ರಾಮನಗರ: ಕಾಂಗ್ರೆಸ್ ಹೈಕಮಾಂಡ್ ಹೇಳಿದರೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನ ತೊರೆಯಲು ಸಿದ್ದರಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಬಾಲಕೃಷ್ಣ ಹೇಳಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲು ಮಾಡಬೇಕೋ ಅಥವಾ ಬೇಡವೋ ಎಂಬುದರ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತದೆ. ಸೂಕ್ತ ವ್ಯಕ್ತಿಯನ್ನು ಗುರುತಿಸಿದರೆ ನಾವು ಸ್ವಾಗತ ಮಾಡುತ್ತೇವೆ ಎಂದು ಹೇಳಿದರು.
ಯಾವುದೇ ಷರತ್ತುಗಳ ಆಧಾರದ ಮೇಲೆ ಹೈಕಮಾಂಡ್ ಸ್ಥಾನ ಬಿಡುತ್ತಾರೆ ಎನ್ನುವುದು ಸುಳ್ಳು. ಹೈಕಮಾಂಡ್ ತೀರ್ಮಾನವೇ ಅಂತಿಮ. ಅವರ ನಿರ್ಧಾರಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಬದ್ದರಾಗಿರುತ್ತಾರೆ ಎಂದು ತಿಳಿಸಿದರು.




