಂಧನ

ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…

9 hours ago

ಕೋಲ್ಕತ್ತಾ: ಟೆನಿಸ್‌ ದಂತಕಥೆ ಲಿಯಾಂಡರ್‌ ಪೇಸ್‌ ಬಿಜೆಪಿ ಸೇರ್ಪಡೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್‌ ಐಕಾನ್‌ ಲಿಯಾಂಡರ್‌ ಪೇಸ್‌ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…

9 hours ago

ಖಾಸಗಿ ಶಾಲೆಗಳಿಂದ ಶುಲ್ಕ ಏರಿಕೆ: ಮಧ್ಯಮ ವರ್ಗದ ಪೋಷಕರಿಗೆ ಸಂಕಷ್ಟ

ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…

9 hours ago