Mysore
20
clear sky

Social Media

ಭಾನುವಾರ, 08 ಮಾರ್ಚ್ 2026
Light
Dark

ರಾಜ್ಯಕ್ಕೆ ದೀಪಾವಳಿ ಗಿಫ್ಟ್‌: 422 ಪಿಜಿ ಸೀಟುಗಳ ಸಂಖ್ಯೆ ಹೆಚ್ಚಳ ಎಂದ ಡಾ. ಶರಣ್ ಪ್ರಕಾಶ್ ಪಾಟೀಲ್

People need not worry about heart attacks Sharan Prakash Patil

ಬೆಂಗಳೂರು: 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 422 ಪಿಜಿ ಸೀಟುಗಳ ಸಂಖ್ಯೆ ಹೆಚ್ಚಳವಾಗಿದೆ. ಈ ಮೂಲಕ ಹಲವಾರು ವರ್ಷಗಳ ಬೇಡಿಕೆ ಈಗ ಈಡೇರಿದಂತಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಆರ್.ಪಾಟೀಲ್ ತಿಳಿಸಿದ್ದಾರೆ.

ಈ ಕುರಿತು ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವ ಶರಣ ಪ್ರಕಾಶ್‌ ಪಾಟೀಲ್‌ ಅವರು, ಈ ಕುರಿತು ಸಂಪೂರ್ಣ ಮಾಹಿತಿ ನೀಡಿದರು.

ಪ್ರೀ ಕ್ಲಿನಿಕಲ್‌, ಪ್ಯಾರಾ ಕ್ಲಿನಿಕಲ್‌ ಮತ್ತು ಕ್ಲಿನಿಕಲ್‌ ವಿಭಾಗಕ್ಕೆ ಒಟ್ಟು 422 ಪಿಜಿ ಸೀಟುಗಳನ್ನು ಹೆಚ್ಚಳ ಮಾಡಲಾಗಿದೆ. ಪೀಡಿಯಾಟ್ರಿಕ್ಸ್‌, ಅನಸ್ತೇಷಿಯಾ, ಫೋರೆನ್ಸಿಕ್‌ ಮೆಡಿಸಿನ್‌, ಮೈಕ್ರೊ ಬಯಲಾಜಿ ಸೇರಿದಂತೆ ಇಪ್ಪತ್ತಕ್ಕೂ ಹೆಚ್ಚು ವಿಭಾಗದಲ್ಲಿ ಪಿಜಿ ಸೀಟುಗಳನ್ನು ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು.

ಇದನ್ನು ಓದಿ : ದೀಪಾವಳಿ ಕೊಡುಗೆ ನೆಪದಲ್ಲಿ ಬೆಂಗಳೂರು ಜನರಿಗೆ ದೋಖಾ : ಎಚ್‌ಡಿಕೆ ಆರೋಪ

ಪ್ರತಿಬಾರಿಯಂತೆ ಈ ಬಾರಿಯೂ ಪಿಜಿ ಕೋರ್ಸ್‌ಗೆ ಬೇಡಿಕೆ ಇತ್ತು. ಪಿಜಿಯಲ್ಲಿ 572 ಸೀಟುಗಳನ್ನು ಮಂಜೂರು ಮಾಡಲು ನಾವು ಮನವಿ ಮಾಡಿದ್ದೆವು. ಇದರಲ್ಲಿ ನಮಗೆ 422 ಸೀಟು ಲಭ್ಯವಾಗಿವೆ. ಕಳೆದ ವರ್ಷ 1694 ಪಿಜಿ ಸೀಟು ಇದ್ದರೆ, ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ 422 ಸೀಟು ಹೆಚ್ಚಳ ಆಗಲಿದೆ. ಈ ವರ್ಷ ಒಟ್ಟು 2116 ಸೀಟು ವಿದ್ಯಾರ್ಥಿಗಳಿಗೆ ಸಿಗಲಿದೆ. ಇದು ವಿದ್ಯಾರ್ಥಿಗಳಿಗೆ ದೀಪಾವಳಿ ಕೊಡುಗೆ ಎಂದು ಸಂತಸ ವ್ಯಕ್ತಪಡಿಸಿದರು.

ಈಗಾಗಲೇ ರಾಜ್ಯಕ್ಕೆ 450 ವೈದ್ಯಕೀಯ ಸೀಟುಗಳನ್ನು ಹೆಚ್ಚಳ ಮಾಡಿ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‍ಎಂಸಿ) ಆದೇಶ ನೀಡಿದೆ. ಇದರ ಜೊತೆಗೆ ಇದೇ ಮೊದಲ ಬಾರಿಗೆ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಅನಿವಾಸಿ ಭಾರತೀಯರಿಗೆ ಶೇ.15ರಷ್ಟು ಕೋಟಾ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.

Tags:
error: Content is protected !!