Mysore
24
few clouds

Social Media

ಶುಕ್ರವಾರ, 27 ಮಾರ್ಚ್ 2026
Light
Dark

ಬಿಗ್‌ಬಾಸ್‌ ಬಂದ್‌ ಹಿಂದೆ ಡಿಕೆಶಿ ಕೈವಾಡವಿಲ್ಲ: ಸಚಿವ ಈಶ್ವರ್‌ ಖಂಡ್ರೆ ಸ್ಪಷ್ಟನೆ

Eshwara Khandre

ಬೆಂಗಳೂರು: ಬಿಗ್‌ಬಾಸ್‌ ಬಂದ್‌ ಹಿಂದೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಕೈವಾಡವಿಲ್ಲ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ್‌ ಖಂಡ್ರೆ ಸ್ಪಷ್ಟನೆ ನೀಡಿದ್ದಾರೆ.

ಜಾಲಿವುಡ್‌ ಸ್ಟುಡಿಯೋ ಬಂದ್‌ ಹಿಂದೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಕೈವಾಡವಿದೆ ಎಂಬ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅರಣ್ಯ ಇಲಾಖೆ ಸಚಿವ ಈಶ್ವರ್‌ ಖಂಡ್ರೆ ಅವರು, ಡಿಕೆಶಿ ಅವರ ನಟ್ಟು ಬೋಲ್ಟ್‌ ಟೀಕೆಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ.

ಇದನ್ನು ಓದಿ : ಬಿಗ್‌ಬಾಸ್‌ ಮನೆಗೆ ಬೀಗ: ಹೈಕೋರ್ಟ್‌ ಮೊರೆ ಹೋದ ಜಾಲಿವುಡ್‌ ಸ್ಟುಡಿಯೋಸ್‌

ಡಿ.ಕೆ.ಶಿವಕುಮಾರ್‌ ಹೇಳಿದ ಮಾತಿಗೆ ತಳುಕು ಹಾಕುವುದು ಸರಿಯಲ್ಲ. ಜಾಲಿವುಡ್‌ ಸ್ಟುಡಿಯೋ ಬಂದ್‌ ಹಿಂದೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಹಸ್ತಕ್ಷೇಪವಿಲ್ಲ ಎಂದು ಸ್ಪಷ್ಟಪಡಿಸಿದರು.

ಇನ್ನು ಸ್ಟುಡಿಯೋದವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಹೈಕೋರ್ಟ್‌ ತೀರ್ಪು ಬಂದ ಮೇಲೆ ತೀರ್ಮಾನ ಮಾಡಲಾಗುತ್ತದೆ. ಹೈಕೋರ್ಟ್‌ ಅನುಮತಿ ಪಡೆದು ಸ್ಟುಡಿಯೋ ನಡೆಸಲಿ. ಸ್ಟುಡಿಯೋ ಮಾಲೀಕರು ನೋಟಿಸ್‌ಗೆ ಕ್ಯಾರೆ ಎನ್ನದ ಹಿನ್ನೆಲೆಯಲ್ಲಿ ಬಂದ್‌ ಮಾಡಲಾಗಿದೆ ಎಂದು ಹೇಳಿದರು.

Tags:
error: Content is protected !!