ರಾಜ್ಯ

ಕಾಂಗ್ರೆಸ್‌ನಲ್ಲಿ ದೀಪಾವಳಿ ಧಮಾಕಾ ಪಕ್ಕಾ: ಬಿ.ವೈ.ವಿಜಯೇಂದ್ರ ಹೊಸ ಬಾಂಬ್‌

ಬೆಂಗಳೂರು: ಒಂದು ವೇಳೆ ಸಾಧ್ಯವಾದರೆ ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧವನ್ನಾದರೂ ನಿಲ್ಲಿಸಬಹುದು. ಕಾಂಗ್ರೆಸ್ ನಡುವೆ ನಡೆಯುತ್ತಿರುವ ಆಂತರಿಕ ಕಲಹವನ್ನು ಯಾವುದೇ ಕಾರಣಕ್ಕೂ ತಡೆಯಲು ಸಾಧ್ಯವಿಲ್ಲ. ದೀಪಾವಳಿ ಧಮಾಕಾ ಗ್ಯಾರಂಟಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೊಸ ಬಾಂಬ್ ಸಿಡಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ – ಡಿಸಿಎಂ ಮಧ್ಯೆ ಬಹಳಷ್ಟು ವ್ಯತ್ಯಾಸಗಳಿವೆ. ಒಂದು ವೇಳೆ ರಷ್ಯಾ ಉಕ್ರೇನ್ ಯುದ್ಧ ನಿಲ್ಲಬಹುದು. ಆದರೆ ಕಾಂಗ್ರೆಸ್ ಒಳಗಿನ ಅಂತರ್ ಯುದ್ಧ ನಿಲ್ಲುವುದಿಲ್ಲ. ಕಾಂಗ್ರೆಸ್‌ನಲ್ಲಿ ದೀಪಾವಳಿ ಧಮಾಕಾ ಪಕ್ಕಾ ಎಂದಿದ್ದಾರೆ.

ಕಾಂಗ್ರೆಸ್ ಮೂರ್ಖರ ಪಕ್ಷ. ಚುನಾವಣಾ ಆಯೋಗದ ಮೇಲೆ ಅನುಮಾನ ವ್ಯಕ್ತಪಡಿಸುವುದು ಮೂರ್ಖತನದ ಪರಮಾವಧಿ. ದಾಖಲೆ ಇದ್ದರೆ ನ್ಯಾಯಾಲಯಕ್ಕೆ ಕೊಡಲಿ ಎಂದು ಸವಾಲು ಹಾಕಿದ್ದಾರೆ. ಕಾಂಗ್ರೆಸ್‍ನ ಈ ರೀತಿ ಹುಚ್ಚಾಟ, ರಂಪಾಟ ಅಪಾಯಕಾರಿ ಬೆಳವಣಿಗೆ. ದೇಶದ ಜನರಲ್ಲಿ ಸಾಂವಿಧಾನಿಕ ಸಂಸ್ಥೆಗಳ ವಿರುದ್ಧ ಅನುಮಾನ ಮೂಡಿಸುವುದು ಅಕ್ಷಮ್ಯವಾಗಿದೆ ಎಂದು ಹೇಳಿದರು.

ನಮಗೆ ರ್ಯಾಲಿ ಅಥವಾ ಸಿಎಂ ಮನೆ ಮುತ್ತಿಗೆ ಹಾಕುತ್ತೇವೆ ಎಂದರೆ ಹೈಕೋರ್ಟ್ ಆದೇಶ ತೋರಿಸುತ್ತಾರೆ. ಪೊಲೀಸರ ಈ ಕಾನೂನು ಕಾಂಗ್ರೆಸ್‍ಗೂ ಅನ್ವಯ ಆಗಬೇಕು ಎಂದು ಪ್ರಶ್ನೆ ಮಾಡಿದರು. ನಮಗೊಂದು ಅವರಿಗೊಂದು ಕಾನೂನು ಇಲ್ಲ. ಅವರ ರ್ಯಾಲಿಗೆ ಅವಕಾಶ ಕೊಟ್ಟರೆ ನಾವು ಬೀದಿಗಿಳಿದು ಹೋರಾಟ ಮಾಡುತ್ತೇವೆ. ನೋಡೋಣ ಏನ್ ಮಾಡಬೇಕೆಂದು ಚರ್ಚೆ ಮಾಡುವುದಾಗಿ ಹೇಳಿದರು.

ರಾಹುಲ್ ಗಾಂಧಿ ಬರುವುದೇ ಅನುಮಾನ ಎಂದಿದ್ದಾರೆ. ಮೊದಲು ಅವರು ಬರಲಿ. ನಂತರ ಮುಂದಿನ ನಡೆ ಬಗ್ಗೆ ತೀರ್ಮಾನ ಮಾಡುತ್ತೇವೆ. ಕಾಂಗ್ರೆಸ್ ಮುಖಂಡರು ಆ.4ರಂದು ಅದೇನು ಕಡಿದು ಕಟ್ಟೆ ಹಾಕುತ್ತಾರೆಂದು ನಾವೂ ನೋಡುತ್ತೇವೆ ಎಂದು ವ್ಯಂಗ್ಯವಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸುತ್ತಿರುವ ಶಾಸಕರ ಹಾಗೂ ಸಚಿವರ ಸಭೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಆಹ್ವಾನ ನೀಡದಿರುವುದರ ಬಗ್ಗೆ ಪ್ರತಿಕ್ರಿಯಿಸಿದ ವಿಜಯೇಂದ್ರ, ಕಾಂಗ್ರೆಸ್‍ನಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಇದರಿಂದಲೇ ಸಾಬೀತಾಗಿದೆ ಎಂದರು.

ಆಂದೋಲನ ಡೆಸ್ಕ್

Recent Posts

ದಿಲ್ಲಿ ಗಣರಾಜ್ಯೋತ್ಸವಕ್ಕೆ ಬೆದರಿಕೆ : ಗುರುಪತ್ವಂತ್‌ ಸಿಂಗ್‌ ವಿರುದ್ಧ ಎಫ್‌ಐಆರ್‌

ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…

4 hours ago

ಕಾಡಾನೆಗಳ ಲಗ್ಗೆ : ಕಬ್ಬಿನ ಫಸಲು ನಾಶ, ಪರಿಹಾರಕ್ಕಾಗಿ ಒತ್ತಾಯ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…

5 hours ago

ಕೊಡಗಿನ ತಿತಿಮತಿಯಲ್ಲಿ ಹುಲಿ ಪ್ರತ್ಯಕ್ಷ ; ಸ್ಥಳೀಯರಲ್ಲಿ ಆತಂಕ

ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…

6 hours ago

ಖಾಸಗಿ ಶಾಲೆಗಳನ್ನು ನಾಚಿಸುವ ಹೈಟೆಕ್ ಸರ್ಕಾರಿ ಶಾಲೆ : ಆದರೆ ಮಕ್ಕಳ ದಾಖಲಾತಿ ಕೇವಲ 40!

ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…

6 hours ago

ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಜಾಗ ನೀಡುವಂತೆ ಸಿಎಂಗೆ ಪತ್ರ ಬರೆದಿದ್ದೇನೆ : ಎಚ್‌ಡಿಕೆ

ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…

6 hours ago

ರಾಜ್ಯವೇ ನನ್ನ ಪರಿಮಿತಿ, ಜನ ಬಯಸಿದ ಕಡೆ ಸ್ಪರ್ಧೆ : ಎಚ್‌.ಡಿ.ಕುಮಾರಸ್ವಾಮಿ

ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…

7 hours ago