ರಾಜ್ಯ

ಡಿಕೆ ಶಿವಕುಮಾರ್‌ ಸುಳ್ಳು ಫ್ಯಾಕ್ಟರಿಯ ಮೇಟಿ! : ಎಚ್‌ಡಿಕೆ ವಾಗ್ದಾಳಿ

ಬೆಂಗಳೂರು: ಮೇಕದಾಟು ಕ್ಯಾತೆ ಮತ್ತೆ ಮುನ್ನಲೆಗೆ ಬಂದಿದ್ದು, ಮಾಜಿ ಸಿಎಂ ಮತ್ತು ಡಿಸಿಎಂ ನಡುವೆ ಮತ್ತೆ ವಾಗ್ವಾದ ಮುಂದುವರೆದಿದೆ. ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಅವರು ಮೇಕೆದಾಟು ಸಂಬಂಧ ಡಿಸಿಎಂ ಡಿಕೆ ಶಿವಕುಮಾರ್‌ ಅವರ ಮೌನವನ್ನು ಪ್ರಶ್ನಿಸಿದ್ದಾರೆ.

ರಾಜಕೀಯಕ್ಕಾಗಿ ಚುನಾವಣೆಯನ್ನು ಬಳಿಸಿಕೊಳ್ಳುವ ನೀವು, ಅಧಿಕಾರದಲ್ಲಿದ್ದರು ಯಾಕೆ ಕೆಲಸ ಮಾಡುತ್ತಿಲ್ಲ. ಪ್ರಜೆಗಳು ನಿಮಗೆ ನೀಡಿರುವ ಪೆನ್ನು ಪೇಪರ್‌ ಹಿಡಿಯುವ ಶಕ್ತಿ ಕೇವಲ ೧೦ ತಿಂಗಳಿಗೆ ನಿಸ್ತೇಜವಾಯಿತೆ ಎಂದು ಖಾರವಾಗಿ ಟೀಕಿಸಿದ್ದಾರೆ.

ಮೇಕೆದಾಟು ಸಂಬಂಧ ಎಚ್‌ಡಿಕೆ ತಮ್ಮ ಎಕ್ಸ್‌ ಖಾತೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್‌ ಅವರಿಗೆ ಪ್ರಶ್ನೆಗಳ ಮಳೆಯನ್ನೇ ಸುರಿಸಿದ್ದಾರೆ.

ಎಚ್‌ಡಿಕೆ ಟ್ವೀಟ್‌ನಲ್ಲೇನಿದೆ?

ಅಧಿಕಾರ ಇರುವುದು ನಿಮ್ಮ(ಕಾಂಗ್ರೆಸ್‌) ಕೈಯ್ಯಲ್ಲಿ. ಜನ ಪೆನ್ನು-ಪೇಪರ್ ಕೊಟ್ಟಿರುವುದೂ ನಿಮಗೇ. ಕೆಲಸ ಮಾಡಿ ಎಂದರೆ ಹಳೆಯದನ್ನು ಕೆದಕುತ್ತಿದ್ದೀರಿ, ಯಾಕೆ? ಜನರು ಕೊಟ್ಟ ಪೆನ್ನು-ಪೇಪರ್ ಹಿಡಿದುಕೊಳ್ಳುವ ನಿಮ್ಮ ಶಕ್ತಿ ಕೇವಲ ಹತ್ತೇ ತಿಂಗಳಿಗೆ ನಿಸ್ತೇಜವಾಯಿತಾ ಡಿಕೆ ಶಿವಕುಮಾರ್‌ ಅವರೇ? ಕೈಲಾಗದೆ ಮೈ ಪರಚಿಕೊಳ್ಳುವುದು ಎಂದರೆ ಇದೆ ಅಲ್ಲವೇ? ಎಂದು ವಾಗ್ದಾಳಿ ನಡೆಸಿದ್ದಾರೆ.

