People need not worry about heart attacks Sharan Prakash Patil
ಬೆಂಗಳೂರು: 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 422 ಪಿಜಿ ಸೀಟುಗಳ ಸಂಖ್ಯೆ ಹೆಚ್ಚಳವಾಗಿದೆ. ಈ ಮೂಲಕ ಹಲವಾರು ವರ್ಷಗಳ ಬೇಡಿಕೆ ಈಗ ಈಡೇರಿದಂತಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಆರ್.ಪಾಟೀಲ್ ತಿಳಿಸಿದ್ದಾರೆ.
ಈ ಕುರಿತು ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರು, ಈ ಕುರಿತು ಸಂಪೂರ್ಣ ಮಾಹಿತಿ ನೀಡಿದರು.
ಪ್ರೀ ಕ್ಲಿನಿಕಲ್, ಪ್ಯಾರಾ ಕ್ಲಿನಿಕಲ್ ಮತ್ತು ಕ್ಲಿನಿಕಲ್ ವಿಭಾಗಕ್ಕೆ ಒಟ್ಟು 422 ಪಿಜಿ ಸೀಟುಗಳನ್ನು ಹೆಚ್ಚಳ ಮಾಡಲಾಗಿದೆ. ಪೀಡಿಯಾಟ್ರಿಕ್ಸ್, ಅನಸ್ತೇಷಿಯಾ, ಫೋರೆನ್ಸಿಕ್ ಮೆಡಿಸಿನ್, ಮೈಕ್ರೊ ಬಯಲಾಜಿ ಸೇರಿದಂತೆ ಇಪ್ಪತ್ತಕ್ಕೂ ಹೆಚ್ಚು ವಿಭಾಗದಲ್ಲಿ ಪಿಜಿ ಸೀಟುಗಳನ್ನು ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು.
ಇದನ್ನು ಓದಿ : ದೀಪಾವಳಿ ಕೊಡುಗೆ ನೆಪದಲ್ಲಿ ಬೆಂಗಳೂರು ಜನರಿಗೆ ದೋಖಾ : ಎಚ್‌ಡಿಕೆ ಆರೋಪ
ಪ್ರತಿಬಾರಿಯಂತೆ ಈ ಬಾರಿಯೂ ಪಿಜಿ ಕೋರ್ಸ್‌ಗೆ ಬೇಡಿಕೆ ಇತ್ತು. ಪಿಜಿಯಲ್ಲಿ 572 ಸೀಟುಗಳನ್ನು ಮಂಜೂರು ಮಾಡಲು ನಾವು ಮನವಿ ಮಾಡಿದ್ದೆವು. ಇದರಲ್ಲಿ ನಮಗೆ 422 ಸೀಟು ಲಭ್ಯವಾಗಿವೆ. ಕಳೆದ ವರ್ಷ 1694 ಪಿಜಿ ಸೀಟು ಇದ್ದರೆ, ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ 422 ಸೀಟು ಹೆಚ್ಚಳ ಆಗಲಿದೆ. ಈ ವರ್ಷ ಒಟ್ಟು 2116 ಸೀಟು ವಿದ್ಯಾರ್ಥಿಗಳಿಗೆ ಸಿಗಲಿದೆ. ಇದು ವಿದ್ಯಾರ್ಥಿಗಳಿಗೆ ದೀಪಾವಳಿ ಕೊಡುಗೆ ಎಂದು ಸಂತಸ ವ್ಯಕ್ತಪಡಿಸಿದರು.
ಈಗಾಗಲೇ ರಾಜ್ಯಕ್ಕೆ 450 ವೈದ್ಯಕೀಯ ಸೀಟುಗಳನ್ನು ಹೆಚ್ಚಳ ಮಾಡಿ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‍ಎಂಸಿ) ಆದೇಶ ನೀಡಿದೆ. ಇದರ ಜೊತೆಗೆ ಇದೇ ಮೊದಲ ಬಾರಿಗೆ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಅನಿವಾಸಿ ಭಾರತೀಯರಿಗೆ ಶೇ.15ರಷ್ಟು ಕೋಟಾ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ನವದೆಹಲಿ: ಇಂಡಿಗೋ ವಿಮಾನಯಾನ ಸಂಸ್ಥೆಯಲ್ಲಿನ ಅವ್ಯವಸ್ಥೆಯಿಂದಾಗಿ ನೂರಾರು ವಿಮಾನಗಳು ರದ್ದಾಗಿದ್ದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಇಂದು ಕೇಂದ್ರ ಸರ್ಕಾರವನ್ನು ತರಾಟೆಗೆ…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪಂಚಾಯಿತಿ ವತಿಯಿಂದ ನಮಗೆ ಮಠ ಕಟ್ಟಿಸಿಕೊಡುವಂತೆ…
ಚಿತ್ರದುರ್ಗ: ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಲೇಔಟ್ ನಿರ್ಮಾಣ ಮಾಡುವ ವೇಳೆ ರೇಣುಕಾಸ್ವಾಮಿ…
ಬೆಂಗಳೂರು: ರಾಜ್ಯದಲ್ಲಿ ದ್ವೇಷ ಭಾಷಣ ಮಾಡಿದರೆ 3 ವರ್ಷ ಜೈಲು ಶಿಕ್ಷೆ ಫಿಕ್ಸ್ ಆಗಿದೆ. ವಿಧಾನಸಭೆಯಲ್ಲಿ ಇಂದು ಮಸೂದೆ ಮಂಡನೆ…
ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಚಿನ್ನಯ್ಯ ಆರೋಪಿಸಿದ್ದ ಹಿನ್ನೆಲೆಯಲ್ಲಿ ಎಸ್‌ಐಟಿ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದೆ. ಹಣದ…
ಬೆಳಗಾವಿ: ಗ್ಯಾರಂಟಿಗಳ ಬಗ್ಗೆ ಸಿಎಲ್‌ಪಿಯಲ್ಲಿ ಚರ್ಚೆಯೇ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಶಾಸಕರು…