ಮೈಸೂರು: ದೀಪಾವಳಿ ಹಬ್ಬದ ಸಮಯದಲ್ಲಿ ರಾತ್ರಿ ಪಟಾಕಿ ಸಿಡಿಸಲು ರಾಜ್ಯ ಸರ್ಕಾರ ಸಮಯ ನಿಗದಿಪಡಿಸಿದ್ದು, ರಾತ್ರಿ 8 ರಿಂದ 10 ಗಂಟೆಯ ನಡುವೆ ಮಾತ್ರ ಪಟಾಕಿ ಹೊಡೆಯಲು ಅವಕಾಶ ನೀಡಲಾಗಿದೆ.
ಸುಪ್ರೀಂ ಕೋರ್ಟ್ ತನ್ನ ಹಲವು ತೀರ್ಪುಗಳಲ್ಲಿ 125 ಡೆಸಿಬಲ್ ಗಿಂತ ಹೆಚ್ಚು ಶಬ್ದ ಮಾಡುವ ಮತ್ತು ಹೆಚ್ಚು ಹೊಗೆ ಹೊರಹೊಮ್ಮಿಸುವ ರಾಸಾಯನಿಕಯುಕ್ತ ಪಟಾಕಿಗಳನ್ನು ನಿಷೇಧಿಸಿದೆ. ಇದರ ಅನ್ವಯ ಮಾತ್ರ ಹಸಿರು ಪಟಾಕಿ ಸಿಡಿಸಲು ಸರ್ಕಾರ ಅವಕಾಶ ಕಲ್ಪಿಸಿದೆ. ವಾಯುಮಾಲಿನ್ಯ, ಶಬ್ದಮಾಲಿನ್ಯ ತಡೆಯಲು ಮತ್ತು ಹಿರಿಯ ನಾಗರಿಕರ, ಪುಟ್ಟ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಪಟಾಕಿ ತ್ಯಜಿಸಲು ಇಲ್ಲವೇ ಹಸಿರು ಪಟಾಕಿಗಳನ್ನು ಮಾತ್ರ ಉಪಯೋಗಿಸುವಂತೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಪಾಟಾಕಿಗಳು ಪರಿಸರಕ್ಕೆ ತೀವ್ರ ಹಾನಿ ಮಾಡುತ್ತವೆ. ಈ ನಿಟ್ಟಿನಲ್ಲಿ ಪ್ರಜ್ಞಾವಂತ ನಾಗರಿಕರು ಪರಿಸರಕ್ಕೆ ದಟ್ಟ ಹೊಗೆ ಸೇರಿಸುವ, ರಾಸಾಯನಿಕ ಹಾಗೂ ಭಾರ ಲೋಹಯುಕ್ತ ಪಟಾಕಿ ಬಳಸದಂತೆ ಅವರು ಮನವಿ ಮಾಡಿಕೊಂಡಿದ್ದಾರೆ. ಭಾರೀ ಶಬ್ದ ಮಾಡುವ ಪಟಾಕಿಗಳಿಂದ ಪಶು, ಪಕ್ಷಿ ಪ್ರಾಣಿ ಸಂಕುಲಗಳಿಗೆ ಕಿರಿಕಿರಿ ಉಂಟಾಗುತ್ತದೆ. ಹೀಗಾಗಿ ದೀಪದಿಂದ ದೀಪ ಹಚ್ಚಿ ಪರಿಸರಸ್ನೇಹಿ ದೀಪಾವಳಿ ಆಚರಿಸೋಣ ಎಂದು ಸಚಿವ ಈಶ್ವರ ಖಂಡ್ರೆ ಕರೆ ನೀಡಿದ್ದಾರೆ.
ಬೆಂಗಳೂರು: ಬಿಜೆಪಿ ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಬಂಧನಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ ಎನ್ನುವುದು ನನ್ನ ಅನುಮಾನ ಎಂದು…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ…
ಮಂಡ್ಯ: ಸಕ್ಕರೆ ನಾಡು ಮಂಡ್ಯ ನಗರಿಯಲ್ಲಿ ಮೂರು ದಿನಗಳ ಕಾಲ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು,…
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ,…
ಮಂಡ್ಯ: ರಾಜ್ಯದಲ್ಲಿ ಅತಿಭಾಷೆ ಹೆಚ್ಚು ಕನ್ನಡ ಭಾಷೆ ಮಾತನಾಡುವ ಸ್ಥಳ ಮಂಡ್ಯ ಜಿಲ್ಲೆ ಪ್ರಥಮ ಸ್ಥಾನದಲ್ಲಿದ್ದು, ಮೂರು ದಿನಗಳ ಕಾಲ…
ಬೆಳಗಾವಿ: ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಇಂದು ಮಧ್ಯಾಹ್ನ 3 ಗಂಟೆಗೆ ಮುಂದೂಡಲಾಗಿದೆ ಎಂದು…