ಅಧಿಕಾರ ಇದ್ದಾಗಲೇ ಕುಮಾರಸ್ವಾಮಿ ಅವರು ಮೇಕೆದಾಟು ಮಾಡಲಿಲ್ಲ ಎಂದು ಹೇಳಿದ್ದೀರಿ! ಕುಮಾರಸ್ವಾಮಿ ಏನೂ ಮಾಡಿಯೇ ಇಲ್ಲವೆಂದು ಕಟ್ಟುಕಥೆ ಕಟ್ಟಿದ್ದೀರಿ. ಎಷ್ಟಾದರೂ ನೀವು ಸುಳ್ಳು ಫ್ಯಾಕ್ಟರಿಯ ಮೇಟಿ! ಮೇಕೆದಾಟುಗಾಗಿ ನಾನು ಏನೆಲ್ಲಾ ಮಾಡಿದೆ ಎನ್ನುವುದು ನಿಮಗೇಗೆ ಗೊತ್ತಾದೀತು? ಸತ್ಯಕ್ಕೂ ನಿಮಗೂ ಎಣ್ಣೆಶೀಗೇಕಾಯಿ ಸಂಬಂಧ! ಹೌದಲ್ಲವೇ?

ಮೇಕೆದಾಟು ನಿರ್ಮಾಣಕ್ಕೆ 2018-19ರಲ್ಲೇ ಸಮಗ್ರ ಯೋಜನಾ ವರದಿ (DPR) ಯನ್ನು ಕೇಂದ್ರಕ್ಕೆ ಸಲ್ಲಿಸಿದ್ದು ಅಂದಿನ ನನ್ನ ಸರಕಾರ. ಆ ಸರಕಾರದಲ್ಲಿ ನೀವು ಸಚಿವರಿದ್ದಿರಿ. ಈ ಮಾಹಿತಿಯೇ ನಿಮಗಿಲ್ಲವೆಂದರೆ ಹೇಗೆ? ಇದೆಂಥಾ ಹತವಿಧಿ!? ಹಾಗಾದರೆ, ಜನರು ಕೊಟ್ಟ ಪೆನ್ನು-ಪೇಪರ್ ಗತಿ ಏನು? ಎಂದು ಪ್ರಶ್ನಿಸಿದ್ದಾರೆ.

2006-2007ರಲ್ಲೇ ಮಹಾದಾಯಿ ಯೋಜನೆಗೆ ಸಂಪುಟದಲ್ಲಿಯೇ ಒಪ್ಪಿಗೆ ನೀಡಿ, ₹100 ಕೋಟಿ ಮಂಜೂರು ಮಾಡಿ ಆಗಲೇ ಶಂಕುಸ್ಥಾಪನೆಯನ್ನೂ ನೆರವೇರಿಸಲಾಯಿತು. ಆಮೇಲೆ 5 ವರ್ಷ ನಿಮ್ಮದೇ ಕಾಂಗ್ರೆಸ್‌ ಸರ್ಕಾರ ಇತ್ತಲ್ಲಾ..? ಏನ್ ಮಾಡ್ತಾ ಇದ್ದಿರಿ ಶಿವಕುಮಾರ್ ಅವರೇ? ಆಗ ಯಾಕೆ ತಾವು ನುಡಿದಂತೆ ನಡೆಯಲಿಲ್ಲ. ಮೇಕೆದಾಟು, ಮಹದಾಯಿ ಸೇರಿ ರಾಜ್ಯದ ನೀರಾವರಿ ಯೋಜನೆಗಳಿಗಾಗಿ ನಾನು ಮುಖ್ಯಮಂತ್ರಿಯಾಗಿ ಆಯಾ ಇಲಾಖೆಯ ಕೇಂದ್ರ ಸಚಿವರನ್ನು ಎಷ್ಟು ಸಲ ಭೇಟಿಯಾಗಿದ್ದೆ ಎನ್ನುವ ಮಾಹಿತಿಯೂ ನಿಮಗಿಲ್ಲವಲ್ಲ? ನಿತಿನ್ ಗಡ್ಕರಿ ಅವರೊಬ್ಬರನ್ನೇ ನಾನು 10 ಸಲ ಭೇಟಿಯಾಗಿದ್ದೆ. 90ರ ಇಳಿವಯಸ್ಸಿನಲ್ಲಿಯೂ ಶ್ರೀ ದೇವೇಗೌಡರು ಸಂಸತ್ತಿನ ಒಳ-ಹೊರಗೆ ರಾಜ್ಯಕ್ಕಾಗಿ ಅವಿರತವಾಗಿ ಹೋರಾಡುತ್ತಿದ್ದಾರೆ. ಸಂಸತ್ ಅಧಿವೇಶನದಲ್ಲಿ ಅವರು ಮೇಕೆದಾಟು ಬಗ್ಗೆ ದನಿ ಎತ್ತಿದರೆ, ರಾಜ್ಯದವರೇ ಆದ ನಿಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಮೌನವ್ರತ ಮಾಡುತ್ತಿದ್ದರು! ನಿಮ್ಮ ಪಕ್ಷದ ಉಳಿದ ಸದಸ್ಯರು ನಿಮ್ಮ ಅಧ್ಯಕ್ಷರು ಮಾಡಿದ್ದನ್ನೇ ಚಾಚೂ ತಪ್ಪದೇ ಪಾಲಿಸುತ್ತಿದ್ದರು.

ಆದರೆ, ಕಾಂಗ್ರೆಸ್, ಡಿಎಂಕೆ ಅಣ್ತಮ್ಮ ಪಕ್ಷಗಳಲ್ಲವೇ? ಮೇಕೆದಾಟು ಮಾಡಲು ಕರ್ನಾಟಕದವರಿಗೆ ಬಿಡೋದೇ ಇಲ್ಲ ಎಂದು ಡಿಎಂಕೆ ಚುನಾವಣೆ ಪ್ರಣಾಳಿಕೆಯಲ್ಲೇ ಘೋಷಣೆ ಮಾಡಿದೆ. ಇದಕ್ಕೂ ನಿಮ್ಮದು, ನಿಮ್ಮ ಪಕ್ಷದ್ದು ‘ಮೌನಂ ಶರಣಂ ಗಚ್ಛಾಮಿ!!’ ನಿಮ್ಮ ಸರಕಾರದಲ್ಲಿ ಏನೇನ್ ನಡೀತಿದೆ ಶಿವಕುಮಾರ್ ಅವರೇ? ಪೆನ್ನು ಪೇಪರ್ ಕೂಡ ‘ಮೌನಂ ಶರಣಂ ಗಚ್ಛಾಮಿ’ ಎನ್ನುತ್ತಿವೆಯಾ.. ಹೇಗೆ? ಎಂದು ಆಕ್ರೋಶ ಹೊರಹಾಕಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಪರ್ಯಾಯ ವ್ಯವಸ್ಥೆ ಕಲ್ಪಿಸಿ ಫುಟ್‌ಪಾತ್ ವ್ಯಾಪಾರಿಗಳನ್ನು ತೆರವುಗೊಳಿಸಿ

ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…

5 hours ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಂವಹನ ಕೊರತೆಯಿಂದ ಪಟ್ಟಕ್ಕೆ ಕುತ್ತು

ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…

5 hours ago

ಚಾಮರಾಜೇಶ್ವರ ರಥೋತ್ಸವಕ್ಕೆ ದ್ವಿಶತಮಾನದ ನವೋತ್ಸಾಹ

ಸಿ.ಎಂ.ನರಸಿಂಹಮೂರ್ತಿ  ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…

5 hours ago

ಕೆ.ಆರ್.ಪೇಟೆ: ಶೇ.19ರಷ್ಟು ಮಳೆ ಕೊರತೆ

ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…

5 hours ago

ಯುಜಿ, ಎಬಿ ಕೇಬಲ್ ಅಳವಡಿಕೆಯೊಂದೇ ಪರಿಹಾರ

ನವೀನ್ ಡಿಸೋಜ ಕೊಡಗಿನಲ್ಲಿ ಮಳೆಗಾಲದಲ್ಲಿ ಎದುರಾಗುವ ವಿದ್ಯುತ್ ಸಮಸ್ಯೆ; ಶಾಶ್ವತ ಪರಿಹಾರಕ್ಕೆ ಬೇಕಿದೆ ಬಹುದೊಡ್ಡ ಮೊತ್ತ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…

5 hours ago

ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಹಣ ವಸೂಲಿ ದಂಧೆ?

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಕರ್ನಾಟಕ-ಕೇರಳ ಗಡಿಭಾಗದಲ್ಲಿರುವ ಬಂಡೀಪುರ ಸಮೀಪದ ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಸರಕು ಸಾಗಣೆ ವಾಹನಗಳಿಂದ ಅಕ್ರಮವಾಗಿ ಹಣ ವಸೂಲಿ…

6 hours ago